ಆಫ್​ಲೈನ್ ಬದಲು ಆನ್​ಲೈನ್ ಪರೀಕ್ಷೆ ನಡೆಸಿ.. ಸರ್ಕಾರಕ್ಕೆ ಪೋಷಕರ ಒತ್ತಾಯ

ಕೊರೊನಾ ಎರಡನೇ ಅಲೆ ಗುಮ್ಮ ಮತ್ತೆ ಸೌಂಡ್ ಮಾಡ್ತಿದೆ. ನಿಶ್ಚಿಂತೆಯಿಂದಿದ್ದ ಪೋಷಕರಿಗೆ ಮತ್ತೆ ನಿದ್ರೆಗೆಡಿಸಿದೆ. ಆಫ್​ಲೈನ್ ಬದಲು ಆನ್​ಲೈನ್ ಪರೀಕ್ಷೆ ನಡೆಸಿ ಅಂತಾ ಸರ್ಕಾರವನ್ನ ಒತ್ತಾಯಿಸ್ತಿದ್ದಾರೆ.

ಆಫ್​ಲೈನ್ ಬದಲು ಆನ್​ಲೈನ್ ಪರೀಕ್ಷೆ ನಡೆಸಿ.. ಸರ್ಕಾರಕ್ಕೆ ಪೋಷಕರ ಒತ್ತಾಯ
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on: Mar 23, 2021 | 7:20 AM

ಬೆಂಗಳೂರು: ರಾಜ್ಯದಲ್ಲಿ ದಿನೇದಿನೆ ಕೊರೊನಾ ಎರಡನೇ ಅಲೆ ಆತಂಕ ಹೆಚ್ಚಾಗ್ತಿದೆ. ಕಳೆದ ಒಂದು ವಾರದಿಂದ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೊರೊನಾ ರುದ್ರನರ್ತನ ಮಾಡ್ತಿದೆ. ಸದ್ಯ ರಾಜ್ಯದಲ್ಲಿ 6 ರಿಂದ 10ನೇ ತರಗತಿಗಳು ಆರಂಭವಾಗಿದ್ದು, ಬೆಂಗಳೂರು ಮತ್ತು ಕೇರಳ ಗಡಿ ಭಾಗದಲ್ಲಿ 8 ರಿಂದ 10ನೇ ತರಗತಿವರೆಗೆ ಮಾತ್ರ ಆರಂಭವಾಗಿದೆ. ಆದ್ರೆ, ಡೆಡ್ಲಿ ಕೊರೊನಾ ಮತ್ತೆ ಆರ್ಭಟಿಸ್ತಿರೋದ್ರಿಂದ ಮಕ್ಕಳಿಗೆ, ಆಫ್​ಲೈನ್​ ಪರೀಕ್ಷೆ ನಡೆಸಿದ್ರೆ ಕಂಟಕ ಎದುರಾಗಲಿದೆ. ಹೀಗಾಗಿ ಆನ್​ಲೈನ್ ಪರೀಕ್ಷೆ ನಡೆಸಿ ಅಂತಾ ಪೋಷಕರು ಒತ್ತಾಯಿಸ್ತಿದ್ದಾರೆ.

ಈಗಾಗ್ಲೇ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಶಾಲಾ-ಕಾಲೇಜುಗಳನ್ನ ನಿನ್ನೆಯಿಂದಲೇ ಬಂದ್ ಮಾಡಲಾಗಿದೆ. ಎಸ್ಎಸ್ಎಲ್​ಸಿ‌ ಪರೀಕ್ಷೆಯನ್ನೂ ತಮಿಳುನಾಡು ಸರ್ಕಾರ ರದ್ದುಗೊಳಿಸಿದೆ. ಬೆಂಗಳೂರಿನಲ್ಲಿ ಕೊರೊನಾ ಕೇಸ್​ಗಳು ಪ್ರತಿದಿನ ಸಾವಿರದ ಗಡಿ ದಾಟುತ್ತಿದ್ದು, ಮುಂದಿನ 2 ವಾರ ಡೇಂಜರ್ ಅಂತಾ ಹೇಳಿದ್ದು, ಎಚ್ಚರ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ನಿನ್ನೆಯೂ ಬೆಂಗಳೂರಿನಲ್ಲಿ ಸಾವಿರಕ್ಕೂ ಹೆಚ್ಚು ಹೊಸ ಕೊರೊನಾ‌ ಕೇಸ್​ಗಳು ಪತ್ತೆಯಾಗಿವೆ. ಇದು ಪೋಷಕರು ಮತ್ತು ವಿದ್ಯಾರ್ಥಿಗಳನ್ನ ಆತಂಕಕ್ಕೆ ದೂಡಿದೆ. ಶಾಲೆಗಳಲ್ಲೇ ಎಷ್ಟೇ ಸುರಕ್ಷತೆ ತೆಗೆದುಕೊಂಡ್ರೂ, ಭಯ ಇದ್ದೇ ಇದೆ. ಹೀಗಾಗಿ ಆನ್​ಲೈನ್ ಪರೀಕ್ಷೆ ನಡೆಸಿ ಅಂತಾ ಪೋಷಕರು ಮನವಿ ಮಾಡಿದ್ದಾರೆ.

ಒಟ್ನಲ್ಲಿ ದಿನೇದಿನೆ ಹೆಚ್ಚಾಗುತ್ತಿರೋ ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಆನ್​ಲೈನ್ ಕ್ಲಾಸ್ ಹಾಗೂ ಆನ್​ಲೈನ್ ಪರೀಕ್ಷೆ ನಡೆಸಲು ಒತ್ತಡ ಹೆಚ್ಚುತ್ತಿದೆ. ಹೀಗಾಗಿ ಸರ್ಕಾರ ಈ ವಿಚಾರವನ್ನ ಗಂಭೀರವಾಗಿ ಪರಿಗಣಿಸಿ, ಸೂಕ್ತ ನಿರ್ಧಾರ ಕೈಗೊಳ್ಳಬೇಕಿದೆ.

ಇದನ್ನೂ ಓದಿ: ಕಾಲೇಜುಗಳಿಗೆ ಕಂಟಕವಾದ ಕೊರೊನಾ.. ಕಿಟ್ ಧರಿಸಿ ಮಹಾರಾಣಿ ಕಾಲೇಜಿನಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯರು

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ