ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಳ ಉಡುಪಿನಲ್ಲಿ ಬಚ್ಚಿಟ್ಟುಕೊಂಡು ಕೈದಿಗೆ ಮೊಬೈಲ್ ನೀಡಲು ಹೋದ ಸಿಬ್ಬಂದಿ ಅರೆಸ್ಟ್

ಕರ್ತವ್ಯಕ್ಕೆ ಹಾಜರಾಗಲು ಬಂದಿದ್ದ ಭಾನುಪ್ರಕಾಶ್, ಜೈಲು ಪ್ರವೇಶ ಮಾಡುವಾಗ ಕೆಎಸ್ಐಎಸ್ಎಫ್ ಸಿಬ್ಬಂದಿ ತಪಾಸಣೆ ಮಾಡಿದ್ದಾರೆ. ಆಗ, ಭಾನುಪ್ರಕಾಶ್ ಒಳ ಉಡುಪಿನಲ್ಲಿ ಮೊಬೈಲ್ ಬಚ್ಚಿಟ್ಟುಕೊಂಡಿರುವುದು ತಿಳಿದುಬಂದಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಳ ಉಡುಪಿನಲ್ಲಿ ಬಚ್ಚಿಟ್ಟುಕೊಂಡು ಕೈದಿಗೆ ಮೊಬೈಲ್ ನೀಡಲು ಹೋದ ಸಿಬ್ಬಂದಿ ಅರೆಸ್ಟ್
ಪರಪ್ಪನ ಅಗ್ರಹಾರ
Follow us
ರಾಮು, ಆನೇಕಲ್​
| Updated By: Ganapathi Sharma

Updated on: Jul 28, 2023 | 10:50 PM

ಬೆಂಗಳೂರು, ಜುಲೈ 28: ಪರಪ್ಪನ ಅಗ್ರಹಾರ ಜೈಲಿನಲ್ಲಿ (Parappana Agrahara Jail) ಸಿಬ್ಬಂದಿಯೇ ಅಕ್ರಮ ಎಸಗುತ್ತಿರುವುದು ಮತ್ತೆ ಸಾಬೀತಾಗಿದೆ. ಒಳ ಉಡುಪಿನಲ್ಲಿ ಮೊಬೈಲ್ ಬಚ್ಚಿಟ್ಟುಕೊಂಡು ಕೈದಿಗೆ ನೀಡಲು ಹೋದ ಸಿಬ್ಬಂದಿಯೊಬ್ಬರು ಜೈಲು ಅಧಿಕಾರಿಗಳ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾರೆ. ಚಾಲಕ ಭಾನುಪ್ರಕಾಶ್ ಬಂಧಿತ ಆರೋಪಿಯಾಗಿದ್ದು, ಜುಲೈ 25 ರಂದು ಇವರು ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು.

ಜೈಲು ಸಿಬ್ಬಂದಿ ಸಿಕ್ಕಿಬಿದ್ದಿದ್ದು ಹೇಗೆ?

ಕರ್ತವ್ಯಕ್ಕೆ ಹಾಜರಾಗಲು ಬಂದಿದ್ದ ಭಾನುಪ್ರಕಾಶ್, ಜೈಲು ಪ್ರವೇಶ ಮಾಡುವಾಗ ಕೆಎಸ್ಐಎಸ್ಎಫ್ ಸಿಬ್ಬಂದಿ ತಪಾಸಣೆ ಮಾಡಿದ್ದಾರೆ. ಆಗ, ಭಾನುಪ್ರಕಾಶ್ ಒಳ ಉಡುಪಿನಲ್ಲಿ ಮೊಬೈಲ್ ಬಚ್ಚಿಟ್ಟುಕೊಂಡಿರುವುದು ತಿಳಿದುಬಂದಿದೆ. ಈ ವಿಚಾರವಾಗಿ ಕಾರಗೃಹದ ಮುಖ್ಯ ಅಧೀಕ್ಷಕ ಮಲ್ಲಿಕಾರ್ಜುನ ಪರಪ್ಪನ ಅಗ್ರಹಾರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಳಿಕ ಭಾನುಪ್ರಕಾಶ್ ಅವರನ್ನು ಬಂಧಿಸಲಾಗಿದೆ.

ಮೊಬೈಲ್ ಯಾರಿಗೆ ಕೊಡಲು ಕೊಂಡೊಯ್ಯಲಾಗುತ್ತಿತ್ತು ಎನ್ನುವ ಬಗ್ಗೆ ಪೋಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಿಂದ, ಜೈಲಿನಲ್ಲಿ ನಡೆಯುವ ಅಕ್ರಮಗಳಿಗೆ ಕೆಲ ಜೈಲು ಸಿಬ್ಬಂದಿಗಳೇ ಸಾಥ್ ನೀಡುತ್ತಿದ್ದಾರೆ ಎಂಬ ಆರೋಪಗಳಿಗೆ ಮತ್ತಷ್ಟು ಪುಷ್ಟಿ ದೊರೆತಂತಾಗಿದೆ.

ಇದನ್ನೂ ಓದಿ: ಎಷ್ಟೇ ಖಡಕ್ ಎಚ್ಚರಿಕೆ ಕೊಟ್ಟರೂ ಪ್ರಯೋಜನವಿಲ್ಲ; ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್ ಫೋನ್​ಗಳು ಪತ್ತೆ

ಜೈಲು ಸಿಬ್ಬಂದಿಯು ಹಣದ ಆಸೆಗೆ ಮೊಬೈಲ್, ಮಾದಕ ವಸ್ತುಗಳ ಪೂರೈಕೆ ಮಾಡುತ್ತಿದ್ದಾರೆ. ಜೈಲಿನಲ್ಲಿ ಕೈದಿಗಳ ಬಳಿ ಹಣ ಪಡೆದು ನಿಷೇಧಿತ ವಸ್ತುಗಳ ಪೂರೈಕೆ ಮಾಡುತ್ತಾರೆ ಎನ್ನಲಾಗಿದೆ. ಇತ್ತೀಚೆಗಷ್ಟೆ ಜೈಲಿನಲ್ಲಿ ಉಗ್ರ ಚಟುವಟಿಕೆಗಳಿಗೆ ಪ್ರಚೋದನೆ ನೀಡಿದ್ದ ವಿಚಾರ ಸಂಚಲನ ಮೂಡಿಸಿತ್ತು. ಬೆಂಗಳೂರಿನಲ್ಲಿ ಬಂಧಿತ ಐವರು ಶಂಕಿತ ಉಗ್ರರಿಗೆ ಜೈಲಿನಲ್ಲೇ ಪ್ರಚೋದನೆ ನೀಡಲಾಗಿತ್ತು ಎಂಬುದು ಬಹಿರಂಗವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು