ದೇವರಾಜೇಗೌಡ ತಲೆಕೆಟ್ಟವನು, ಆಸ್ಪತ್ರೆಗೆ ಸೇರಿಸಬೇಕು ಎಂದ ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರಿಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಾನು ದೇವರಾಜೇಗೌಡ ಜತೆ ಯಾವುದೇ ಮಾತುಕತೆ ನಡೆಸಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ, ತಲೆಕೆಡಿಸಿಕೊಳ್ಳುವುದಿಲ್ಲ. ಆತ ತಲೆಕೆಟ್ಟವನು, ಆಸ್ಪತ್ರೆಗೆ ಸೇರಿಸಬೇಕು. ನನ್ನ ಹೆಸರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಪಕ್ಷ ಎಂದ ಮೇಲೆ ಸಾವಿರಾರು ಜನ ಭೇಟಿಯಾಗಿ ಹೋಗುತ್ತಾರೆ. ಯಾವ ಹುತ್ತದಲ್ಲಿ ಯಾವ ಹಾವು ಇರುತ್ತೋ ಯಾರಿಗೆ ಗೊತ್ತು ಎಂದಿದ್ದಾರೆ.
ಬೆಂಗಳೂರು, ಮೇ 18: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ತಿದ್ದಂತೆ, ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಶದಲ್ಲಿರುವ ಬಿಜೆಪಿ ಮುಂಖಡ, ವಕೀಲ ದೇವರಾಜೇಗೌಡ (Devarajegowda) ನಿನ್ನೆ ಇದೆರೆಲ್ಲದರ ಹಿಂದೆ ಡಿ.ಕೆ.ಶಿವಕುಮಾರ್ ಕೈವಾಡ ಇದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದೀಗ ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ದೇವರಾಜೇಗೌಡ ಏನು ಬೇಕಾದರೂ ಮಾತನಾಡಿಕೊಳ್ಳಲಿ. ತಲೆಕೆಟ್ಟವನು, ಆಸ್ಪತ್ರೆಗೆ ಸೇರಿಸಬೇಕು. ನನ್ನ ಹೆಸರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ನಾನು ದೇವರಾಜೇಗೌಡ ಜತೆ ಯಾವುದೇ ಮಾತುಕತೆ ನಡೆಸಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ, ತಲೆಕೆಡಿಸಿಕೊಳ್ಳುವುದಿಲ್ಲ. ಪಕ್ಷ ಎಂದ ಮೇಲೆ ಸಾವಿರಾರು ಜನ ಭೇಟಿಯಾಗಿ ಹೋಗುತ್ತಾರೆ. ಯಾವ ಹುತ್ತದಲ್ಲಿ ಯಾವ ಹಾವು ಇರುತ್ತೋ ಯಾರಿಗೆ ಗೊತ್ತು ಎಂದಿದ್ದಾರೆ.
ಇದನ್ನೂಓದಿ: ಪೆನ್ಡ್ರೈವ್ ಕೇಸ್: ಡಿಕೆ ಶಿವಕುಮಾರ್ ವಿರುದ್ಧ 100 ಕೋಟಿ ರೂ. ಆಫರ್ ಬಾಂಬ್ ಸಿಡಿಸಿದ ದೇವರಾಜೇಗೌಡ
ಆರೋಪ ಮಾಡಬೇಕು ಮಾಡುತ್ತಾರೆ. ಏನೇನೊ ಆಗುತ್ತೆ ನೀವು ದೊಡ್ಡದಾಗಿ ಮಾಡುತ್ತಿದ್ದೀರಿ. ಮಾಧ್ಯಮಗಳಿಗೆ ನಿಮ್ಮದೇ ಆದ ಇಮೇಜ್ ಇದೆ. ಮುಖಪುಟದಲ್ಲಿ ನ್ಯೂಸ್ ಕೂಡ ಆಗಿದೆ. ಅವರ ಬಗ್ಗೆ ಅಲ್ಲ, ನಿಮ್ಮ ಬಗ್ಗೆ ಬೇಜಾರ್ ಆಗುತ್ತಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಟ್ವೀಟ್
ದೇವರಾಜೇಗೌಡನ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶವಿಲ್ಲ,
ದಿನಕ್ಕೊಂದು ಮಾತಾಡುವ ದೇವರಾಜೇಗೌಡ ಮಹಿಳೆಯರ ಮಾನ ಕಳೆದ ಪ್ರಕರಣವನ್ನು ಬೇರೆಡೆಗೆ ತಿರುಗಿಸಿ, ರಾಜಕೀಕರಣಗೊಳಿಸಿ ದಿಕ್ಕು ತಪ್ಪಿಸುವ ಪ್ರಯತ್ನದಲ್ಲಿದ್ದಾರೆ.
SIT ಅಧಿಕಾರಿಗಳು ದೇವರಾಜೇಗೌಡರಿಗೆ ಮಾನಸಿಕ ಚಿಕೆತ್ಸೆ ಕೊಡಿಸುವುದು ಒಳ್ಳೆಯದು!
ಬ್ರದರ್ ಸ್ವಾಮಿಗಳು ಹೇಳಿಕೊಟ್ಟ ಮಾತನ್ನು…
— Karnataka Congress (@INCKarnataka) May 18, 2024
ಪೆನ್ಡ್ರೈವ್ ಬಗ್ಗೆ ಹೆಚ್.ಡಿ.ದೇವೇಗೌಡ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ದೇವೇಗೌಡರು ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತೇನೆ. ದೇವರು ಸಂತೋಷ ನೀಡಲಿ, ಆಯಸ್ಸು ನೀಡಲಿ. ಸರ್ಕಾರದ ಪರ ದೇವೇಗೌಡರಿಗೆ ಶುಭ ಹಾರೈಸುತ್ತೇನೆ ಎಂದರು.
ಯಾರು ಅನುಮತಿ ಕೊಟ್ಟರು ಅಂತಾ ಅವರೇ ಹೇಳಬೇಕು
ಬಿಡಿಎ ಕಾಂಪ್ಲೆಕ್ಸ್ಗಳನ್ನು ತೆರವು ಮಾಡಲಾಗುತ್ತಿದ್ದೆ ಎಂದು ವಿರೋಧ ಪಕ್ಷದ ನಾಯಕ ಆರೋಪ ವಿಚಾರವಾಗಿ ಮಾತನಾಡಿದ್ದು, ಯಾರು ಅನುಮತಿ ಕೊಟ್ಟರು ಅಂತಾ ಅವರೇ ಹೇಳಬೇಕು. ನಾನು ಎಲ್ಲಾ ಮಾಹಿತಿ ಪಡೆದುಕೊಂಡಿದ್ದೇನೆ. ಬೊಮ್ಮಾಯಿ ಅವಧಿಯಲ್ಲೇ ಅಗ್ರಿಮೆಂಟ್ ಮಾಡಿಕೊಂಡಿದ್ದರು. ಅವರೇ ಸಮಿತಿ ಮಾಡಿದ್ದರು.
ಇದನ್ನೂ ಓದಿ: ದೇವರಾಜೇಗೌಡ ಆರೋಪದ ಬೆನ್ನಲ್ಲೇ ಪೆನ್ಡ್ರೈವ್ ಗ್ಯಾಂಗ್ ಎಂದು ಸಚಿವರ ಹೆಸರು ಬಿಚ್ಚಿಟ್ಟ ಜೆಡಿಎಸ್
ಲೀಸ್ ಕೊಟ್ಟಿದ್ದು ಇದರಿಂದ ಸರ್ಕಾರಕ್ಕೆ ಆದಾಯ ಬರುತ್ತೆ. ಹಿಂದಿನ ಸರ್ಕಾರದ ನಿರ್ಧಾರವನ್ನೇ ಈಗ ಅನುಸರಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:16 pm, Sat, 18 May 24