2ಎ ಮೀಸಲಾತಿ ನೀಡದಿದ್ದರೆ ಚುನಾವಣೆ ಬಹಿಷ್ಕಾರ: ರಾಜ್ಯ ಸರ್ಕಾರಕ್ಕೆ ಪಂಚಮಸಾಲಿ ಮಹಿಳಾ ಘಟಕದ ಎಚ್ಚರಿಕೆ
2ಎ ಮೀಸಲಾತಿ ನೀಡದೇ ಹೋದರೆ ಮುಂಬರುವ ಚುನಾವಣೆಯನ್ನು ಬಹಿಷ್ಕರಿಸಲಾಗುವುದು. ಮೀಸಲಾತಿ ಜಾರಿ ಮಾಡಲು ಸರ್ಕಾರಕ್ಕೆ ಆ.22 ಕೊನೆಯ ದಿನವಾಗಿದೆ ಎಂದು ಪಂಚಮಸಾಲಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ವೀಣಾ ಕಾಶಪ್ಪನವರ್ ಎಚ್ಚರಿಕೆ ನೀಡಿದ್ದಾರೆ.

ಗದಗ: ರಾಜ್ಯ ಸರ್ಕಾರ ತಮ್ಮ ಸಮುದಾಯಕ್ಕೆ 2ಎ ಮೀಸಲಾತಿ ನೀಡದೇ ಹೋದರೆ ಮುಂಬರುವ ಚುನಾವಣೆಯನ್ನು ಬಹಿಷ್ಕರಿಸಲಾಗುವುದು. ಕಳೆದ ಬಾರಿ ನಡೆದ ವಿಧಾನ ಪರಿಷತ್ ಚುನಾವಣೆ ಏನಾಗಿದೆ ಅಂತ ನೋಡಿದ್ದೀರಿ, ಮುಂದಿನ ದಿನಗಳಲ್ಲಿ ವಿಕೋಪಕ್ಕೆ ಹೋಗುವುದನ್ನು ತಪ್ಪಿಸಬೇಕಾದರೆ ಆದಷ್ಟು ಬೇಗ ಮೀಸಲಾತಿ ಕಲ್ಪಿಸಿಕೊಡಿ ಎಂದು ಪಂಚಮಸಾಲಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ವೀಣಾ ಕಾಶಪ್ಪನವರ್ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ 64.48 ರೂ ಕೋಟಿ ಅನುದಾನ ಕೋರಿ ಸಿಎಂ ಬಸವರಾಜ ಬೊಮ್ಮಾಯಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ
2 ಎ ಮೀಸಲಾತಿ ವಿಚಾರವಾಗಿ ಮಾತನಾಡಿದ ಪಂಚಮಸಾಲಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ವೀಣಾ ಕಾಶಪ್ಪನವರ್, ತಮ್ಮ ಸಮುದಾಯಕ್ಕೆ 2ಎ ಮೀಸಲಾತಿಯನ್ನು ಕಲ್ಪಿಸಿಕೊಡಲು ರಾಜ್ಯ ಸರ್ಕಾರಕ್ಕೆ ಆಗಸ್ಟ್ 22 ಅಂತಿಮ ಗಡುವು ನೀಡಲಾಗುವುದು. ಅದಾಗ್ಯೂ ಸರ್ಕಾರ ಕ್ರಮ ಕೈಗೊಳ್ಳಲಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು. ಅಲ್ಲದೆ ಚುನಾವಣೆಯನ್ನು ಬಹಿಷ್ಕರಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿಲ್ಲದ ಮಳೆ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭದ್ರಾನದಿ
ರಾಜ್ಯ ಸರ್ಕಾರ ಶೀಘ್ರದಲ್ಲೇ ಮೀಸಲಾತಿ ನೀಡಬೇಕು. ಇಲ್ಲವಾದರೆ ಕಳೆದ ಬಾರಿ ನಡೆದ ವಿಧಾನ ಪರಿಷತ್ ಚುನಾವಣೆ ಏನಾಗಿದೇ ಅಂತ ನೋಡಿದ್ದೀರಿ. ಮಹಿಳೆಯರು ಯಾವ ರೀತಿ ಮತದಾನ ಮಾಡಿದ್ದಾರೆ ಎಂದು ತಿಳಿದಿದೆ. ಇದಕ್ಕೆ ಉಪಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣೆ ನಿದರ್ಶನವಾಗಿದೆ. ಮುಂದಿನ ದಿನಗಳಲ್ಲಿ ವಿಕೋಪಕ್ಕೆ ಹೋಗುವುದನ್ನು ತಪ್ಪಿಸಬೇಕಾದರೆ ಆದಷ್ಟು ಬೇಗ 2ಎ ಮೀಸಲಾತಿ ನೀಡಬೇಕು ಎಂದಿದ್ದಾರೆ.
ಮೀಸಲಾತಿ ನೀಡುವಲ್ಲಿ ಸರ್ಕಾರ ವಿಳಂಬ ಮಾಡಿದರೆ ಸರ್ಕಾರ ಕಠಿಣ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಹೇಳಿದ ವೀಣಾ ಕಾಶಪ್ಪನವರ್, ಪಂಚಮಸಾಲಿ ಸಮಾಜವನ್ನು ಸಂಘಟಿಸಲಾಗುವುದು ಎಂದು ಹೇಳಿದ್ದಾರೆ. ಶ್ರಾವಣ ಮಾಸದಲ್ಲಿ ಮಹಿಳಾ ಘಟಕದ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಅರಿಶಿನ ಕುಂಕುಮ ಉಡಿ ತುಂಬುವ ಕಾರ್ಯಕ್ರಮ ಇದಾಗಿದ್ದು, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಆ ಮೂಲಕ ಪಂಚಮಸಾಲಿ ಸಮಾಜದ ಸಂಘಟನೆಯನ್ನು ಮಾಡಲಾಗುವುದು ಎಂದಿದ್ದಾರೆ.
ಇದನ್ನೂ ಓದಿ: ನವಜಾತ ಶಿಶುವನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ತಾಯಿ; ಮಗು ಸಾಕುವ ಶಕ್ತಿ ಇಲ್ಲ ಎಂದು ಪೊಲೀಸರ ಮುಂದೆ ಅಳಲು