ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಡಿಐಜಿ ಸೋಮಶೇಖರ್ ಅರೆಸ್ಟ್

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಪ್ರಕರಣ ಮುನ್ನೆಲೆಗೆ ಬಂದಿದ್ದು, ಬಂಧಿಖಾನೆ ಡಿಐಜಿ ಸೋಮಶೇಖರ್ ಅವರನ್ನ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದ ತನಿಖೆಯನ್ನ ತೀವ್ರ ಸ್ವರೂಪಗೊಳಿಸಿರುವ ಪೊಲೀಸರು, ಅಂದಿನ ಜೈಲು ಚೀಫ್ ಸೂಪರಿಂಟೆಂಡೆಂಟ್ ಆಗಿದ್ದ ಸೋಮಶೇಖರ್ ಅವರ ಪಾತ್ರದ ಕುರಿತು ತನಿಖೆ ನಡೆಸುತ್ತಿದ್ದಾರೆ.

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಡಿಐಜಿ ಸೋಮಶೇಖರ್ ಅರೆಸ್ಟ್
Dig Somashekhar
Edited By:

Updated on: Oct 05, 2026 | 5:42 PM

ಬೆಂಗಳೂರು, (ಅಕ್ಟೋಬರ್ 05): ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ಬಿಡುಗಡೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿಖಾನೆ ಡಿಐಜಿ ಸೋಮಶೇಖರ್ ಅವರನ್ನ ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. 2018ರಲ್ಲಿ ಸುಪ್ರೀಂಕೋರ್ಟ್​ನ ನಕಲಿ ಆದೇಶ ಸೃಷ್ಟಿಸಿ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಎಸ್.ಶಂಕರ್ ಎನ್ನುವ ಕೈದಿಯನ್ನು ಬಿಡುಗಡೆ ಮಾಡಿದ್ದು, ಈ ಪ್ರಕರಣ ಸಂಬಂಧ ಇದೀಗ ಪರಪ್ಪನ ಅಗ್ರಹಾರ ಪೊಲೀಸರು, ಡಿಐಜಿ ಸೋಮಶೇಖರ್ ಅವರನ್ನು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಅಂದಿನ ಜೈಲು ಚೀಫ್ ಸೂಪರಿಂಟೆಂಡೆಂಟ್ ಆಗಿದ್ದ ಹಾಗೂ ಸದ್ಯ ಡಿಐಜಿ ಹುದ್ದೆಯಲ್ಲಿರುವ ಸೋಮಶೇಖರ್ ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.

2018 ರಲ್ಲಿ ನಕಲಿ ಆದೇಶ ಸೃಷ್ಟಿಸಿ ಕೈದಿ ಬಿಡುಗಡೆ

ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಂಕರ್ ಎಂಬ ಕೈದಿಯನ್ನ ಸುಪ್ರೀಂ ಕೋರ್ಟ್‌ನ ನಕಲಿ ಆದೇಶದ ಆಧಾರದ ಮೇಲೆ 2018ರ ನವೆಂಬರ್ 13ರಂದು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಶಂಕರ್ ಬಿಡುಗಡೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ನಕಲಿ ಆದೇಶವನ್ನು ಸೃಷ್ಟಿಸಲಾಗಿದೆ ಎಂದು ಆರೋಪಿಸಲಾಗಿದ್ದು, ಈ ನಕಲಿ ದಾಖಲೆಯನ್ನ ಜೈಲಿನ ಎಸ್‌ಡಿಎ ಆಗಿದ್ದ ಶ್ರೀಕಾಂತ್ ಎಸ್. ಎಂಬಾತ ಸೃಷ್ಟಿಸಿದ್ದಾನೆ ಎಂಬ ಆರೋಪವಿದೆ.

ಇದನ್ನೂ ಓದಿ: ಹಾಸನ: ಪೆಂಡಾಲ್ ಗೌರಿ-ಗಣಪತಿ ಮೂರ್ತಿ ವಿಸರ್ಜನೆ ವಿಚಾರ: ಎಸ್ಪಿಗೆ ಡಿಸಿ ಲತಾ ಕುಮಾರಿ ನೋಟಿಸ್!

ನಕಲಿ ಆದೇಶದ ಆಧಾರದ ಮೇಲೆ 2018ರ ನವೆಂಬರ್ 13ರಂದು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಂಕರ್‌ನನ್ನ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ. ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈದಿ ಶಂಕರ್ ಹಾಗೂ ನಕಲಿ ಆದೇಶ ಸೃಷ್ಟಿಸಿದ ಆರೋಪ ಎದುರಿಸುತ್ತಿರುವ ಶ್ರೀಕಾಂತ್ ಎಸ್. ಇಬ್ಬರನ್ನೂ ಈಗಾಗಲೇ ಬಂಧನ ಮಾಡಲಾಗಿದೆ. ಇದೀಗ ಪ್ರಕರಣದಲ್ಲಿ ಅಂದಿನ ಜೈಲು ಚೀಫ್ ಸೂಪರಿಂಟೆಂಡೆಂಟ್ ಆಗಿದ್ದ ಸೋಮಶೇಖರ್ ಅವರ ಪಾತ್ರದ ಕುರಿತು ತನಿಖೆ ನಡೆಸಲಾಗುತ್ತಿದೆ.

ಅಪರಾಧಿಗೆ ಜೀವಾವಧಿ ಶಿಕ್ಷೆ ನೀಡಿದ್ದ ಕೋರ್ಟ್​

2001ರಲ್ಲಿ ಕೊಲೆ, ಅಪಹರಣ-ಸುಲಿಗೆ ಪ್ರಕರಣದಲ್ಲಿ ಶಂಕರ್​ ಎಂಬಾತನನ್ನ ಬಂಧಿಸಲಾಗಿತ್ತು. ಈತನ ಮೇಲೆ ಐಪಿಸಿ ಸೆಕ್ಷನ್ 364 ಎ ಮತ್ತು 120 ಬಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್​ ಅಪರಾಧಿಗೆ ಜೀವಾವಧಿ ಶಿಕ್ಷೆಗೆ ನೀಡಿತ್ತು. ಎರಡೂ ಶಿಕ್ಷೆಗಳನ್ನು ಏಕಕಾಲದಲ್ಲಿ ಅನುಭವಿಸಲು ಅಂದು ಕೋರ್ಟ್ ಆದೇಶ ಹೊರಡಿಸಿತ್ತು. ಆದ್ರೆ, 2018ರಲ್ಲಿ ಅಪರಾಧಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಲಾಗಿದೆ. ಅದರಡಿ ಬಿಡುಗಡೆ ಆದೇಶ ನೀಡಲಾಗಿದೆ ಎಂದು ನಕಲಿ ಆದೇಶವನ್ನು ಜೈಲಾಧಿಕಾರಿಗಳಿಗೆ ನೀಡಿ ಬಿಡುಗಡೆ ಮಾಡಿಸಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
Loading...
Unable to load recommendations.
Follow Us