ಶೇಂಗಾ ಹೋಳಿಗೆ ತಿಂದು ಮೀಸಲಾತಿ ಹೋರಾಟ ನಿಲ್ಲಿಸಿದ ಪಂಚಮಸಾಲಿ ಜಗದ್ಗುರು ಬಸವ ಜಯಮೃತ್ಯುಂಜಯ ಶ್ರೀ

|

Updated on: Mar 15, 2021 | 1:22 PM

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಕಳೆದ 64 ದಿನಗಳಿಂದ ನಡೆಸಲಾಗುತ್ತಿದ್ದ ಹೋರಾಟವನ್ನು ಪಂಚಮಸಾಲಿ ಜಗದ್ಗುರು ಬಸವ ಜಯಮೃತ್ಯುಂಜಯ ಶ್ರೀ ಶೇಂಗಾ ಹೋಳಿಗೆ ತಿನ್ನಿಸಿ, ರಾಷ್ಟ್ರಗೀತೆ ಹಾಡುವ ಮೂಲಕ ಅಂತ್ಯಗೊಳಿಸಿದ್ದಾರೆ.

ಶೇಂಗಾ ಹೋಳಿಗೆ ತಿಂದು ಮೀಸಲಾತಿ ಹೋರಾಟ ನಿಲ್ಲಿಸಿದ ಪಂಚಮಸಾಲಿ ಜಗದ್ಗುರು ಬಸವ ಜಯಮೃತ್ಯುಂಜಯ ಶ್ರೀ
ಪಂಚಮಸಾಲಿ ಸಮುದಾಯದ ಶ್ರೀಗಳು
Follow us on

ಬೆಂಗಳೂರು: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಕಳೆದ 64 ದಿನಗಳಿಂದ ನಡೆಸಲಾಗುತ್ತಿದ್ದ ಹೋರಾಟವನ್ನು ಪಂಚಮಸಾಲಿ ಜಗದ್ಗುರು ಬಸವ ಜಯಮೃತ್ಯುಂಜಯ ಶ್ರೀ ಅವರು ಶೇಂಗಾ ಹೋಳಿಗೆ ತಿನ್ನಿಸಿ, ರಾಷ್ಟ್ರಗೀತೆ ಹಾಡುವ ಮೂಲಕ ಅಂತ್ಯಗೊಳಿಸಿದ್ದಾರೆ. ಇಂದು ಬೆಳಗ್ಗೆ ಸದನದಲ್ಲಿ ಮಾತನಾಡಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಒದಗಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಮುದಾಯದ ಸ್ವಾಮೀಜಿಗಳು ಆರು ತಿಂಗಳ ಕಾಲ ಹೋರಾಟವನ್ನು ಸ್ಥಗಿತಗೊಳಿಸಬೇಕೆಂದು ಮನವಿ ಮಾಡಿದ್ದರು. ಅದಾದ ಕೆಲವೇ ಗಂಟೆಗಳಲ್ಲಿ ಪಂಚಮಸಾಲಿ ಸಮುದಾಯದ ಶ್ರೀಗಳು ಹೋರಾಟವನ್ನು ನಿಲ್ಲಿಸುವ ನಿರ್ಧಾರ ಕೈಗೊಂಡಿದ್ದು, ಬರೋಬ್ಬರಿ ಎರಡು ತಿಂಗಳಿಗೂ ದೀರ್ಘಕಾಲದ ಹೋರಾಟಕ್ಕೆ ಅಂತ್ಯ ಹಾಡಿದ್ದಾರೆ.

ಸದನ ಆರಂಭವಾಗುತ್ತಿದ್ದಂತೆಯೇ ಪ್ರಶ್ನೋತ್ತರ ಅವಧಿಯ ನಡುವೆಯೂ ಪಂಚಮಸಾಲಿ ಸಮುದಾಯದ ವಿಚಾರವನ್ನು ಪ್ರಸ್ತಾಪಿಸಿದ ಬಸನಗೌಡ ಪಾಟೀಲ್​ ಯತ್ನಾಳ್​ ಮುಖ್ಯಮಂತ್ರಿಗಳಿಂದ ಉತ್ತರ ಅಪೇಕ್ಷಿಸಿದರು. ಈ ವೇಳೆ ಪ್ರತ್ಯುತ್ತರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮೀಸಲಾತಿ ವಿಚಾರವಾಗಿ ಆರೇಳು ತಿಂಗಳಲ್ಲಿ ಹಿಂದುಳಿದ ವರ್ಗದ ಆಯೋಗದ ವರದಿ, ಸಮಿತಿ ವರದಿ ಕೊಡಲು ಹೇಳುತ್ತೇವೆ, ನಂತರ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಸ್ವಾಮೀಜಿಗಳು ಧರಣಿ ವಾಪಸ್ ಪಡೆಯಬೇಕು ಎಂದು ಕೇಳಿಕೊಂಡಿದ್ದರು.

ಇದನ್ನೂ ಓದಿ:
ಆರು ತಿಂಗಳ ತನಕ 2ಎ ಮೀಸಲಾತಿ ಹೋರಾಟ ಸ್ಥಗಿತಗೊಳಿಸಿ: ಪಂಚಮಸಾಲಿ ಸಮುದಾಯದ ಸ್ವಾಮೀಜಿಗಳಿಗೆ ಯತ್ನಾಳ್​ ಮನವಿ

Published On - 1:15 pm, Mon, 15 March 21