ಬೊಮ್ಮಾಯಿ ಸರ್ಕಾರಕ್ಕೆ ಕೊನೆಯ ಡೆಡ್​ಲೈನ್ ಕೊಟ್ಟ ಬಸವ ಜಯಮೃತ್ಯುಂಜಯ ಸ್ವಾಮೀಜಿ

2ಎ ಮೀಸಲಾತಿಗಾಗಿ ಕೂಡಲಸಂಗಮದ ಪಂಚಮಸಾಲಿಪೀಠದ ಬಸವ ಜಯಮೃತ್ಯುಂಜಯಶ್ರೀ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಖಡಕ್​ ಎಚ್ಚರಿಕೆ ನೀಡಿದ್ದಾರೆ.

ಬೊಮ್ಮಾಯಿ ಸರ್ಕಾರಕ್ಕೆ ಕೊನೆಯ ಡೆಡ್​ಲೈನ್ ಕೊಟ್ಟ ಬಸವ ಜಯಮೃತ್ಯುಂಜಯ ಸ್ವಾಮೀಜಿ
ಬಸವ ಜಯ ಮೃತ್ಯುಂಜಯ ಸ್ವಾಮೀಜಿ (ಸಂಗ್ರಹ ಚಿತ್ರ)
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 13, 2022 | 3:22 PM

ಬೆಂಗಳೂರು: ಎಸ್​ಸಿ ಹಾಗೂ ಎಸ್​ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ತೀರ್ಮಾನಿಸಿದ ಬೆನ್ನಲ್ಲೇ ಇದೀಗ ಪಂಚಮಸಾಲಿಗೆ 2ಎ ಮೀಸಲಾತಿ ನೀಡಲೇಬೇಕೆಂದು ಬಸವ ಜಯಮೃತ್ಯುಂಜಯಶ್ರೀ ಸರ್ಕಾರಕ್ಕೆ ಮತ್ತೆ ಗಡುವು ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಅಕ್ಟೋಬರ್ 13) ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಅ.21ರೊಳಗೆ 2ಎ ಮೀಸಲಾತಿ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು. ಇಲ್ಲದಿದ್ದರೆ ಅ.21ರಂದು ಹುಕ್ಕೇರಿಯಲ್ಲಿ ಪಂಚಮಸಾಲಿ ಸಮುದಾಯದಿಂದ ಬೃಹತ್ ಸಮಾವೇಶ ನಡೆಸಲಾಗುತ್ತೆ ಎಂದು ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಮೃತ್ಯುಂಜಯ ಸ್ವಾಮೀಜಿ ಹಾಗೂ ಭಕ್ತರಿಂದ ಜೀವ ಬೆದರಿಕೆ: ಬಹಿರಂಗ ಕ್ಷಮೆಯಾಚಿಸಿದ ಮಾಜಿ MLC

2ಎ ಮೀಸಲಾತಿಗೆ ಕಳೆದ 2 ವರ್ಷಗಳಿಂದ ನಿರಂತರ ಹೋರಾಟ ಮಾಡುತ್ತಿದ್ದೇವೆ. ಈವರೆಗೆ ನಮ್ಮ ಹೋರಾಟಕ್ಕೆ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಸೆ.15ರೊಳಗೆ ಮೀಸಲಾತಿ ಘೋಷಿಸಲಾಗುತ್ತೆ ಅಂತ ಬಿಎಸ್​ವೈ ಹೇಳಿದ್ರು. ಆದ್ರೆ ಈ ಸಮಯದವರೆಗೆ ಯಡಿಯೂರಪ್ಪನವರು ಇರಲಿಲ್ಲ. ಅದಾದ ಬಳಿಕ ಬೊಮ್ಮಾಯಿಯವರಿಗೆ ಹಲವು ಭಾರೀ ಮನವಿ ನೀಡಿದ್ದೇವೆ. ಆದರೆ ಯಾವುದೇ ಪ್ರತಿಕ್ರಿಯೆ ಬೊಮ್ಮಾಯಿ ಸರ್ಕಾರದಿಂದ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಷ್ಟರೊಳಗೆ ಸರ್ಕಾರ ಸರ್ವಪಕ್ಷಗಳ ಸಭೆ ನಡೆಸಿ ಮೀಸಲಾತಿ ಬಗ್ಗೆ ಘೋಷಣೆ ಮಾಡಲಿ. ಹುಕ್ಕೇರಿಯಲ್ಲಿ 2ಎ ಮೀಸಲಾತಿಗಾಗಿ ಆಗ್ರಹಿಸಿ ಬೃಹತ್ ಹೋರಾಟ ಮಾಡಲಾಗುತ್ತೆ. ರಾಜ್ಯದ ಮೂಲೆಮೂಲೆಗಳಿಂದ ಅ.21ರಂದು ಸುಮಾರು 3 ಲಕ್ಷ ಜನ ಭಾಗಿಯಾಗಲಿದ್ದಾರೆ ಎಂದರು.

ಸರ್ವ ಪಕ್ಷಗಳ ಸಭೆ ಕರೆದು ಹೋರಾಟಕ್ಕೆ ನ್ಯಾಯ ಕೊಡಿಸಿ. ಮೀಸಲಾತಿ ಕೊಡ್ತೀನಿ ಅಂದ್ರೆ ಯಾವಾಗ ಕೊಡ್ತೀರಿ ಅಂತ ಹೇಳಿ ಕೊಡೊಲ್ಲ ಅಂದ್ರೆ ಅದನ್ನಾದ್ರೂ ಸ್ಪಷ್ಟವಾಗಿ ತಿಳಿಸಿ ಎಂದು ಹೇಳಿದರು.

ಪಂಚಮಸಾಲಿ ಸಮುದಾಯದ ನಿರಂತರ ಹೋರಾಟಕ್ಕೆ ಸ್ಪಂದಿಸಿ. ಅಕ್ಟೋಬರ್ 21ರೊಳಗೆ ಸ್ಪಷ್ಟವಾದ ನಿಲುವನ್ನ ತಿಳಿಸಿ. ಇಲ್ಲವಾದ್ರೆ 25 ಲಕ್ಷಕ್ಕೂ ಹೆಚ್ಚು ಸಮುದಾಯದ ಜನ ಬೃಹತ್ ಹೋರಾಟ ಮಾಡ್ತೀವಿ. ಅಂತಿಮ ಹೋರಾಟವಾಗಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಹೋರಾಟದ ದಿನಾಂಕವನ್ನ ಅ.21ರಂದೇ ತಿಳಿಸುತ್ತೇವೆ. ನಾವು ಹೋರಾಟದ ದಿನಾಂಕ ಘೋಷಣೆ ಮಾಡಿದ್ರೆ ಯಾವುದೇ ಕಾರಣಕ್ಕೂ ಬದಲಿಸೋದಿಲ್ಲ ಎಂದು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಹರಿಹರ ಮಾಜಿ ಶಾಸಕ ಎಚ್.ಎಸ್ ಶಿವಶಂಕರ, ಗೌಡ ಲಿಂಗಾಯತ ಪಂಚಮಸಾಲಿ ರಾಜ್ಯ ಸಂಚಾಲಕ ಅಂಮನಪುರ ಮಲ್ಲೇಶ್ ಉಪಸ್ಥಿತರಿದ್ದರು.

Published On - 3:22 pm, Thu, 13 October 22

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ