ಬೆಂಗಳೂರು, ಮೇ 21: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದ್ದು, ರಾಜಕೀಯ ವಾಗ್ಯುದ್ದಕ್ಕೂ ಕಾರಣವಾಗಿದೆ. ಅಶ್ಲೀಲ ವಿಡಿಯೋಗಳ ಪೆನ್ಡ್ರೈವ್ ಪ್ರಕರಣವನ್ನು (Pen Drive Case) ಸಿಬಿಐಗೆ (CBI) ನೀಡಬೇಕೆಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸರ್ಕಾರಕ್ಕೆ ಒತ್ತಾಯಿಸುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಮಾತ್ರ ಇದಕ್ಕೆ ಒಪ್ಪುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಕಾನೂನು ಹೋರಾಟ ಮಾಡಲು ನಿರ್ಧರಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೇಳಿಬಂದಿರುವ ಆರೋಪದ ಬಗ್ಗೆ ಈಗಾಗಲೆ ತನಿಖೆ ನಡೆಯುತ್ತಿದೆ. ಆದರೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣ ಹಾಗೂ ಪೆನ್ಡ್ರೈವ್ ಮೂಲಕ ವಿವಿಧಡೆ ಹರಿಬಿಡಲಾಗಿದೆ. ಹೀಗೆ ಈ ವಿಡಿಯೋಗಳನ್ನು ಹರಿಬಿಟ್ಟು ಮಹಿಳೆಯರ ಮಾನಹಾನಿ ಮಾಡಲಾಗಿದೆ. ಅಷ್ಟೇ ಅಲ್ಲದೆ ಇದರಿಂದ ಹಲವು ಕುಟುಂಬಗಳು ಹಾಳಾಗಿವೆ. ಹೀಗಾಗಿ ವಿಡಿಯೋ ಹರಿಬಿಟ್ಟವರ ವಿರುದ್ಧ ಕ್ರಮ ಕೈಗೊಳ್ಳಲು ಜೆಡಿಎಸ್ ಲೀಗಲ್ ಟೀಮ್ ಈಗಾಗಲೇ ವಕೀಲರ ಜೊತೆ ಮಾತುಕತೆ ನಡೆಸಿದೆ.
ಹೀಗಾಗಿ ಈ ಪ್ರಕರಣವನ್ನು ವಿಡಿಯೋಗಳನ್ನು ಹರಿಬಿಟ್ಟವರ ವಿರುದ್ಧ ಕಾನೂನು ಹೋರಾಟ ನಡೆಸಲು ಹೆಚ್ಡಿ ಕುಮಾರಸ್ವಾಮಿ ಸಜ್ಜಾಗಿದ್ದಾರೆ. ಪ್ರಕರಣವನ್ನು ಸಿಬಿಐಗೆ ನೀಡುವಂತೆ ಹೆಚ್ಡಿ ಕುಮಾರಸ್ವಾಮಿಯವರು ನ್ಯಾಯಾಲಯದ ಮೂಲಕ ಸರ್ಕಾರದ ಮೇಲೆ ಒತ್ತಡ ತರಲು ತೀರ್ಮಾನಿಸಿದ್ದಾರೆ.
ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಕೇಸ್: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾಗಿರುವ ಸಂತ್ರಸ್ತೆಯರ ವಿಡಿಯೋಗಳನ್ನು ಪೆನ್ಡ್ರೈವ್ನಲ್ಲಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ. ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣ ಮತ್ತು ಪೆನ್ಡ್ರೈವ್ ಮೂಲಕ ಹಾಸನ ಜಿಲ್ಲೆಯಾದ್ಯಂತ ಹರಿಬಿಟ್ಟಿರುವ ಆರೋಪ ಕೇಳಿಬಂದಿದೆ. ಈ ವಿಡಿಯೋದಲ್ಲಿನ ಸಂತ್ರಸ್ತೆಯರ ಮುಖಗಳನ್ನು ಬ್ಲರ್ ಮಾಡದೆ ಹಾಗೆ ಹರಿಬಿಡಲಾಗಿದ್ದು, ಮಹಿಳೆಯರ ಗೌರವಕ್ಕೆ ದಕ್ಕೆ ತರಲಾಗಿದೆ. ಹೀಗಾಗಿ ಈ ವಿಡಿಯೋಗಳನ್ನು ಹರಿಬಿಟ್ಟವರ ವಿರುದ್ಧ ಕಾನೂನು ಹೋರಾಟ ನಡೆಸಲು ಹೆಚ್ಡಿ ಕುಮಾರಸ್ವಾಮಿ ನಿರ್ಧರಿಸಿದ್ದಾರೆ.
ಹರಿಬಿಡಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಮಹಾನಾಯಕ, ತಿಮಿಂಗಿಲಿನ ಕೈವಾಡವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಇಷ್ಟು ದಿನಗಳ ಕಾಲ ಪರೋಕ್ಷವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ಮಾಡುತ್ತಿದ್ದರು. ಇದೀಗ ನೇರ-ನೇರ ವಾಗ್ದಾಳಿ ಮಾಡಿದ್ದಾರೆ. ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಆಡಿಯೋದಲ್ಲಿ ಯಾರು ಮತನಾಡಿದ್ದು, ಸದಾಶಿವನಗರಕ್ಕೆ ಯಾರನ್ನು ಭೇಟಿ ಮಾಡಲು ಹೇಳಿದ್ದರು. ವಿಡಿಯೋ ಬಿಟ್ಟಿದ್ದೇ ಕುಮಾರಸ್ವಾಮಿ ಅಂತ ನನ್ನ ಹೆಸರು ಹೇಳಿ ಎಂದು ಹೇಳಿದ್ದೀರಾ ಸಿಡಿ ಶಿವು ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ