ಪೆನ್​ಡ್ರೈವ್​ ಕೇಸ್: ದೇವೇಗೌಡರ ವಿರುದ್ಧ ಅವಹೇಳನಕಾರಿ ಹೇಳಿಕೆ: ಡಿಕೆಶಿ​, ಶಿವರಾಮೇಗೌಡ ವಿರುದ್ಧ ನಾಳೆ ಜೆಡಿಎಸ್​ ಪ್ರತಿಭಟನೆ

ಮಾಜಿ ಸಂಸದ ಎಲ್‌ಆರ್ ಶಿವರಾಮೇಗೌಡ ಹಾಗೂ ವಕೀಲ‌ ದೇವರಾಜೇಗೌಡ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಇದರಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡರ ವಿರುದ್ಧವಾಗಿ ವೈಯಕ್ತಿಕವಾಗಿ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಡಿಕೆ ಶಿವಕುಮಾರ್ ಮತ್ತು ಎಲ್​​ಆರ್ ಶಿವರಾಮೇಗೌಡರ ವಿರುದ್ಧ ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ನಾಳೆ ಬೃಹತ್ ಪ್ರತಿಭಟನೆಗೆ ಮುಂದಾಗಿದೆ.

ಪೆನ್​ಡ್ರೈವ್​ ಕೇಸ್: ದೇವೇಗೌಡರ ವಿರುದ್ಧ ಅವಹೇಳನಕಾರಿ ಹೇಳಿಕೆ: ಡಿಕೆಶಿ​, ಶಿವರಾಮೇಗೌಡ ವಿರುದ್ಧ ನಾಳೆ ಜೆಡಿಎಸ್​ ಪ್ರತಿಭಟನೆ
ಪೆನ್​ಡ್ರೈವ್​ ಕೇಸ್: ದೇವೇಗೌಡರ ವಿರುದ್ಧ ಅವಹೇಳನಕಾರಿ ಹೇಳಿಕೆ: ಡಿಕೆಶಿ​, ಶಿವರಾಮೇಗೌಡ ವಿರುದ್ಧ ನಾಳೆ ಜೆಡಿಎಸ್​ ಪ್ರತಿಭಟನೆ
Follow us
|

Updated on: May 19, 2024 | 9:38 PM

ಬೆಂಗಳೂರು, ಮೇ 19: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಸಂಸದ ಪ್ರಜ್ವಲ್ (Prajwal Revanna) ಪೆನ್​ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳುತ್ತಿದೆ. ಕಾಂಗ್ರೆಸ್ ಹಾಗೂ ಮೈತ್ರಿ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳೇ ನಡೆಯುತ್ತಿವೆ. ಇದರ ಬೆನ್ನಲ್ಲೇ ಇಂದು ಮಾಜಿ ಸಂಸದ ಎಲ್‌ಆರ್ ಶಿವರಾಮೇಗೌಡ ಹಾಗೂ ವಕೀಲ‌ ದೇವರಾಜೇಗೌಡ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ವೈರಲ್​ ಆದ ಆಡಿಯೋದಲ್ಲಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಮತ್ತು ಎಲ್​ಆರ್ ಶಿವರಾಮೇಗೌಡ ವಿರುದ್ಧ ಜೆಡಿಎಸ್​​ ನಾಳೆ ಫ್ರೀಡಂ ಪಾರ್ಕ್​ನಲ್ಲಿ ಬೃಹತ್ ಪ್ರತಿಭಟನೆಗೆ ಮುಂದಾಗಿದೆ.

ಈ ಕುರಿತಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಮಾಜಿ ಶಾಸಕರು ಹಾಗೂ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ, ‘ರಾಜ್ಯ ಕಾಂಗ್ರೆಸ್ ದುರಾಡಳಿತ ಸರ್ಕಾರದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪಿತೂರಿ ಹಾಗೂ ಕುಮ್ಮಕ್ಕಿನಿಂದ ಎಲ್​​ಆರ್ ಶಿವರಾಮೇಗೌಡ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡರ ವಿರುದ್ಧವಾಗಿ ವೈಯಕ್ತಿಕವಾಗಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಪೆನ್​ಡ್ರೈವ್​ ಕೇಸ್: ಶಿವರಾಮೇಗೌಡ, ದೇವರಾಜೇಗೌಡ, ಡಿಕೆಶಿ ​ಸೀಕ್ರೆಟ್ ಆಡಿಯೋ​ ವೈರಲ್

ಇದನ್ನು ಖಂಡಿಸಿ ಡಿಕೆ ಶಿವಕುಮಾರ್ ಮತ್ತು ಎಲ್​​ಆರ್ ಶಿವರಾಮೇಗೌಡರ ವಿರುದ್ಧ ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ನಾಳೆ (ಮೇ 20) ಸೋಮವಾರ ಬೆಳಗ್ಗೆ 11:00 ಗಂಟೆಗೆ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ಪೆನ್​ಡ್ರೈವ್ ಪ್ರಕರಣ: ಬೆಂಕಿ ಇಲ್ಲದೇ ಹೊಗೆಯಾಡಲ್ಲ: ವಿಪಕ್ಷ ನಾಯಕ ಅಶೋಕ್ ಸ್ಫೋಟಕ ಹೇಳಿಕೆ​

ಆದ್ದರಿಂದ ಬೆಂಗಳೂರು ಮಹಾನಗರ ಜನತಾದಳ (ಜಾತ್ಯತೀತ) ಪಕ್ಷದ ಮುಖಂಡರು, ಶಾಸಕರು, ಮಾಜಿ ಸಚಿವರು, ಮಾಜಿ ಸಂಸದರು, ಮಾಜಿ ಶಾಸಕರು, ಪದಾಧಿಕಾರಿಗಳು, ವಿಧಾನಸಭಾ ಕ್ಷೇತ್ರ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ವಿವಿಧ ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಬಿಬಿಎಂಪಿ ಮಾಜಿ ಸದಸ್ಯರು, ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಚಿಸಿರುವ ಆಕಾಂಕ್ಷಿಗಳು, ವಾರ್ಡ್ ಅಧ್ಯಕ್ಷರುಗಳು, ಹಾಗೂ ಕಾರ್ಯಕರ್ತರು ತಪ್ಪದೇ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ’ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.