ವರ್ಕ್ ಫ್ರಂ ಹೋಂ ನಿಲ್ಲಿಸಿ.. ನಷ್ಟದಲ್ಲಿರುವವರಿಗೆ ಅನುಕೂಲವಾಗುತ್ತೆ – ಸಂಸದ ಪಿ.ಸಿ. ಮೋಹನ್

ಸರ್ಕಾರಕ್ಕೆ ನಷ್ಟ ಉಂಟಾಗುತ್ತಿದೆಯಂತೆ. ಹೀಗಾಗಿ ವರ್ಕ್ ಫ್ರಮ್ ಹೋಂ ರದ್ದು ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಡಿಸಿಎಂ ಅಶ್ವತ್ಥ್ ನಾರಾಯಣರಿಗೆ ಸಂಸದ ಪಿ.ಸಿ.ಮೋಹನ್ ಮನವಿ ಮಾಡಿಕೊಂಡಿದ್ದಾರೆ.

ವರ್ಕ್ ಫ್ರಂ ಹೋಂ ನಿಲ್ಲಿಸಿ.. ನಷ್ಟದಲ್ಲಿರುವವರಿಗೆ ಅನುಕೂಲವಾಗುತ್ತೆ - ಸಂಸದ ಪಿ.ಸಿ. ಮೋಹನ್
ಸಂಸದ ಪಿ.ಸಿ.ಮೋಹನ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Jan 05, 2021 | 12:49 PM

ಬೆಂಗಳೂರು: ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ IT-BT ಉದ್ಯಮಿಗಳಿಗೆ ವರ್ಕ್ ಫ್ರಮ್ ಹೋಮ್ ನೀಡಲಾಗಿತ್ತು. ಆದರೆ ಈಗ ವರ್ಕ್ ಫ್ರಮ್ ಹೋಂ ರದ್ದು ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಡಿಸಿಎಂ ಅಶ್ವತ್ಥ್ ನಾರಾಯಣರಿಗೆ ಸಂಸದ ಪಿ.ಸಿ.ಮೋಹನ್ ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಈ ಬಗ್ಗೆ ಅಬಕಾರಿ ಇಲಾಖೆ ಸಚಿವ ನಾಗೇಶ್‌ರಿಂದಲೂ ಒತ್ತಾಯ ಕೇಳಿ ಬಂದಿತ್ತು.

ರಾಜ್ಯದಲ್ಲಿ ಕೊರೊನಾ ಆರ್ಭಟ ಜೋರಾಗುತ್ತಿದ್ದಂತೆ ಎಲ್ಲವೂ ಬಂದ್ ಆಗಿತ್ತು. ಶಾಲೆ-ಕಾಲೇಜುಗಳ ಬಾಗಿಲು ಮುಚ್ಚಿದ್ದವು. ರಾಜ್ಯದಲ್ಲಿ ಕಠಿಣ ಕ್ರಮಗಳು ಜಾರಿಯಾಗಿದ್ದವು. ಲಾಕ್​ಡೌನ್ ಹೇರಲಾಗುತ್ತು. ಹಾಗೇ ನಿಮಗೆಲ್ಲಾ ತಿಳಿದಂತೆ ಸರ್ಕಾರ ಉದ್ಯಮಿಗಳು ಮನೆಯಲ್ಲೇ ಕೂತು ಕೆಲಸ ಮಾಡಲಿ ಎಂದು ವರ್ಕ್ ಫ್ರಮ್ ಹೋಮ್ ಘೋಷಿಸಿತ್ತು. ಆದರೆ ಈಗ ಪರಿಸ್ಥಿತಿ ಸುಧಾರಿಸಿದೆ. ಬಿಗಿದಿದ್ದ ಗಂಟಲು ಸರಳಾದಂತಾಗಿದೆ.

ಆರ್ಥಿಕತೆ ಹಂತ ಹಂತವಾಗಿ ಮೇಲೇಳುತ್ತಿದೆ. ವಿದ್ಯಾರ್ಥಿಗಳು ಶಾಲೆ-ಕಾಲೇಜಿನತ್ತ ಮುಖ ಮಾಡುತ್ತಿದ್ದಾರೆ. ಇಷ್ಟೆಲ್ಲಾ ಸುಧಾರಣೆಯಾದರೂ IT-BT ಉದ್ಯಮಿಗಳಿಗೆ ವರ್ಕ್ ಫ್ರಮ್ ಹೋಮ್ ಮಾತ್ರ ಕ್ಯಾನ್ಸಲ್ ಆಗಿಲ್ಲ. ಕೊರೊನಾ ಬಂದಾಗಿನಿಂದಲೂ ಮನೆಯಲ್ಲೇ ಕೆಲಸ ಮಾಡ್ತಿದ್ದಾರೆ. ಸದ್ಯ ಇದರಿಂದ ಸರ್ಕಾರಕ್ಕೆ ನಷ್ಟ ಉಂಟಾಗುತ್ತಿದೆಯಂತೆ. ಹೀಗಾಗಿ ವರ್ಕ್ ಫ್ರಮ್ ಹೋಂ ರದ್ದು ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಶಾಲಾ ಕಾಲೇಜು ಶುರು ಆದ್ಮೇಲೆ ಐಟಿ ಬಿಟಿ ಕಂಪನಿಗಳು ಯಾಕೆ ಆರಂಭ ಆಗ್ತಿಲ್ಲ? ಶಾಲಾ ಕಾಲೇಜು ಶುರು ಆದ್ಮೇಲೆ ಐಟಿ ಬಿಟಿ ಕಂಪನಿಗಳು ಯಾಕೆ ಆರಂಭ ಆಗ್ತಿಲ್ಲ ಅಂತ ಸಂಸದ ಪಿಸಿ ಮೋಹನ್ ಪ್ರಶ್ನಿಸಿದ್ದಾರೆ. ವರ್ಕ್ ಫ್ರಮ್ ಹೋಮ್‌ನಿಂದ ಅಬಕಾರಿ ಇಲಾಖೆಗೆ ಭಾರಿ ನಷ್ಟವಾಗಿದೆ. ಬಾರ್ & ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು, ಕ್ಯಾಬ್ ಚಾಲಕರು, ಸಣ್ಣ ಪುಟ್ಟ ಅಂಗಡಿಗಳು ನಷ್ಟದಲ್ಲಿವೆ. ಹೀಗಾಗಿ ವರ್ಕ್ ಫ್ರಮ್ ಹೋಮ್ ರದ್ದು ಮಾಡಿದರೆ ನಷ್ಟದಲ್ಲಿರುವವರಿಗೆ ಅನುಕೂಲವಾಗಲಿದೆ ಎಂದು ಮನವಿ ಮಾಡಿದ್ದಾರೆ.

‘Work from Home ಪದ್ಧತಿ ಕೊರೊನಾ ಮಹಾಮಾರಿ ಮುಗಿದ ಬಳಿಕವೂ ಮುಂದುವರಿಯಲಿದೆ, ಆದ್ರೇ?’

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ