ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ದಂಡದ ಬಿಸಿ: ಬಿಎಂಟಿಸಿ ಖಜಾನೆಗೆ ಹರಿದು ಬಂತು ಲಕ್ಷ ಲಕ್ಷ ಹಣ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೆಟ್​ ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ 18,378 ಟ್ರಿಪ್​ಗಳನ್ನು ತಪಾಸಿಸಿ 7,68,910 ರೂ. ದಂಡ ವಿಧಿಸಲಾಗಿದೆ. ಆ ಮೂಲಕ ಬಿಎಂಟಿಸಿಗೆ ಲಕ್ಷ ಲಕ್ಷ ರೂ. ಹಣ ಹರಿದು ಬಂದಿದೆ.

ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ದಂಡದ ಬಿಸಿ: ಬಿಎಂಟಿಸಿ ಖಜಾನೆಗೆ ಹರಿದು ಬಂತು ಲಕ್ಷ ಲಕ್ಷ ಹಣ
ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ದಂಡದ ಬಿಸಿ: ಬಿಎಂಟಿಸಿ ಖಜಾನೆಗೆ ಹರಿದು ಬಂತು ಲಕ್ಷ ಲಕ್ಷ ಹಣ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jul 23, 2024 | 6:47 PM

ಬೆಂಗಳೂರು, ಜುಲೈ 23: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಜೂನ್ ತಿಂಗಳಲ್ಲಿ ವಿವಿಧ ನಿಯಮಗಳ ಉಲ್ಲಂಘನೆ ವಿಚಾರವಾಗಿ 3708 ಪ್ರಯಾಣಿಕರಿಗೆ ದಂಡ (fine) ವಿಧಿಸುವ ಮೂಲಕ ಒಟ್ಟು 8,11,510 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ. ಆ ಮೂಲಕ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಬಿಎಂಟಿಸಿ ಬಿಸಿ ಮುಟ್ಟಿಸಿದೆ. ದಂಡದಿಂದ ಬಿಎಂಟಿಸಿಗೆ ಲಕ್ಷ ಲಕ್ಷ ರೂ. ಹಣ ಹರಿದು ಬಂದಿದೆ.

ಈ ಬಗ್ಗೆ ಬಿಎಂಟಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಮಹಿಳೆಯರ ಸೀಟ್​ನಲ್ಲಿ ಕುಳಿತು ಪ್ರಯಾಣಿಸಿದ್ದ ಹಾಗೂ ಟಿಕೆಟ್‌ ರಹಿತವಾಗಿ ಪ್ರಯಾಣಿಸಿದವರಿಂದ ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿಸಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೆಟ್​ ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ ತನಿಖಾ ತಂಡಗಳು ಜೂನ್​ ತಿಂಗಳಲ್ಲಿ ಒಟ್ಟು 18,378 ಟ್ರಿಪ್​ಗಳನ್ನು ತಪಾಸಿಸಿ 3750 ಟಿಕೆಟ್​ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು 7,68,910 ರೂ. ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ಧ 1014 ಪ್ರಕರಣಗಳನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: ವಾಕರಸಾ ಸಂಸ್ಥೆಯಿಂದ ವಿಶೇಷ ಟೂರ್ ಪ್ಯಾಕೇಜ್: ಸ್ಥಳ, ದರ ಬಗ್ಗೆ ಇಲ್ಲಿದೆ ಮಾಹಿತಿ

ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 426 ಪುರುಷ ಪ್ರಯಾಣಿಕರಿಂದ ಒಟ್ಟು 42,600 ರೂ. ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿದೆ.

ಒಟ್ಟಾರೆಯಾಗಿ ಜೂನ್ ತಿಂಗಳಲ್ಲಿ 4,176 ಪ್ರಯಾಣಿಕರಿಂದ ಒಟ್ಟು 8,11,510 ರೂ. ದಂಡವನ್ನು ವಸೂಲಿ ಮಾಡಲಾಗಿದೆ. ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್​, ದಿನದ ಪಾಸು, ವಾರದ ಪಾಸು, ಮಾಸಿಕ ಪಾಸುಗಳನ್ನು ಪಡೆದು ಪ್ರಯಾಣಿಸಬೇಕು. ಇದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದಾಗಿದೆ ಹಾಗೂ ಇಂತಹ ಪ್ರವೃತ್ತಿಯಿಂದ ಸಂಸ್ಥೆಯು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಸಹಾಯವಾಗುತ್ತದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ಹುಬ್ಬಳ್ಳಿ-ಸೊಲ್ಲಾಪುರ, ಬೆಂಗಳೂರು ಸೇರಿದಂತೆ ರಾಜ್ಯದ ಈ ರೈಲುಗಳ ಸಮಯ ಬದಲಾವಣೆ

ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಆಸನಗಳನ್ನು ತೆರವು ಮಾಡಿಕೊಡುವ ಮೂಲಕ ಅವರಿಗೆ ಕುಳಿತುಕೊಳ್ಳಲು ಅವಕಾಶ ನೀಡಬೇಕೆಂದು ಕೋರಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.