ಲೈಂಗಿಕ ದೌರ್ಜನ್ಯ ಕೇಸ್: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್

ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ. ಈ ಪ್ರಕರಣ ದಿನದಿಂದ ದಿನಕ್ಕೆ ರೋಚಕತೆ ಪಡೆದುಕೊಳ್ಳುತ್ತಿದೆ. ಇದೀಗ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಜ್ವಲ್​ ರೇವಣ್ಣ ವಿರುದ್ಧ ಅರೆಸ್ಟ್​ ವಾರಂಟ್​ ಜಾರಿ ಮಾಡಿದೆ.

ಲೈಂಗಿಕ ದೌರ್ಜನ್ಯ ಕೇಸ್: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್
ಸಂಸದ ಪ್ರಜ್ವಲ್​ ರೇವಣ್ಣ
Follow us
Shivaprasad
| Updated By: ವಿವೇಕ ಬಿರಾದಾರ

Updated on: May 19, 2024 | 9:42 AM

ಬೆಂಗಳೂರು, ಮೇ 19: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್​ ರೇವಣ್ಣ (Prjwal Revanna) ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧನ ವಾರಂಟ್​​​ ಜಾರಿಗೊಳಿಸಿದೆ. ಸದ್ಯ ಪ್ರಜ್ವಲ್​ ರೇವಣ್ಣ ವಿದೇಶದಲ್ಲಿದ್ದು, ಭಾರತಕ್ಕೆ ಮರಳಿದ ಕೂಡಲೇ ಅವರನ್ನು ಬಂಧಿಸಲಾಗುತ್ತದೆ. ಜೊತೆಗೆ ಪ್ರಜ್ವಲ್ ಬಳಿಯಿರುವ ರಾಜತಾಂತ್ರಿಕ ಪಾಸ್​​ಪೋರ್ಟ್​ ರದ್ದತಿಗು ಕೂಡ ವಿಶೇಷ ತಿನಿಖಾ ದಳ (SIT) ಪ್ರಯತ್ನ ನಡೆಸುತ್ತಿದೆ.

ಮನೆಯ ಮಹಿಳಾ ಕೆಲಸದಾಳುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಹೊಳೆನರಸೀಪುರ ಠಾಣೆಯಲ್ಲಿ ಪ್ರಜ್ವಲ್ ಹಾಗೂ ಅವರ ತಂದೆ ಮತ್ತು ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಕೃತ್ಯದ ಸಂತ್ರಸ್ತೆ ಹೇಳಿಕೆ ಆಧರಿಸಿ ಪ್ರಜ್ವಲ್ ರೇವಣ್ಣ ಅವರ ಮೇಲೆ 376 ರಡಿ (ಅತ್ಯಾಚಾರ) ಸೆಕ್ಷನ್ ಅನ್ನು ಸಹ ಎಸ್‌ಐಟಿ ಸೇರಿಸಿತ್ತು. ಇದಾದ ಬಳಿಕ ವಿಚಾರಣೆಗೆ ಹಾಜರಾಗುವಂತೆ ಎಸ್​ಐಟಿ ನೋಟಿಸ್​ ನೀಡಿದ್ದರೂ, ಪ್ರಜ್ವಲ್​ ರೇವಣ್ಣ ಇನ್ನೂವರೆಗು ವಿಚಾರಣೆಗೆ ಹಾಜರಾಗಿಲ್ಲ.

ಪ್ರಕರಣಕ್ಕೆ ಪೂರಕವಾಗಿ ಕೆಲ ದಾಖಲೆಗಳನ್ನು ಸಂಗ್ರಹಿಸಿ ಎಸ್​ಐಟಿ ನ್ಯಾಯಾಲಯಕ್ಕೆ ಸಲ್ಲಿಸಿತು. ಈ ಪ್ರಕರಣ ಸಂಬಂಧ ವಿದೇಶದಲ್ಲಿರುವ ಪ್ರಜ್ವಲ್ ವಿರುದ್ಧ ಬಂಧನ ವಾರಂಟ್‌ ಜಾರಿಗೊಳಿಸುವಂತೆ ನ್ಯಾಯಾಲಯಕ್ಕೆ ಎಸ್​ಐಟಿ ಅಧಿಕಾರಿಗಳು ಮನವಿ ಮಾಡಿದ್ದರು.

ಇದನ್ನೂ ಓದಿ: ಜರ್ಮಿನಿಯಿಂದ ಲಂಡನ್‌ಗೆ ಪರಾರಿಯಾದ ಪ್ರಜ್ವಲ್​ ರೇವಣ್ಣ

ಪಾಸ್ ಪೋರ್ಟ್ ರದ್ದತಿಗೆ ಕೇಂದ್ರಕ್ಕೆ ಪತ್ರ

ಪ್ರಜ್ವಲ್​ ರೇವಣ್ಣ ಸಂಸದರಾಗಿರುವ ಕಾರಣ ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ವಿದೇಶಕ್ಕೆ ತೆರಳಿದ್ದಾರೆ. ಹೀಗಾಗಿ ಆ ಪಾಸ್ ಪೋರ್ಟ್ ರದ್ದಾದರೆ ಕೂಡಲೇ ಅವರು ಸ್ವದೇಶಕ್ಕೆ ಮರಳಬೇಕಾಗುತ್ತದೆ. ಈಗ ನ್ಯಾಯಾಲಯದ ಬಂಧನ ವಾರಂಟ್ ಆಧರಿಸಿ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಎಸ್‌ಐಟಿ ಪತ್ರ ಬರೆಯಲಿದೆ.

ಆರ್ಥಿಕವಾಗಿ ಕಟ್ಟಿಹಾಕಲು SIT ಮಾಸ್ಟರ್​​ ಪ್ಲ್ಯಾನ್

ವಿದೇಶದಲ್ಲಿರುವ ಪ್ರಜ್ವಲ್​ ರೇವಣ್ಣ ಅವರ ಖಾತೆಗೆ ಬೆಂಗಳೂರಿನಿಂದ ಲಕ್ಷಾಂತರ ಹಣ ವರ್ಗಾವಣೆಯಾಗಿದೆ ಎಂದು ಮಾಹಿತಿ ಎಸ್​ಐಟಿ ಅಧಿಕಾರಿಗಳಿಗೆ ದೊರೆತಿದೆ. ಹೀಗಾಗಿ ಹಣ ವರ್ಗಾವಣೆಯಾಗದಂತೆ ತಡೆಯಲು ಎಸ್​ಐಟಿ ಅಧಿಕಾರಿಗಳು ನ್ಯಾಯಾಲಯದ ಅನುಮತಿ ಪಡೆದು ಪ್ರಜ್ವಲ್​ ರೇವಣ್ಣ ಅವರ ಬ್ಯಾಂಕ್ ಖಾತೆಯನ್ನು ಫ್ರೀಜ್ ಮಾಡಲು ಸಿದ್ಧತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರ ಬ್ಯಾಂಕ್ ಖಾತೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ