ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ಉತ್ತರ ಕರ್ನಾಟಕದ ಲಿಂಗಾಯತರಿಗೆ ಸ್ಥಾನ ಕೊಡಲಿ: ಬಸವಜಯಮೃತ್ಯುಂಜಯ ಸ್ವಾಮೀಜಿ

ಒಂದು ವೇಳೆ ಸಿಎಂ ಬದಲಾವಣೆ ಮಾಡೋದಾದರೆ ಉತ್ತರ ಕರ್ನಾಟಕದವರಿಗೆ ಆದ್ಯತೆ ನೀಡಿ. ಅದರಲ್ಲೂ ಲಿಂಗಾಯತರನ್ನೇ ಸಿಎಂ ಮಾಡಿ ಎಂದು ಒತ್ತಾಯ ಮಾಡಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ಉತ್ತರ ಕರ್ನಾಟಕದ ಲಿಂಗಾಯತರಿಗೆ ಸ್ಥಾನ ಕೊಡಲಿ: ಬಸವಜಯಮೃತ್ಯುಂಜಯ ಸ್ವಾಮೀಜಿ
ಬಸವ ಜಯಮೃತ್ಯುಂಜಯ ಶ್ರೀ
TV9kannada Web Team

| Edited By: ganapathi bhat

Jun 21, 2021 | 8:31 PM

ವಿಜಯಪುರ: ರಾಜ್ಯದಲ್ಲೇನಾದರೂ ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ, ವಿಶೇಷವಾಗಿ ಉತ್ತರ ಕರ್ನಾಟಕದ ಲಿಂಗಾಯತರಿಗೆ ಮುಖ್ಯಮಂತ್ರಿ ಸ್ಥಾನ ಕೊಡಲಿ ಎಂದು ಮುದ್ದೇಬಿಹಾಳದಲ್ಲಿ ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಕಳೆದ ಕೆಲವಾರು ದಿನಗಳಿಂದ ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ಇತ್ಯಾದಿ ವಿಷಯಗಳು ಚರ್ಚೆಯಲ್ಲಿವೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಹೀಗೆ ತಿಳಿಸಿದ್ದಾರೆ.

ಆದರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬದಲಾವಣೆ ವಿಚಾರದಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠ ತಟಸ್ಥವಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ಹೇಳಿದ್ದಾರೆ. ಒಂದು ವೇಳೆ ಸಿಎಂ ಬದಲಾವಣೆ ಮಾಡೋದಾದರೆ ಉತ್ತರ ಕರ್ನಾಟಕದವರಿಗೆ ಆದ್ಯತೆ ನೀಡಿ. ಅದರಲ್ಲೂ ಲಿಂಗಾಯತರನ್ನೇ ಸಿಎಂ ಮಾಡಿ ಎಂದು ಒತ್ತಾಯ ಮಾಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರು, ಸರಕಾರ ಉತ್ತಮ ರೀತಿಯಿಂದ ಕೆಲಸ ಮಾಡಿದೆ. ಯಡಿಯೂರಪ್ಪ ಕೂಡ ಉತ್ತಮ ಕೆಲಸ ನಿರ್ವಹಿಸಿದ್ದಾರೆ. ಜೆಡಿಎಸ್ ಪಕ್ಷ ಕ್ವಾರಂಟೈನ್​ನಲ್ಲಿ ಇದ್ದರೆ, ಇತ್ತ ಕಾಂಗ್ರೆಸ್ ಪಕ್ಷ ಕೇವಲ ಕಚ್ಚಾಟದಲ್ಲಿ ತೊಡಗಿಕೊಂಡಿದೆ. ಸಂಕಷ್ಟದಲ್ಲಿ ಇರುವವರಿಗೆ ನೆರವಾಗುವ ನಿಟ್ಟಿನಲ್ಲಿ ಪಕ್ಷವು ‘ಸೇವಾ ಹೀ ಸಂಘಟನ್’ ಮೂಲಕ ಅತ್ಯುತ್ತಮ ಕಾರ್ಯನಿರ್ವಹಿಸಿದೆ ಎಂದು ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದ ಅರುಣ್ ಸಿಂಗ್ ವಿವರಿಸಿದ್ಧರು.

ಮುಖ್ಯಮಂತ್ರಿ ಬದಲಾವಣೆ ಇಲ್ಲ. ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದರು. ಆ ಮೂಲಕ, ಕಳೆದ ಕೆಲವು ದಿನಗಳಿಂದ ಉಂಟಾಗಿರುವ ಗೊಂದಲಗಳಿಗೆ ತೆರೆ ಎಳೆದಿದ್ದರು. ಇದಕ್ಕೂ ಮೊದಲು, ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಕೊವಿಡ್ ಸಂಕಷ್ಟದ ಸಂದರ್ಭದಲ್ಲಿ ಬಿಜೆಪಿ ಸೂಕ್ತ ರೀತಿಯಲ್ಲಿ ಕೆಲಸ ಮಾಡಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದವರು ಜನಸೇವೆ ಮಾಡಿಲ್ಲ. ಜನರು ಅದನ್ನು ಗಮನಿಸುತ್ತಾರೆ ಎಂದು ಹೇಳಿದ್ದರು.

ಇದನ್ನೂ ಓದಿ: ಮುಖ್ಯಮಂತ್ರಿ ಬದಲಾವಣೆ ಇಲ್ಲ, ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ

ಯಡಿಯೂರಪ್ಪ, ಮಗ ಸೇರಿಕೊಂಡು ಲೂಟಿ ಮಾಡುತ್ತಿದ್ದಾರೆ; ಇದನ್ನು ಬಿಜೆಪಿ ನಾಯಕರೇ ಹೇಳುತ್ತಿದ್ದಾರೆ: ಸಿದ್ದರಾಮಯ್ಯ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada