ಪೇಜಾವರ ಶ್ರೀ ಆರೋಗ್ಯದಲ್ಲಿ ವ್ಯತ್ಯಯ, ಮಣಿಪಾಲ ಆಸ್ಪತ್ರೆಗೆ ದಾಖಲು

ಉಡುಪಿ: ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳಿಗೆ ಉಸಿರಾಟದ ಸಮಸ್ಯೆ ಉಂಟಾಗಿದ್ದು, ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮುಂಜಾನೆ 5 ಗಂಟೆಗೆ ಖಾಸಗಿ ಆಸ್ಪತ್ರೆಯಿಂದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಗಳಿಗೆ ದೇಹಾರೋಗ್ಯ ಸ್ಥಿತಿ ಗಂಭೀರವಾಗಿತ್ತು. ಮಣಿಪಾಲದ ಕೆಎಂಸಿ ಆಸ್ಪತ್ರೆಯು ಶ್ರೀಗಳ ಆರೋಗ್ಯದ ಸ್ಥಿತಿಗತಿಯ ಮಾಹಿತಿ ನೀಡಲು ವೈದ್ಯಕೀಯ ಅಧೀಕ್ಷಕರಿಂದ ಹೆಲ್ತ್‌ ಬುಲೆಟಿನ್ ಬಿಡುಗಡೆ ಮಾಡಿದೆ. ಸದ್ಯ ವೆಂಟಿಲೇಟರ್ ಮೂಲಕ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಆಂಟಿಬಯೋಟಿಕ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪುತ್ತಿಗೆ ಶ್ರೀ, […]

ಪೇಜಾವರ ಶ್ರೀ ಆರೋಗ್ಯದಲ್ಲಿ ವ್ಯತ್ಯಯ, ಮಣಿಪಾಲ ಆಸ್ಪತ್ರೆಗೆ ದಾಖಲು
ಸಾಧು ಶ್ರೀನಾಥ್​

Updated on: Dec 20, 2019 | 11:36 AM

ಉಡುಪಿ: ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳಿಗೆ ಉಸಿರಾಟದ ಸಮಸ್ಯೆ ಉಂಟಾಗಿದ್ದು, ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮುಂಜಾನೆ 5 ಗಂಟೆಗೆ ಖಾಸಗಿ ಆಸ್ಪತ್ರೆಯಿಂದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಗಳಿಗೆ ದೇಹಾರೋಗ್ಯ ಸ್ಥಿತಿ ಗಂಭೀರವಾಗಿತ್ತು. ಮಣಿಪಾಲದ ಕೆಎಂಸಿ ಆಸ್ಪತ್ರೆಯು ಶ್ರೀಗಳ ಆರೋಗ್ಯದ ಸ್ಥಿತಿಗತಿಯ ಮಾಹಿತಿ ನೀಡಲು ವೈದ್ಯಕೀಯ ಅಧೀಕ್ಷಕರಿಂದ ಹೆಲ್ತ್‌ ಬುಲೆಟಿನ್ ಬಿಡುಗಡೆ ಮಾಡಿದೆ. ಸದ್ಯ ವೆಂಟಿಲೇಟರ್ ಮೂಲಕ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಆಂಟಿಬಯೋಟಿಕ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಪುತ್ತಿಗೆ ಶ್ರೀ, ಸಚಿವರ ಭೇಟಿ:
ಪುತ್ತಿಗೆ ಶ್ರೀ ಮತ್ತು ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ. ಸದ್ಯ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ಆಸ್ಪತ್ರೆ ಆವರಣದಲ್ಲಿ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us