ಪಂಚಮಸಾಲಿ 2ಎ ಮೀಸಲಾತಿ ಹೋರಾಟದಲ್ಲಿ ಬಿರುಕು: ಸ್ವಾಮೀಜಿ ನಡೆಗೆ ಶಾಸಕ ಕಾಶಪ್ಪನವರ್ ವಿರೋಧ

ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟದಲ್ಲಿ ಬಿರುಕು ಮೂಡಿದೆ. ಹೀಗಾಗಿ ಶಾಸಕ ವಿಜಯಾನಂದ ಕಾಶಪ್ಪನವರ್​ ಪ್ರತ್ಯೇಕ ಸಭೆ ಮಾಡಿದ್ದಾರೆ. ಇನ್ನು ಡಿಸೆಂಬರ್ 10ರಂದು ಸುವರ್ಣ ವಿಧಾನಸೌಧಕ್ಕೆ ಟ್ರ್ಯಾಕ್ಟರ್ ಮುತ್ತಿಗೆ ಹಾಕುವುದಾಗಿ ಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಸ್ವಾಮೀಜಿಯ ಈ ನಿರ್ಧಾರಕ್ಕೆ ವಿಜಯಾನಂದ ಕಾಶಪ್ಪನವರ್ ವಿರೋಧ ವ್ಯಕ್ತಪಡಿಸಿದ್ದಾರೆ.

ಪಂಚಮಸಾಲಿ 2ಎ ಮೀಸಲಾತಿ ಹೋರಾಟದಲ್ಲಿ ಬಿರುಕು: ಸ್ವಾಮೀಜಿ ನಡೆಗೆ ಶಾಸಕ ಕಾಶಪ್ಪನವರ್ ವಿರೋಧ
ಪಂಚಮಸಾಲಿ 2ಎ ಮೀಸಲಾತಿ ಹೋರಾಟದಲ್ಲಿ ಬಿರುಕು: ಸ್ವಾಮೀಜಿ ನಡೆಗೆ ಶಾಸಕ ಕಾಶಪ್ಪನವರ್ ವಿರೋಧ
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ಗಂಗಾಧರ​ ಬ. ಸಾಬೋಜಿ

Updated on: Nov 26, 2024 | 5:06 PM

ಬಾಗಲಕೋಟೆ, ನವೆಂಬರ್​ 26: ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ (Panchmasali 2A) ಹೋರಾಟ ಮೂರುವರೆ ವರ್ಷದಿಂದ ನಡೆಯುತ್ತಿದೆ. ಕೂಡಲಸಂಗಮ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಹೋರಾಟ ಮಾಡಲಾಗುತ್ತಿದೆ. ಬಿಜೆಪಿ ಸರ್ಕಾರವಿದ್ದಾಗ ಶಾಸಕ ಯತ್ನಾಳ್ ಸೇರಿದಂತೆ ಸಾಕಷ್ಟು ಶಾಸಕರು ಬೆಂಬಲ ನೀಡಿದ್ದರು. ಬಳಿಕ ಕಾಂಗ್ರೆಸ್​ ಸರ್ಕಾರ ಬಂದ ನಂತರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ವಿಜಯಾನಂದ್ ಕಾಶಪ್ಪನವರ್, ವಿನಯ್ ಕುಲಕರ್ಣಿ ಹೋರಾಟದಲ್ಲಿ ಭಾಗಿಯಾಗಿದ್ದರು. ಆದರೆ ಇದೀಗ ಈ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕೂಡಲಸಂಗಮದಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ್​ ಪ್ರತ್ಯೇಕ ಸಭೆ ಮಾಡಿದ್ದಾರೆ. ಆ ಮೂಲಕ ಸ್ವಾಮೀಜಿ ವಿರೋಧವಾಗಿ ಪೀಠದಲ್ಲೇ ಸಭೆ ನಡೆಸಿ ಸೆಡ್ಡು ಹೊಡೆದಿದ್ದಾರೆ.

ಸ್ವಾಮೀಜಿ ತೀರ್ಮಾನಕ್ಕೆ ಕಾಶಪ್ಪನವರ್ ವಿರೋಧ

ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮದಲ್ಲಿ ಜಯಮೃತ್ಯುಂಜಯ ಶ್ರೀಗಳ ಕೂಡಲಸಂಗಮ ಪೀಠದಲ್ಲಿ ಪ್ರಮುಖ ಮುಖಂಡರ ನೇತೃತ್ವದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಶಾಸಕ ಕಾಶಪ್ಪನವರ್ ಮಾಡಿದ್ದಾರೆ. ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ವೇಳೆ ಟ್ರ್ಯಾಕ್ಟರ್ ರ‍್ಯಾಲಿ ಮಾಡಲು ಮುಂದಾಗಿರುವ ಸ್ವಾಮೀಜಿ ತೀರ್ಮಾನಕ್ಕೆ ಕಾಶಪ್ಪನವರ್ ವಿರೋಧ ವ್ಯಕ್ತಪಡಿಸಿದ್ದಾರೆ.

ಡಿ.10ರಂದು ಸುವರ್ಣ ವಿಧಾನಸೌಧಕ್ಕೆ ಟ್ರ್ಯಾಕ್ಟರ್ ಮೂಲಕ ಮುತ್ತಿಗೆ: ಸ್ವಾಮೀಜಿ

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಮೂರುವರೆ ವರ್ಷದಿಂದ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ. ಈಗ ಏಳನೇ ಹಂತದ ಹೋರಾಟ ಮಾಡುತ್ತಿದ್ದೇವೆ. ಮುಖ್ಯಮಂತ್ರಿ ನಿರ್ಲಕ್ಷ್ಯ, ಸರ್ಕಾರದ ಅಸಡ್ಡೆ ಖಂಡಿಸಿ ಹೋರಾಟ ಮಾಡುತ್ತಿದ್ದೇವೆ. ಡಿ.10ರಂದು ಸುವರ್ಣ ವಿಧಾನಸೌಧಕ್ಕೆ ಟ್ರ್ಯಾಕ್ಟರ್ ಮೂಲಕ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಮರುಜೀವ: ಜಯ ಮೃತ್ಯುಂಜಯ ಸ್ವಾಮೀಜಿ ಶಕ್ತಿ ಪ್ರದರ್ಶನ, ಸಿಎಂ ನಿವಾಸದಲ್ಲಿ ಸಭೆ

ಇವತ್ತಿನ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮಾತು ತಪ್ಪಿದರು. ಬೆಂಗಳೂರಿಗೆ ಕರೆದು ಸಿದ್ದರಾಮಯ್ಯನವರು ಎರಡು ಗಂಟೆ ಚರ್ಚೆ ಮಾಡಿದರು. ಇದಾದ ಬಳಿಕ ಮುಖ್ಯಮಂತ್ರಿ ಒಂದು ಭರವಸೆ ಕೊಡಲಿಲ್ಲ. ಇದರಿಂದ ಬಹಳಷ್ಟು ನೋವಾಯಿತು. ನೀತಿ ಸಂಹಿತೆ ಕಾರಣ ಹೇಳಿದರು. ನಿಮ್ಮ ಸರ್ಕಾರ ಬರಲು ನಮ್ಮ ಸಮಾಜದವರು ಕಾರಣ. ಲಿಂಗಾಯತರು ನಿಮಗೆ ವೋಟ್ ಹಾಕಿದಾರೆ ಅಂತಾ ಸಿಎಂ ಅವರಿಗೆ ಹೇಳಿದ್ದೇವೆ. ಸೆಂಟ್ರಲ್ ಒಬಿಸಿಗೆ ಶಿಪಾರಸ್ಸು ಮಾಡಲು ಸಿಎಂ ಅವರಿಗೆ ಮನವಿ ಮಾಡಿದ್ದೇವೆ. ಇದಕ್ಕೂ ಅವರು ಒಪ್ಪದಿದ್ದಾಗ ಹೋರಾಟಕ್ಕೆ ಸಜ್ಜಾಗಿದ್ದೇವೆ ಎಂದು ಹೇಳಿದ್ದಾರೆ.

ಮುಂದಾಗುವ ಅನಾಹುತಕ್ಕೆ ಸರ್ಕಾರ ಕಾರಣ

ನೋವು, ಆಕ್ರೋಶ ಹೊರ ಹಾಕಲು ಹೋರಾಟಕ್ಕೆ ಮುಂದಾಗಿದ್ದೇವೆ. ವಿಧಾನಸೌಧಕ್ಕೆ ಅಂದು ಮುತ್ತಿಗೆ ಹಾಕುತ್ತೇವೆ. ಹೋರಾಟಕ್ಕೆ ಬರುವ ಟ್ರ್ಯಾಕ್ಟರ್​ಗಳನ್ನ ತಡೆಯುವ ಕೆಲಸ ಮಾಡಿದರೆ ಮುಂದೆ ಆಗುವ ತೊಂದರೆಗೆ ಸರ್ಕಾರವೇ ಕಾರಣವಾಗುತ್ತೆ. ಐದು ಸಾವಿರ ಟ್ರ್ಯಾಕ್ಟರ್ ಮೂಲಕ ಲಕ್ಷಾಂತರ ಜನರು ಹೋರಾಟದಲ್ಲಿ ಭಾಗಿಯಾಗುತ್ತಾರೆ. ವಕೀಲರ ಮುಂದಾಳತ್ವದಲ್ಲಿ ಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದಿದ್ದಾರೆ.

ಜನಪ್ರತಿನಿಧಿಗಳು ಅಧಿಕಾರ ಇದ್ದಾಗ ಬರಬಹುದು, ಸಿಕ್ಕಾಗ ಬರದೇ ಇರಬಹುದು. ನಮ್ಮ ಮಕ್ಕಳ ಕಣ್ಣೀರು ಒರೆಸಲು ಮೀಸಲಾತಿಗಾಗಿ ಹೋರಾಟ ಮಾಡೋಣ. ಸರ್ಕಾರ ಮಾಡಿರುವ ನಿರ್ಲಕ್ಷ್ಯದ ವಿರುದ್ಧ ಹೋರಾಟ ಮಾಡ್ತಿದ್ದೇವೆ. ಗುರುಗಳು ಹೇಳಿದ ಮಾತನ್ನ ಮಾತ್ರ ಎಲ್ಲರೂ ಕೇಳಿ. ಬೇರೆ ಯಾರ ಮಾತನ್ನ ಕೇಳದಂತೆ ಸಮಾಜದ ಜನರಿಗೆ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಪಂಚಮಸಾಲಿ ಮೀಸಲಾತಿ ಬೇಡಿಕೆ: ತಮ್ಮ ಸರ್ಕಾರದ ನಿಲುವು ಸ್ಪಷ್ಟಪಡಿಸಿದ ಸಿಎಂ

ಡಿ.1ರಂದು ಜನಪ್ರತಿನಿಧಿಗಳ ಗೌಪ್ಯ ಸಭೆ ಕರೆದು ಹೇಗೆ ಹೋರಾಟ ಮಾಡಬೇಕು ಅಂತಾ ಪ್ಲ್ಯಾನ್ ಮಾಡಲಾಗುವುದು. ಏನೇ ಕಷ್ಟ ಬಂದರೂ, ತೊಂದರೆ ಕೊಟ್ಟರೂ ನಾವು ಹೋರಾಟ ಮಾಡುತ್ತೇವೆ. ಅವರು ಚಾಪೆ ಕೆಳಗೆ ನುಗ್ಗಿದರೆ, ನಾವು ರಂಗೋಲಿ ಕೆಳಗೆ ನುಗ್ಗುತ್ತೇವೆ. ಸರ್ಕಾರ ಕುತಂತ್ರ, ಷಡ್ಯಂತ್ರ ಮಾಡಿದರೂ ನಾವು ಹೋರಾಟ ಮಾಡುತ್ತೇವೆ. ಗೊಡ್ಡು ಬೆದರಿಕೆಗೆ ನಾವು ಜಗ್ಗಲ್ಲ. ನೂರು ಜನ ಆದ್ರೂ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಮುತ್ತಿಗೆ ಹಾಕಿದ ಮೇಲೆ ಮೀಸಲಾತಿ ಸಿಗುವವರೆಗೂ ಅಲ್ಲೇ ಹೋರಾಟ ಮಾಡುತ್ತೇವೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್