ತುಮಕೂರು: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದಂತೆ ಆಸ್ಪತ್ರೆಗಳಲ್ಲಿ ಬೆಡ್ಗಳ ಕೊರತೆ ಹೆಚ್ಚಾಗಿದೆ. ಬೆಡ್ಗಳು ಸಿಗದೆ ರಾಜ್ಯದಲ್ಲಿ ಹಲವರು ಮೃತಪಟ್ಟಿದ್ದಾರೆ. ಕೊರೊನಾ ಸೋಂಕು ತಗುಲಿದವರಿಗೂ ಹಾಗು ಸೋಂಕಿಲ್ಲದವರಿಗೂ ಆಸ್ಪತ್ರೆಗಳಲ್ಲಿ ಬೆಡ್ಗಳ ಕೊರತೆ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ನಿನ್ನೆ ನಾನ್ ಕೊವಿಡ್ ರೋಗಿಯೊಬ್ಬರು ಬೆಡ್ ಸಿಗದೆ ಮನೆಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಅದರಂತೆ ಇದೀಗ ತುಮಕೂರಿನಲ್ಲಿ ವ್ಯಕ್ತಿಯೊಬ್ಬರಿಗೆ ವಿಪರೀತವಾಗಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಆದರೆ ಆಸ್ಪತ್ರೆಯಲ್ಲಿ ಬೆಡ್ ಸಿಗದೆ 4 ದಿನದಿಂದ ರೋಗಿ ಪರದಾಟ ಪಡುತ್ತಿದ್ದಾರೆ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬೊಮ್ಮಲದೇವಿಪುರದ ಗ್ರಾಮದ ವ್ಯಕ್ತಿಗೆ ಅಪೆಂಡಿಕ್ಸ್ ಇದೆ. ವಿಪರೀತವಾದ ಹೊಟ್ಟೆ ನೋವಿನಿಂದ ಬಳಲುತ್ತಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೆಡ್ ಸಿಗದೆ ಸತತ ನಾಲ್ಕು ದಿನದಿಂದ ನರಕಯಾತನೆ ಅನುಭವಿಸುತ್ತಿದ್ದಾರೆ. ಚಿಕಿತ್ಸೆಗಾಗಿ ಆ್ಯಂಬುಲೆನ್ಸ್ನಲ್ಲಿ ತುಮಕೂರು ಜಿಲ್ಲಾಸ್ಪತ್ರೆ ಸೇರಿ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೂ ವ್ಯಕ್ತಿ ಅಲೆದಾಡಿದ್ದಾರೆ. ಆದರೆ ಯಾವ ಆಸ್ಪತ್ರೆಗಳಲ್ಲೂ ದಾಖಲಿಸಿಕೊಂಡಿಲ್ಲ. ಇದರಿಂದ ವ್ಯಕ್ತಿ ಮನೆಗೆ ಮರಳಿದ್ದಾರೆ.
ಮನೆಯಲ್ಲಿ ಹೊಟ್ಟೆ ನೋವು ತಾಳಲಾರದೆ ವ್ಯಕ್ತಿ ಒದ್ದಾಡುತ್ತಿದ್ದಾರೆ. ವೈದ್ಯರು ವ್ಯಕ್ತಿಗೆ ಅಪೆಂಡಿಕ್ಸ್ ಆಪರೇಷನ್ ಮಾಡಬೇಕೆಂದಿದ್ದರು. 48 ವರ್ಷದ ವ್ಯಕ್ತಿಗೆ ಕೊವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ಹಿನ್ನೆಲೆ ಆಪರೇಷನ್ ಮಾಡಲು ವೈದ್ಯರು ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ಇದನ್ನೂ ಓದಿ
ಉಸಿರಾಟ ಸಮಸ್ಯೆಯಿಂದ ಮಾಲೀಕ ಮೃತಪಡುತ್ತಿದ್ದಂತೆ ಶ್ವಾನವೂ ಸಾವು, ಬೆಂಗಳೂರಿನಲ್ಲಿ ಮನಕಲಕುವ ಘಟನೆ
(patient with abdominal pain is not getting a bed in hospital at tumkur)