AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ದಂಪತಿ ಬಲಿ, ತಬ್ಬಲಿಯಾದ ಇಬ್ಬರು ಮಕ್ಕಳು

ದಂಪತಿಗೆ ಮೇ 27 ರಂದು ಕೊರೊನಾ ಪಾಸಿಟಿವ್ ಆಗಿತ್ತು. ಹೀಗಾಗಿ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ದಂಪತಿ ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳನ್ನ ಅನಾಥರನ್ನಾಗಿಸಿದ್ದಾರೆ. ತಂದೆ-ತಾಯಿಯನ್ನ ಕಳೆದುಕೊಂಡು ಮಕ್ಕಳು ತಬ್ಬಲಿಗಳಾಗಿದ್ದಾರೆ.

ಕೊರೊನಾಗೆ ದಂಪತಿ ಬಲಿ
TV9 Web
| Edited By: ಆಯೇಷಾ ಬಾನು|

Updated on: Jun 04, 2021 | 10:04 AM

Share

ಬಳ್ಳಾರಿ: ಒಂದೇ ದಿನದ ಅಂತರದಲ್ಲಿ ದಂಪತಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣದ ಇಂದಿರಾನಗರ ಬಡಾವಣೆಯಲ್ಲಿ ಕೊರೊನಾಗೆ ದಂಪತಿ ಮೃತಪಟ್ಟಿದ್ದಾರೆ. ಮಾರೆಪ್ಪ(55) ಉಮಾ(44) ಮೃತ ದಂಪತಿ.

ದಂಪತಿಗೆ ಮೇ 27 ರಂದು ಕೊರೊನಾ ಪಾಸಿಟಿವ್ ಆಗಿತ್ತು. ಹೀಗಾಗಿ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ದಂಪತಿ ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳನ್ನ ಅನಾಥರನ್ನಾಗಿಸಿದ್ದಾರೆ. ತಂದೆ-ತಾಯಿಯನ್ನ ಕಳೆದುಕೊಂಡು ಮಕ್ಕಳು ತಬ್ಬಲಿಗಳಾಗಿದ್ದಾರೆ.

ಒಂದೇ ತಿಂಗಳಲ್ಲಿ ಮಗ ಮತ್ತು ತಾಯಿ ಸಾವು ಇನ್ನು ಕಲಬುರಗಿ ಜಿಲ್ಲೆಯ ಕಮಲಾಪುರ ಪಟ್ಟಣದಲ್ಲಿ ಕೊರೊನಾ ಕಾಟಕ್ಕೆ ಒಂದೇ ತಿಂಗಳಲ್ಲಿ ಮಗ ಮತ್ತು ತಾಯಿ ಮೃತಪಟ್ಟಿದ್ದಾರೆ. ಕೊರೊನಾದಿಂದ ಗುಣಮುಖರಾಗಿದ್ದ ತಾಯಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಮಲಾಪುರ‌ ಜಿಲ್ಲಾ ಪಂಚಾಯತ್ ಸದಸ್ಯೆ ಕೂಡ ಆಗಿದ್ದ ಕಮಲಾಬಾಯಿ ಚಿಕ್ಕೆಗೌಡ 65 ಮೃತ ಮಹಿಳೆ.

ಕಮಲಾಬಾಯಿಗೆ ಈ ಹಿಂದೆ ಕೊರೊನಾ ದೃಢವಾಗಿತ್ತು. ಬಳಿಕ ತಾಯಿ ಚಿಕಿತ್ಸೆಗೆ ಓಡಾಡುತ್ತ ಮಗನಿಗೂ ಸೋಂಕು ತಗುಲಿತ್ತು. ಮೇ 11 ರಂದು ಕೊರೊನಾ ಸೋಂಕಿಗೆ ಪುತ್ರ ರಾಜು ಮೃತಪಟ್ಟ. ಆದ್ರೆ ಸೋಂಕಿನಿಂದ ಗುಣಮುಖ ಹೊಂದಿದ್ದ ಕಮಲಾಬಾಯಿ ಹೃದಯಾಘಾತದಿಂದ ನಿನ್ನೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಅನಾಥವಾಗುತ್ತಿವೆ ಕೊರೊನಾಗೆ ಬಲಿಯಾದ ಶವಗಳು, ಬಿಬಿಎಂಪಿಯಿಂದ 857 ಶವಗಳಿಗೆ ಮುಕ್ತಿ

Follow Us
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ

‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ

ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ