ಪೇಜಾವರ ಶ್ರೀ ಆರೋಗ್ಯದಲ್ಲಿ ವ್ಯತ್ಯಯ, ಮಣಿಪಾಲ ಆಸ್ಪತ್ರೆಗೆ ದಾಖಲು
ಉಡುಪಿ: ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳಿಗೆ ಉಸಿರಾಟದ ಸಮಸ್ಯೆ ಉಂಟಾಗಿದ್ದು, ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮುಂಜಾನೆ 5 ಗಂಟೆಗೆ ಖಾಸಗಿ ಆಸ್ಪತ್ರೆಯಿಂದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಗಳಿಗೆ ದೇಹಾರೋಗ್ಯ ಸ್ಥಿತಿ ಗಂಭೀರವಾಗಿತ್ತು. ಮಣಿಪಾಲದ ಕೆಎಂಸಿ ಆಸ್ಪತ್ರೆಯು ಶ್ರೀಗಳ ಆರೋಗ್ಯದ ಸ್ಥಿತಿಗತಿಯ ಮಾಹಿತಿ ನೀಡಲು ವೈದ್ಯಕೀಯ ಅಧೀಕ್ಷಕರಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಸದ್ಯ ವೆಂಟಿಲೇಟರ್ ಮೂಲಕ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಆಂಟಿಬಯೋಟಿಕ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪುತ್ತಿಗೆ ಶ್ರೀ, […]
ಉಡುಪಿ: ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳಿಗೆ ಉಸಿರಾಟದ ಸಮಸ್ಯೆ ಉಂಟಾಗಿದ್ದು, ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮುಂಜಾನೆ 5 ಗಂಟೆಗೆ ಖಾಸಗಿ ಆಸ್ಪತ್ರೆಯಿಂದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಗಳಿಗೆ ದೇಹಾರೋಗ್ಯ ಸ್ಥಿತಿ ಗಂಭೀರವಾಗಿತ್ತು. ಮಣಿಪಾಲದ ಕೆಎಂಸಿ ಆಸ್ಪತ್ರೆಯು ಶ್ರೀಗಳ ಆರೋಗ್ಯದ ಸ್ಥಿತಿಗತಿಯ ಮಾಹಿತಿ ನೀಡಲು ವೈದ್ಯಕೀಯ ಅಧೀಕ್ಷಕರಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಸದ್ಯ ವೆಂಟಿಲೇಟರ್ ಮೂಲಕ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಆಂಟಿಬಯೋಟಿಕ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಪುತ್ತಿಗೆ ಶ್ರೀ, ಸಚಿವರ ಭೇಟಿ: ಪುತ್ತಿಗೆ ಶ್ರೀ ಮತ್ತು ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ. ಸದ್ಯ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ಆಸ್ಪತ್ರೆ ಆವರಣದಲ್ಲಿ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸಲಾಗಿದೆ.