AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜೆಯೊಳಗೆ ಶುಲ್ಕ ನಿಗದಿ ಮಾಡುವಂತೆ ಡೆಡ್‌ಲೈನ್, ಇಲ್ಲದಿದ್ದರೆ ದೊಡ್ಡ ಮಟ್ಟದ ಪ್ರತಿಭಟನೆ -ಪೋಷಕರಿಂದ ಎಚ್ಚರಿಕೆ

ಶುಲ್ಕ ನಿಗದಿ ವಿಚಾರವಾಗಿ ಸಭೆ ನಡೆದು 2 ವಾರವಾಗಿದೆ. ಆದರೆ ಈವರೆಗೆ ಶುಲ್ಕ ನಿಗದಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನಸ್ಸು ಮಾಡಿಲ್ಲ. ಇದೇ ವಿಚಾರವಾಗಿ 2 ಬಾರಿ ಪೋಷಕರಿಂದ ಪ್ರತಿಭಟನೆ ನಡೆದಿದೆ. ಶಿಕ್ಷಣ ಸಚಿವರ ಮನೆ ಮುಂದೆಯೂ ಧರಣಿ ನಡೆಸಿದ್ದೆವು. ಆದ್ರೂ ಯಾವುದೇ ನಿರ್ಧಾರವನ್ನು ಮಾಡದ ಹಿನ್ನೆಲೆ ಇಂದು...

ಸಂಜೆಯೊಳಗೆ ಶುಲ್ಕ ನಿಗದಿ ಮಾಡುವಂತೆ ಡೆಡ್‌ಲೈನ್, ಇಲ್ಲದಿದ್ದರೆ ದೊಡ್ಡ ಮಟ್ಟದ ಪ್ರತಿಭಟನೆ -ಪೋಷಕರಿಂದ ಎಚ್ಚರಿಕೆ
ಸಂಗ್ರಹ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: Jan 28, 2021 | 1:07 PM

Share

ಬೆಂಗಳೂರು: ಖಾಸಗಿ ಶಾಲೆಗಳ ಶುಲ್ಕ ನಿಗದಿ ಮಾಡಲು ಶಿಕ್ಷಣ ಇಲಾಖೆಗೆ ಪೋಷಕರು ಡೆಡ್‌ಲೈನ್ ನೀಡಿದ್ದಾರೆ. ಇಂದು ಸಂಜೆಯೊಳಗೆ ಶುಲ್ಕ ನಿಗದಿ ಮಾಡದಿದ್ದರೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲು ಪೋಷಕರು ನಿರ್ಧಾರ ಮಾಡಿದ್ದಾರೆ.

ಶುಲ್ಕ ನಿಗದಿ ವಿಚಾರವಾಗಿ ಸಭೆ ನಡೆದು 2 ವಾರವಾಗಿದೆ. ಆದರೆ ಈವರೆಗೆ ಶುಲ್ಕ ನಿಗದಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನಸ್ಸು ಮಾಡಿಲ್ಲ. ಇದೇ ವಿಚಾರವಾಗಿ 2 ಬಾರಿ ಪೋಷಕರಿಂದ ಪ್ರತಿಭಟನೆ ನಡೆದಿದೆ. ಶಿಕ್ಷಣ ಸಚಿವರ ಮನೆ ಮುಂದೆಯೂ ಧರಣಿ ನಡೆಸಿದ್ದೆವು. ಆದ್ರೂ ಯಾವುದೇ ನಿರ್ಧಾರವನ್ನು ಮಾಡದ ಹಿನ್ನೆಲೆ ಇಂದು ಸಂಜೆಯೊಳಗೆ ಶುಲ್ಕ ನಿಗದಿ ಮಾಡದಿದ್ದರೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುವುದಾಗಿ ಪೋಷಕರು ಎಚ್ಚರಿಕೆ ನೀಡಿದ್ದಾರೆ.

75% ರಷ್ಟು ಶಾಲಾ ಶುಲ್ಕ ಕಡಿತ ಮಾಡಿ ಇನ್ನು ಕೆಲ ಖಾಸಗಿಗಳು ಶಾಲೆಗಳು ಈಗಾಗಲೇ20 ರಿಂದ 25% ರಷ್ಟು ಶುಲ್ಕ ಕಡಿಮೆ ಮಾಡುವ ಭರವಸೆ ನೀಡಿವೆ. ಆದ್ರೆ ಪೋಷಕರು 75% ರಷ್ಟು ಶಾಲಾ ಶುಲ್ಕ ಕಡಿತ ಮಾಡಬಹುದು ಕೇವಲ ಆನ್ಲೈನ್ ಕ್ಲಾಸ್ ನಡೆಸಿದಕ್ಕೆ ಪೂರ್ಣ ಪ್ರಮಾಣದ ಶುಲ್ಕ ಪಾವತಿ ಮಾಡಿಸಿಕೊಳ್ಳುವುದು ಸರಿಯಲ್ಲ ಅಂತ ಪೋಷಕರು ವಾದ ಮಾಡಿದ್ದಾರೆ. ವೆಚ್ಚಕ್ಕೆ ತಕ್ಕ ಶುಲ್ಕ ಪಡೆಯುವಂತೆ ಒತ್ತಾಯ ಮಾಡಿದ್ದಾರೆ. ಶಿಕ್ಷಣ ಸಚಿವರು ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲ್ಲಿ. ಇವತ್ತು ಸಂಜೆಯೊಳಗೆ ಶುಲ್ಕ ವಿಚಾರದ ಬಗ್ಗೆ ಅಂತಿಮ ತೀರ್ಮಾನ ಮಾಡಲಿ ಎಂದು ಆಗ್ರಹಿಸಿದ್ದಾರೆ.

ಸರ್ಕಾರಿ ಶಾಲೆಗಳಿಗೆ ಕಂಪ್ಯೂಟರ್, ಪುಸ್ತಕ ವಿತರಣೆ: ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಭಾಗಿ

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ