AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಸಾಲಿ ಮೀಸಲಾತಿ ಗದ್ದಲ: ಬೊಮ್ಮಾಯಿ ಸರ್ಕಾರದ ಅಫಿಡವಿಟ್​ ಉಲ್ಲೇಖಿಸಿ ಬಿಜೆಪಿಗೆ ಸಿಎಂ ಸವಾಲ್

ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ವಿಚಾರ ಇಂದಿನ ಸದನದಲ್ಲಿ ಗದ್ದಲ ಸೃಷ್ಟಿಸಿದೆ. ಹಾಗಾಗಿ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಸದನದಲ್ಲಿ ಮಂಡಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಮುಖಂಡರೊಂದಿಗೆ ಎರಡು ಬಾರಿ ಸಭೆ ನಡೆಸಿದ್ದೇನೆ. ಪಂಚಮಸಾಲಿಗಳು ಮೀಸಲಾತಿ ಕೇಳಲು ನಾನು ಅಡ್ಡಿಯಾಗಿಲ್ಲ ಎಂದಿದ್ದಾರೆ.

ಪಂಚಮಸಾಲಿ ಮೀಸಲಾತಿ ಗದ್ದಲ: ಬೊಮ್ಮಾಯಿ ಸರ್ಕಾರದ ಅಫಿಡವಿಟ್​ ಉಲ್ಲೇಖಿಸಿ ಬಿಜೆಪಿಗೆ ಸಿಎಂ ಸವಾಲ್
ಪಂಚಮಸಾಲಿ ಮೀಸಲಾತಿ ಗದ್ದಲ: ಬೊಮ್ಮಾಯಿ ಸರ್ಕಾರದ ಅಫಿಡವಿಟ್​ ಉಲ್ಲೇಖಿಸಿ ಬಿಜೆಪಿಗೆ ಸಿಎಂ ಸವಾಲ್
ಕಿರಣ್​ ಹನಿಯಡ್ಕ
| Edited By: |

Updated on: Dec 09, 2024 | 6:07 PM

Share

ಬೆಳಗಾವಿ, ಡಿಸೆಂಬರ್​ 09: 2ಎ ಮೀಸಲಾತಿ ವಿಚಾರವಾಗಿ ಪಂಚಮಸಾಲಿ (Panchmasali) ಸಮುದಾಯ ನಾಳೆ ಸುವರ್ಣ ಸೌಧ ಮುತ್ತಿಗೆಗೆ ಸಜ್ಜಾಗಿದೆ. ಈ ವಿಚಾರವಾಗಿ ಇಂದು ಸದನದ ಒಳಗೂ ಮತ್ತು ಹೊರಗೂ ಗದ್ದಲ ಉಂಟಾಗಿದೆ. ಸದನದಲ್ಲಿ ಶಾಸಕ ಯತ್ನಾಳ್ ಮೀಸಲಾತಿ ಬಗ್ಗೆ ಪ್ರಸ್ತಾಪಿಸಿದ್ದು,​ ಈ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನದ ಮುಂದೆ ಮಂಡಿಸುವುದಾಗಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಬೆಳಗಾವಿ ಸುವರ್ಣ ಸೌಧದಲ್ಲಿ ಪತ್ರಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಪಂಚಮಸಾಲಿಗಳನ್ನು 2ಎ ಸೇರಿಸಲು ಬಹಳ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ನಾನು ಮುಖ್ಯಮಂತ್ರಿಯಾದ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಮುಖಂಡರೊಂದಿಗೆ ಎರಡು ಬಾರಿ ಸಭೆ ನಡೆಸಿದ್ದೇನೆ. ಪಂಚಮಸಾಲಿಗಳು ಮೀಸಲಾತಿ ಕೇಳಲು ನಾನು ಅಡ್ಡಿಯಾಗಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶಾಂತಿಯುತ ಪ್ರತಿಭಟನೆಗೆ ಅವಕಾಶ: ಸುವರ್ಣ ಸೌಧ ಮುತ್ತಿಗೆ ಹಾಕುತ್ತೇವೆ ಎಂದ ಪಂಚಮಸಾಲಿ ಸ್ವಾಮೀಜಿ

ರಾಜ್ಯದಲ್ಲಿ ಹಿಂದುಳಿದ ವರ್ಗಗಳನ್ನು ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ ಹಾಗೂ ಪ್ರವರ್ಗ-3ಬಿ ಎಂದು ವಿಂಗಡಸಲಾಗಿದೆ. ವೀರಶೈವ ಲಿಂಗಾಯಿತ ಹಾಗೂ ಪಂಚಮಸಾಲಿ ಜಾತಿಗಳು 3ಬಿ ಅಡಿ ಮೀಸಲಾತಿ ಪಡೆಯುತ್ತಿವೆ. ಪಂಚಮಸಾಲಿಗಳನ್ನು 2ಎ ಸೇರಿಸಲು ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆಯುವುದು ಅವಶ್ಯಕವಾಗಿದೆ. ಈ ಹಿನ್ನಲೆಯಲ್ಲಿ ಆಯೋಗದ ಮುಂದೆ ಮೀಸಲಾತಿ ವಿಚಾರವನ್ನು ಮಂಡಿಸುವಂತೆ ಪಂಚಮಸಾಲಿ ಹೋರಟಗಾರರಿಗೆ ತಿಳಿಸಿದ್ದೇನೆ ಎಂದಿದ್ದಾರೆ.

ಈ ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರ ಪಂಚಮಸಾಲಿಗಳನ್ನು 2ಎ ಸೇರಿಸಿಲ್ಲ ಬದಲಾಗಿ, ಅಲ್ಪಸಂಖ್ಯಾತ ಮುಸ್ಲಿಂರಿಗೆ ನೀಡಿದ್ದ ಶೇ.4 ರಷ್ಟು ಮೀಸಲಾತಿಯನ್ನು ರದ್ದುಪಡಿಸಿ, 3ಎ ಹಾಗೂ 3ಬಿಗೆ ತಲಾ ಶೇ.2 ರಂತೆ ಮೀಸಲಾತಿ ಹಂಚಿಕೆ ಮಾಡಿತ್ತು. ಇದನ್ನು ಆಕ್ಷೇಪಿಸಿ ಮುಸ್ಲಿಂರು ಸರ್ವೋಚ್ಛ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ವೇಳೆ ಹಿಂದಿನ ರಾಜ್ಯ ಸರ್ಕಾರ ಮುಸ್ಲಿಂರ ಮೀಸಲಾತಿ ರದ್ದು ಪಡಿಸಿಲ್ಲ. ಯತಾಸ್ಥಿತಿ ಮುಂದುವರಿಸಿಕೊಂಡು ಹೋಗುವುದಾಗಿ ಅಫಿಡೆವಿಡ್ ಸಲ್ಲಿಸಿದೆ. ಇದರ ಆಧಾರದ ಮೇಲೆ ಸರ್ವೋಚ್ಛ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಆದೇಶವನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ. ಇದರ ಪ್ರತಿಯನ್ನು ನಾಳೆಯೇ ಸದನ ಮುಂದೆ ಮಂಡಿಸುವುದಾಗಿ  ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಇನ್ನು ಈ ವೇಳೆ ಶಾಸಕ ಅರವಿಂದ ಬೆಲ್ಲದ್ ಮಾತನಾಡಿ, ಮಂಗಳವಾರ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ನಡೆಯಲಿದೆ. ಆದ್ದರಿಂದ ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ಬುಧವಾರ ಸದನದ ಮುಂದೆ ಮಂಡಿಸುವಂತೆ ಮುಖ್ಯಮಂತ್ರಿಗಳಲ್ಲಿ ಸಭಾಧ್ಯಕ್ಷರ ಮೂಲಕ ಕೋರಿದರು.

ಮೀಸಲಾತಿ ಹೋರಾಟಕ್ಕೆ ಅನುಮತಿ

ಸುಮಾರು 5000 ಟ್ರ್ಯಾಕ್ಟರ್​ಗಳೊಂದಿಗೆ ಪಂಚಮಸಾಲಿ 2ಎ ಮೀಸಲಾತಿ ಹೋರಾಟಗಾರರು, ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದಾರೆ. ಈ ರೀತಿಯಾಗಿ ಸಾವಿರಾರು ಸಂಖ್ಯೆಯಲ್ಲಿ ಟ್ರ್ಯಾಕ್ಟರ್​ಗಳು ಆಗಮಿಸಿದರೆ ಕಾನೂನು ಸುವ್ಯವಸ್ಥೆ ಧಕ್ಕೆ ಬರುತ್ತದೆ. ಈ ಹಿನ್ನಲೆಯಲ್ಲಿ ಟ್ರ್ಯಾಕ್ಟರ್​​ಗಳೊಂದಿಗೆ ಹೋರಾಟಕ್ಕೆ ಅವಕಾಶ ನೀಡಲು ಸರ್ಕಾರ ನಿರಾಕರಿಸಿದೆ. ನಿಯಮಿತ ಸಂಖ್ಯೆಯಲ್ಲಿ ಟೆಂಪೋ, ಟ್ಯಾಕ್ಸಿ, ಕಾರುಗಳ ಮೂಲಕ ಹೋರಾಟಗಾರರು ಆಗಮಿಸಿ ಶಾಂತವಾಗಿ ಪ್ರತಿಭಟನೆ ನಡೆಸಲು ಯಾವುದೇ ಅಡ್ಡಿಯಿಲ್ಲ. ಸರ್ಕಾರ ಇದಕ್ಕೆ ಅನುಮತಿ ನೀಡಲಿದೆ. ಈ ವಿಚಾರವಾಗಿ ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಸದನದಲ್ಲಿ ತಿಳಿಸಿದ್ದಾರೆ.

ಡಿ.19ಕ್ಕೆ ಅಧಿವೇಶನ ಮುಕ್ತಾಯ: ಸಭಾಧ್ಯಕ್ಷ ಯು.ಟಿ.ಖಾದರ್

ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿ.20 ರಿಂದ 22 ವರೆಗೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಡಿ.20ರ ಬದಲಾಗಿ 19 ರಂದು ಚಳಿಗಾಲದ ಅಧಿವೇಶನವನ್ನು ಮುಕ್ತಾಯಗೊಳಿಸಲಾಗುವುದು ಎಂದು ಸದನದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ