ಎಸಿಬಿ ಬಲೆಗೆ 20 ಸಾವಿರ ಲಂಚ ಪಡೆಯುತ್ತಿದ್ದ ಪಿಡಿಒ ಅಧಿಕಾರಿ
ಶಿವಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಪುಷ್ಪಾ, ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದವರು. ಸದ್ಯ, ಇವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಧಾರವಾಡ: ಜಮೀನು ವಿಚಾರವಾಗಿ 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಪಿಡಿಒ ಅಧಿಕಾರಿ ಭ್ರಷ್ಟಾಚಾರ ವಿರೋಧಿ ಬ್ಯೂರೋ (ಎಸಿಬಿ) ಬಲೆಗೆ ಬಿದ್ದಿದ್ದಾರೆ.
ಶಿವಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಪುಷ್ಪಾ, ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದವರು. ಜಮೀನು ವಿಚಾರಕ್ಕೆ ಸಂಬಂಧಿಸಿ ಸಾಗರ ಹೂಗಾರ ಎಂಬುವವರ ಬಳಿ ಪುಷ್ಪಾ ತನ್ನ ಗಂಡ ಮಹಾಂತೇಶ್ ಮೂಲಕ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ಮಾಹಿತಿ ತಿಳಿದ ಎಸಿಬಿ, ಧಾರವಾಡದ ಸಪ್ತಾಪುರ ಬಡಾವಣೆಯ ಮನೆಯ ಮೇಲೆ ದಾಳಿ ಮಾಡಿ ಪಿಡಿಒ ಪುಷ್ಪಾ ಅವರನ್ನು ವಶಕ್ಕೆ ಪಡೆದಿದ್ದಾರೆ.