ಕರ್ನಾಟಕ ಹೈಕೋರ್ಟ್​​ ಮುಖ್ಯ ನ್ಯಾಯಾಧೀಶರಾಗಿ ಪಿ.ಬಿ.ವರಾಳೆ ನೇಮಕ

ಬಾಂಬೆ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿಇದೀಗ ಕರ್ನಾಟಕ ಹೈಕೋರ್ಟ್​ಗೆ​​ ಮುಖ್ಯ ನ್ಯಾಯಾಧೀಶರಾಗಿ ನೇಮಕವಾಗಿದ್ದಾರೆ.

ಕರ್ನಾಟಕ ಹೈಕೋರ್ಟ್​​ ಮುಖ್ಯ ನ್ಯಾಯಾಧೀಶರಾಗಿ ಪಿ.ಬಿ.ವರಾಳೆ ನೇಮಕ
PB Varale
TV9kannada Web Team

| Edited By: Ramesh B Jawalagera

Sep 30, 2022 | 5:13 PM

ಬೆಂಗಳೂರು: ಕರ್ನಾಟಕ ಹೈಕೋರ್ಟ್​​  (Karnataka High Court)ಮುಖ್ಯ ನ್ಯಾಯಾಧೀಶರಾಗಿ ಪಿ.ಬಿ.ವರಾಳೆ ನೇಮಕವಾಗಿದ್ದಾರೆ. ಸುಪ್ರೀಂಕೋರ್ಟ್​​ ಕೊಲಿಜಿಯಂ ಶಿಫಾರಸು ಆಧರಿಸಿ ಇಂದು(ಸೆಪ್ಟೆಂಬರ್.30) ಪಿ.ಬಿ.ವರಾಳೆ (PB Varale) ಅವರನ್ನು ನೇಮಿಸಲಾಗಿದೆ.

ಬಾಂಬೆ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಲೆ ಅವರನ್ನು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಶಿಫಾರಸ್ಸು ಮಾಡಿತ್ತು.

ಇದನ್ನೂ ಓದಿ:ಭಾರತದ ಮುಂದಿನ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲ​ ಆರ್.ವೆಂಕಟರಮಣಿ ನೇಮಕ

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್‌ ಅವರ ನೇತೃತ್ವದ ಕೊಲಿಜಿಯಂ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ನ್ಯಾ. ವರಾಲೆ ಅವರು 1985ರ ಆಗಸ್ಟ್‌ನಲ್ಲಿ ವಕೀಲರಾಗಿ ನೋಂದಾಯಿಸಿಕೊಂಡಿದ್ದಾರೆ.

ವೃತ್ತಿಯ ಆರಂಭದಲ್ಲಿ ವಕೀಲರಾದ ಎಸ್‌ ಎನ್‌ ಲೋಯಾ ಅವರ ಬಳಿ ಕಿರಿಯ ವಕೀಲರಾಗಿ ವರಾಲೆ ಪ್ರಾಕ್ಟೀಸ್‌ ಆರಂಭಿಸಿದ್ರು. 1992ರವರೆಗೆ ಔರಂಗಾಬಾದ್‌ನ ಅಂಬೇಡ್ಕರ್‌ ಕಾನೂನು ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ ಕೆಲಸ ಮಾಡಿದ್ದರು. 2008ರ ಜುಲೈ 18ರಲ್ಲಿ ಬಾಂಬೆ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada