ಚಿಕ್ಕಮಗಳೂರು: ಚುನಾವಣೆಗೆ ಬಹಿಷ್ಕಾರ ಹಾಕಿದ ನಾಲ್ಕು ಗ್ರಾಮ ಪಂಚಾಯಿತಿಗಳು
ನಾಮಪತ್ರ ಸಲ್ಲಿಸಿದವರ ಮನೆ ಮುಂದೆ ಧರಣಿ ಮಾಡಲಾಗುವುದು, ನಾಮಪತ್ರ ಸಲ್ಲಿಸಿದರೆ __ ಹಾಕಿ ಸನ್ಮಾನ ಎಂಬ ಬ್ಯಾನರ್ಗಳು ಸಾರ್ವಜನಿಕ ಸ್ಥಳಗಳಲ್ಲಿ ರಾರಾಜಿಸುತ್ತಿವೆ.
ಚಿಕ್ಕಮಗಳೂರು: ಜಿಲ್ಲೆಯ ಖಾಂಡ್ಯ ಹೋಬಳಿಯ ನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಂಡ್ಯ ನಾಗರಿಕ ಹಿತರಕ್ಷಣಾ ವೇದಿಕೆ ಗ್ರಾ.ಪಂ. ಚುನಾವಣಾ ಬಹಿಷ್ಕಾರಕ್ಕೆ ಕರೆ ಕೊಟ್ಟಿದೆ.
ನಾಮಪತ್ರ ಸಲ್ಲಿಸಿದವರ ಮನೆ ಮುಂದೆ ಧರಣಿ ಮಾಡಲಾಗುವುದು, ನಾಮಪತ್ರ ಸಲ್ಲಿಸಿದರೆ __ ಹಾಕಿ ಸನ್ಮಾನ ಎಂಬ ಬ್ಯಾನರ್ಗಳು ಸಾರ್ವಜನಿಕ ಸ್ಥಳಗಳಲ್ಲಿ ರಾರಾಜಿಸುತ್ತಿವೆ.
ಮನೆ ಮುಂದೆ ಪ್ರತಿಭಟನೆಯ ಎಚ್ಚರಿಕೆ.. ಹುಲಿ ಯೋಜನೆ, ಕಸ್ತೂರಿ ರಂಗನ್ ವರದಿ ಮತ್ತು ಪರಿಸರ ಸೂಕ್ಷ್ಮ ವಲಯದ ವಿರುದ್ಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕಡವಂತಿ, ಹುಯಿಗೆರೆ, ದೇವದಾನ, ಬಿದರೆ ಗ್ರಾ.ಪಂಗಳಲ್ಲಿ ಯಾರೂ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ಬಹಿಷ್ಕಾರ ಹಾಕಲಾಗಿದೆ. ಆಕಾಂಕ್ಷಿಗಳು ಆನ್ಲೈನ್ನಲ್ಲಿ ನಾಮಪತ್ರ ಸಲ್ಲಿಸಿದರೂ ಮನೆ ಮುಂದೆ ಪ್ರತಿಭಟನೆ ಮಾಡುವುದಾಗಿ ಹಿತರಕ್ಷಣಾ ವೇದಿಕೆ ತಿಳಿಸಿದೆ.
ಈಗಾಗಲೇ ಮಲೆನಾಡಿಗರ ಬದುಕಿನ ಮೇಲೆ ಹುಲಿ ಯೋಜನೆ, ಬಫರ್ ಜ್ಹೋನ್, ಕಸ್ತೂರಿ ರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮ ವಲಯದ ತೂಗುಗತ್ತಿ ತೂಗುತ್ತಿದೆ. ಸರ್ಕಾರದ ಈ ಯೋಜನೆಗಳಿಂದ ಮಲೆನಾಡು ಭಾಗದ ನೂರಾರು ಗ್ರಾಮಗಳೇ ಕಣ್ಮರೆಯಾಗಲಿವೆ. ಹೀಗಾಗಿ, ಚುನಾವಣೆಯ ಅವಶ್ಯಕತೆಯಿಲ್ಲ ಎಂದು ಪ್ರತಿ ಬೂತ್ನಲ್ಲೂ ಬ್ಯಾನರ್ ಕಟ್ಟಲಾಗಿದೆ.
ಇದನ್ನೂ ಓದಿ: ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್.. ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ