ಲೈಂಗಿಕ ದೌರ್ಜನ್ಯ ಆರೋಪ: ವಿದೇಶದಲ್ಲಿರುವ ಪ್ರಜ್ವಲ್ನನ್ನು ಆರ್ಥಿಕವಾಗಿ ಕಟ್ಟಿಹಾಕಲು SIT ಮಾಸ್ಟರ್ ಪ್ಲ್ಯಾನ್
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ. ಈ ಪ್ರಕರಣ ದಿನದಿಂದ ದಿನಕ್ಕೆ ರೋಚಕತೆ ಪಡೆದುಕೊಳ್ಳುತ್ತಿದೆ. ಇದೀಗ, ಪ್ರಜ್ವಲ್ ರೇವಣ್ಣ ಅವರ ಬ್ಯಾಂಕ್ ಖಾತೆಗೆ ಬೆಂಗಳೂರಿನಿಂದ ಲಕ್ಷಾಂತರ ರೂಪಾಯಿ ಹಣ ವರ್ಗಾವಣೆಯಾಗಿದೆ ಎಂಬ ಮಾಹಿತಿ ದೊರೆತಿದೆ.
ಬೆಂಗಳೂರು, ಮೇ 18: ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿಶೇಷ ತನಿಖಾ ದಳ (SIT) ಮೋಸ್ಟ್ ವಾಂಟೆಡ್ ಲಿಸ್ಟ್ನಲ್ಲಿದ್ದಾರೆ. ಲೈಂಗಿಕ ದೌರ್ಜನ್ಯ ಆರೋಪಿ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆ. ಇತ್ತ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಈಗಾಗಲೆ ನೋಟಿಸ್ ನೀಡಿದ್ದರೂ ಕೂಡ ಪ್ರಜ್ವಲ್ ರೇವಣ್ಣ ಮಾತ್ರ ಹಾಜರಾಗುತ್ತಿಲ್ಲ. ವಿದೇಶದಲ್ಲೇ ಕಾಲ ಕಳೆಯುತ್ತಿದ್ದಾರೆ. ಹೀಗಾಗಿ ಪ್ರಜ್ವಲ್ ರೇವಣ್ಣ ಅವರನ್ನು ಆರ್ಥಿಕವಾಗಿ ಕಟ್ಟಿಹಾಕಲು ಎಸ್ಐಟಿ ಪ್ಲ್ಯಾನ್ ಮಾಡಿದೆ.
ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ಖಾತೆಗೆ ಬೆಂಗಳೂರಿನಿಂದ ಲಕ್ಷಾಂತರ ಹಣ ವರ್ಗಾವಣೆಯಾಗಿದೆ ಎಂದು ಮಾಹಿತಿ ಎಸ್ಐಟಿ ಅಧಿಕಾರಿಗಳಿಗೆ ದೊರೆತಿದೆ. ಹೀಗಾಗಿ ಹಣ ವರ್ಗಾವಣೆಯಾಗದಂತೆ ತಡೆಯಲು ಎಸ್ಐಟಿ ಅಧಿಕಾರಿಗಳು ನ್ಯಾಯಾಲಯದ ಅನುಮತಿ ಪಡೆದು ಪ್ರಜ್ವಲ್ ರೇವಣ್ಣ ಅವರ ಬ್ಯಾಂಕ್ ಖಾತೆಯನ್ನು ಫ್ರೀಜ್ ಮಾಡಲು ಸಿದ್ಧತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರ ಬ್ಯಾಂಕ್ ಖಾತೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
2 ಬಾರಿ ವಿಮಾನ ಟಿಕೆಟ್ ಕ್ಯಾನ್ಸಲ್
ಪ್ರಜ್ವಲ್ ರೇವಣ್ಣ ಈಗಾಗಲೇ 2 ಬಾರಿ ಟಿಕೆಟ್ ಕ್ಯಾನ್ಸಲ್ ಮಾಡಿದ್ದಾರೆ. ಮೇ 03 ಮತ್ತು 15 ರಂದು ಭಾರತಕ್ಕೆ ಬರಲು ವಿಮಾನದ ಟಿಕೆಟ್ ಬುಕ್ ಮಾಡಿ ಕ್ಯಾನ್ಸಲ್ ಮಾಡಿದ್ದಾರೆ. ಹೀಗಾಗಿ ಅಧಿಕಾರಿಗಳು ಮುಂದಿನ ಟಿಕೆಟ್ ಬುಕ್ಕಿಂಗ್ ಮೇಲೆ ಹದ್ದಿನ ಕಣ್ಣಿಟ್ಟು ಕಾಯುತ್ತಿದ್ದಾರೆ.
ಪ್ರಜ್ವಲ್ ಪೆನ್ಡ್ರೈ ರೆಡಿ ಮಾಡಿದ್ದು ಡಿಕೆ ಶಿವಕುಮಾರ್
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಪೆನ್ಡ್ರೈವ್ ಪೆನ್ಡ್ರೈವ್ ರೆಡಿ ಮಾಡಿದ್ದೇ ಡಿ.ಕೆ.ಶಿವಕುಮಾರ್. ಹ್ಯಾಂಡಲ್ ಮಾಡಲು ನಾಲ್ವರು ಸಚಿವರ ಸಮಿತಿ ರಚಿಸಿದ್ದರು. ಅಲ್ಲದೆ ಪೆನ್ಡ್ರೈವ್ ಹಂಚಿಕೆ ಮಾಡಿದ್ದು ಹೆಚ್ಡಿ ಕುಮಾರಸ್ವಾಮಿ ಅಂತ ಹೇಳಲು ನನಗೆ 100 ಕೋಟಿ ಆಫರ್ ನೀಡಿದ್ದರು ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ.
ಇದನ್ನೂ ಓದಿ: ಜರ್ಮಿನಿಯಿಂದ ಲಂಡನ್ಗೆ ಪರಾರಿಯಾದ ಪ್ರಜ್ವಲ್ ರೇವಣ್ಣ
ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದವ ಬಂಧನ
ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪಿಯನ್ನು ಕುದುರೆಮುಖ ಠಾಣೆ ಪೊಲೀಸರು ಬಂಧಿಸಿದ್ದರು. ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಬಂಧಿತ ಆರೋಪಿ. ಆರೋಪಿ ಪ್ರಜ್ವಲ್, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಎಂದು ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡಿದ್ದನು. ಪ್ರಜ್ವಲ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಐಪಿಸಿ ಸೆಕ್ಷನ್ 67,67 (ಎ) ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಪ್ರಜ್ವಲ್ ಟ್ರೋಲ್ ಪೇಜ್ ಅಡ್ಮಿನ್ ಆಗಿದ್ದಾನೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:13 am, Sat, 18 May 24