ಬೆಂಗಳೂರು: ರಾಜ್ಯ ಸರ್ಕಾರ ಇಂದು SSLC ಹಾಗೂ ದ್ವಿತೀಯ PUC ತರಗತಿ ಆರಂಭಕ್ಕೆ ಮುಹೂರ್ತ ಫಿಕ್ಸ್ ಮಾಡಿದೆ. ಜೊತೆಗೆ, ಜನವರಿ 1ರಿಂದ 6ರಿಂದ 9ನೇ ತರಗತಿವರೆಗೆ ವಿದ್ಯಾಗಮ ಸಹ ಆರಂಭಿಸಲು ನಿರ್ಧರಿಸಿದೆ.
ಇತ್ತ, ಖಾಸಗಿ ಶಾಲೆಗಳ ಫೀಸ್ ಟಾರ್ಚರ್ ವಿರೋಧಿಸಿ ವಿದ್ಯಾರ್ಥಿಗಳ ಪೋಷಕರು ಪ್ರತಿಭಟನೆ ನಡೆಸಲಿದ್ದಾರೆ. ನಾಳೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪೋಷಕರು ಪ್ರತಿಭಟನೆ ನಡೆಸಲಿದ್ದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ ಕೂರಲಿದ್ದಾರೆ ಎಂದು ಹೇಳಲಾಗಿದೆ. ಅಂದ ಹಾಗೆ, ಪೋಷಕರ ಪ್ರತಿಭಟನೆ ನಾಳೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ.
ಶಾಲೆ ಆರಂಭದ ದಿನಾಂಕ ಘೋಷಣೆ ಬೆನ್ನಲ್ಲೇ ಪೋಷಕರಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ತಿಳಿದುಬಂದಿದೆ.ಪೋಷಕರು ಈ ಹಿಂದೆ ಫ್ರೀಡಂಪಾರ್ಕ್ನಲ್ಲಿ ಧರಣಿ ನಡೆಸಿದ್ದರು. ಆದರೆ, ಪೋಷಕರ ಮನವಿಗೆ ಶಿಕ್ಷಣ ಇಲಾಖೆ ಸ್ಪಂದಿಸದಿದ್ದಕ್ಕೆ ಸಿಟ್ಟಿಗೆದ್ದಿರುವ ಇವರು ಇದೀಗ ಮತ್ತೊಂದು ಪ್ರತಿಭಟನೆ ಮುಂದಾಗಿದ್ದಾರೆ.
Published On - 5:21 pm, Sat, 19 December 20