ಮಡಿಕೇರಿ: ಗೋವಾದಲ್ಲಿ ಸಫಿಯಾ ಕೊಲೆ ಪ್ರಕರಣ, 18 ವರ್ಷಗಳ ಬಳಿಕ ಬಾಲಕಿ ಅಂತ್ಯ ಸಂಸ್ಕಾರ

ಗೋವಾದಲ್ಲಿ 18 ವರ್ಷಗಳ ಹಿಂದೆ ಬರ್ಬರವಾಗಿ ಹತ್ಯೆಯಾಗಿದ್ದ ಕೊಡಗಿನ ಬಾಲಕಿ ಸಫಿಯಾ ಅಂತ್ಯ ಸಂಸ್ಕಾರ ಇಸ್ಲಾಂ ಪದ್ಧತಿಯಂತೆ ಇದೀಗ ನೆರವೇರಿದೆ. ಕಾಸರಗೋಡಿನ ಕೆ.ಸಿ.ಹಂಝ ಎಂಬಾತ ಮನೆ ಕೆಲಸಕ್ಕೆಂದು ಬಾಲಕಿಯನ್ನು 2006ರಲ್ಲಿ ಗೋವಾಕ್ಕೆ ಕರೆದೊಯ್ದಿದ್ದ. ಬಳಿಕ ಬಿಸಿ ಗಂಜಿ ಮೈಮೇಲೆ ಬಿದ್ದು ಬಾಲಕಿ ತೀವ್ರವಾಗಿ ಗಾಯಗೊಂಡಿದ್ದಳು. ಬಾಲಕಾರ್ಮಿಕ ಪ್ರಕರಣ ದಾಖಲಾಗುವ ಹೆದರಿಕೆಯಿಂದ ಹಂಝ ಆಕೆಯನ್ನು ಕೊಲೆ ಮಾಡಿ, ಮೃತದೇಹವನ್ನು ಮೂರು ತುಂಡುಗಳನ್ನಾಗಿ ಕತ್ತರಿಸಿ ಗೋವಾದಲ್ಲೇ ಹೂತಿದ್ದ. ಬಳಿಕ ಬಾಲಕಿ ಕಾಣೆಯಾಗಿದ್ದಾಳೆ ಎಂದು ಪೋಷಕರಿಗೆ ತಿಳಿಸಿದ್ದ.

ಮಡಿಕೇರಿ: ಗೋವಾದಲ್ಲಿ ಸಫಿಯಾ ಕೊಲೆ ಪ್ರಕರಣ, 18 ವರ್ಷಗಳ ಬಳಿಕ ಬಾಲಕಿ ಅಂತ್ಯ ಸಂಸ್ಕಾರ
ಸಮಾಧಿ
Follow us
Gopal AS
| Updated By: ನಯನಾ ರಾಜೀವ್

Updated on: Nov 14, 2024 | 10:33 AM

ಗೋವಾದಲ್ಲಿ 18 ವರ್ಷಗಳ ಹಿಂದೆ ಬರ್ಬರವಾಗಿ ಹತ್ಯೆಯಾಗಿದ್ದ ಕೊಡಗಿನ ಬಾಲಕಿ ಸಫಿಯಾ ಅಂತ್ಯ ಸಂಸ್ಕಾರ ಇಸ್ಲಾಂ ಪದ್ಧತಿಯಂತೆ ಇದೀಗ ನೆರವೇರಿದೆ. ಕಾಸರಗೋಡಿನ ಕೆ.ಸಿ.ಹಂಝ ಎಂಬಾತ ಮನೆ ಕೆಲಸಕ್ಕೆಂದು ಬಾಲಕಿಯನ್ನು 2006ರಲ್ಲಿ ಗೋವಾಕ್ಕೆ ಕರೆದೊಯ್ದಿದ್ದ. ಬಳಿಕ ಬಿಸಿ ಗಂಜಿ ಮೈಮೇಲೆ ಬಿದ್ದು ಬಾಲಕಿ ತೀವ್ರವಾಗಿ ಗಾಯಗೊಂಡಿದ್ದಳು. ಬಾಲಕಾರ್ಮಿಕ ಪ್ರಕರಣ ದಾಖಲಾಗುವ ಹೆದರಿಕೆಯಿಂದ ಹಂಝ ಆಕೆಯನ್ನು ಕೊಲೆ ಮಾಡಿ, ಮೃತದೇಹವನ್ನು ಮೂರು ತುಂಡುಗಳನ್ನಾಗಿ ಕತ್ತರಿಸಿ ಗೋವಾದಲ್ಲೇ ಹೂತಿದ್ದ. ಬಳಿಕ ಬಾಲಕಿ ಕಾಣೆಯಾಗಿದ್ದಾಳೆ ಎಂದು ಪೋಷಕರಿಗೆ ತಿಳಿಸಿದ್ದ.

ಆಕೆಗೆ ಮನೆಕೆಲಸ ಮಾಡಿಕೊಂಡು ವಿದ್ಯಾಭ್ಯಾಸ ಮಾಡುವಂತೆ ಹೇಳಿ ಕಳುಹಿಸಿಕೊಟ್ಟಿದ್ದರು. ಆದರೆ ಕೆಲವು ತಿಂಗಳುಗಳ ಬಳಿಕ ಹಬ್ಬಕ್ಕೆ ಆಕೆಯನ್ನು ಕರೆದುಕೊಂಡುಬರುತ್ತೇನೆ ಎಂದು ಹೋಗಿದ್ದ ತಂದೆಗೆ ಆಘಾತ ಕಾದಿತ್ತು. ಸಫಿಯಾ ನಿನ್ನೆಯಷ್ಟೇ ಇಲ್ಲಿದ್ದಳು, ಈಗ ಎಲ್ಲಿಗೆ ಹೋಗಿದ್ದಾಳೆಂದು ಗೊತ್ತಿಲ್ಲ ಎಂದು ಕಥೆ ಕಟ್ಟಿದ್ದರು.

ಸಫಿಯಾಳನ್ನು 3 ಭಾಗಗಳಾಗಿ ಕತ್ತರಿಸಿ ಗೋವಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯ ಬಳಿ ಹೂತು ಹಾಕಿದ್ದರು. ಪೋಷಕರು ಕೂಡಲೇ ದೂರು ದಾಖಲಿಸಿದ್ದರು, ಸಫಿಯಾ ಕ್ರಿಯಾ ಸಮಿತಿ ಎಂಬ ಸಮಾನ ಮನಸ್ಕರ ಗುಂಪನ್ನು ರಚಿಸಿ 90 ದಿನಗಳ ಕಾಲ ಪ್ರತಿಭಟನೆಯನ್ನೂ ನಡೆಸಿದ್ದರು.

ಮತ್ತಷ್ಟು ಓದಿ: ಕಾಣೆಯಾಗಿ 18 ವರ್ಷಗಳ ಬಳಿಕ ಕೊಡಗಿನ ಬಾಲಕಿಯ ಅಸ್ತಿಪಂಜರ ಗೋವಾದಲ್ಲಿ ಪತ್ತೆ!

ಕೇರಳ ಸರ್ಕಾರವು ತನಿಖೆಯನ್ನು ಅಪರಾಧ ವಿಭಾಗಕ್ಕೆ ವರ್ಗಾಯಿಸಿತ್ತು. ನಂತರ 2008ರಲ್ಲಿ ಬಾಲಕಿಯ ಅಸ್ಥಿಪಂಜರ ಗೋವಾದಲ್ಲಿ ಪತ್ತೆಯಾಗಿತ್ತು. ಹಂಝನನ್ನು ಬಂಧಿಸಲಾಗಿತ್ತು. ಕಾಸರಗೋಡಿನ ಸೆಷನ್ಸ್​ ನ್ಯಾಯಲಯ ಆತನಿಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು. 2019ರಲ್ಲಿ ಕೇರಳ ಹೈಕೋರ್ಟ್ ಶಿಕ್ಷೆಯನ್ನು ಜೀವಾವಧಿಗೆ ಇಳಿಸಿತ್ತು, ಸಫಿಯಾಳ ಅಸ್ತಿಪಂಜರ ಕಾಸರಗೋಡು ನ್ಯಾಯಾಲಯದ ಸುಪರ್ದಿಯಲ್ಲೇ ಇತ್ತು.

ದೇಹದ ಅವಶೇಷಗಳನ್ನು ಹಸ್ತಾಂತರಿಸುವಂತೆ ಪೋಷಕರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ನವೆಂಬರ್ 6ರಂದು ಕಾಸರಗೋಡಿನ ಜಿಲ್ಲಾ ಪ್ರಧಾನ ನ್ಯಾಯಾಲಯ ತಲೆಬುರುಡೆ ಹಾಗೂ ಮೂಳೆಗಳನ್ನು ಹೆತ್ತವರ ವಶಕ್ಕೆ ನೀಡುವಂತೆ ಆದೇಶಿಸಿತ್ತು. ಸೋಮವಾರ ಅಸ್ಥಿಪಂಜರವನ್ನು ಕೊಚ್ಚಿನ್‌ನ ವಿಧಿವಿಜ್ಞಾನ ಪ್ರಯೋಗಾಲಯದಿಂದ ತಂದ ಪೋಷಕರು ಅಯ್ಯಂಗೇರಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಿದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಅದರಂತೆ ಕಾಸರಗೋಡು ನ್ಯಾಯಾಲಯದ ಮೂಲಕ ಸಫಿಯಾಳ ಪೋಷಕರು ಅಸ್ಥಿ ಪಂಜರಗಳನ್ನು ಪಡೆದುಕೊಂಡರು. ಕೊಚ್ಚಿಯಿಂದ ತರಲಾಗಿದ್ದ ಸಫಿಯಾಳ ಅಸ್ಥಿ ಪಂಜರವನ್ನು ಅಯ್ಯಂಗೇರಿ ಜಮಾತ್‍ನ ಖಬರ್‌ ಸ್ಥಾನದಲ್ಲಿ ಹೂಳುವ ಮೂಲಕ ಸಫಿಯಾಳ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು.

18 ವರ್ಷಗಳ ಬಳಿಕ ಮಗಳನ್ನ ತಾನು ಅಸ್ತಿಪಂಜರದ ರೂಪದಲ್ಲಿ ನೋಡವುಂತಾಯಿತಲ್ಲಾ ಅಂತ ಕಣ್ಣೀರು ಹಾಕುತ್ತಿದ್ದಾರೆ. ಯಾವುದೇ ಧರ್ಮವಾಗಲಿ. ಸಾವನ್ನಪ್ಪಿದ ವ್ಯಕ್ತಿಯ ದೇಹವನ್ನ ಶಾಸ್ತ್ರಬದ್ಧವಾಗಿ ಅಂತ್ಯಸಂಸ್ಕಾರ ಮಾಡಿದ್ರೆ ಮಾತ್ರ ಮುಕ್ತಿ ಸಿಗುತ್ತದೆ ಎನ್ನುವ ನಂಬಿಕೆ ಇದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಜಮೀರ್ ಅಹ್ಮದ್ ಮಾಡಿದ ಕಾಮೆಂಟ್​​ಗೆ ನಾವ್ಯಾರೂ ಪ್ರತಿಕ್ರಿಯಿಸಿಲ್ಲ: ನಿಖಿಲ್
ಜಮೀರ್ ಅಹ್ಮದ್ ಮಾಡಿದ ಕಾಮೆಂಟ್​​ಗೆ ನಾವ್ಯಾರೂ ಪ್ರತಿಕ್ರಿಯಿಸಿಲ್ಲ: ನಿಖಿಲ್