ಲೈಂಗಿಕ ದೌರ್ಜನ್ಯ ಪ್ರಕರಣ: ಜರ್ಮಿನಿಯಿಂದ ಲಂಡನ್‌ಗೆ ಪರಾರಿಯಾದ ಪ್ರಜ್ವಲ್​ ರೇವಣ್ಣ

ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ. ಈ ಪ್ರಕರಣ ದಿನದಿಂದ ದಿನಕ್ಕೆ ರೋಚಕತೆ ಪಡೆದುಕೊಳ್ಳುತ್ತಿದೆ. ಇದೀಗ, ಪ್ರಜ್ವಲ್​ ರೇವಣ್ಣ ಜರ್ಮನಿಯಿಂದ ಲಂಡನ್​ಗೆ ರೈಲಿನ ಮೂಲಕ ಪ್ರಯಾಣ ಬೆಳಸಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ: ಜರ್ಮಿನಿಯಿಂದ ಲಂಡನ್‌ಗೆ ಪರಾರಿಯಾದ ಪ್ರಜ್ವಲ್​ ರೇವಣ್ಣ
ಪ್ರಜ್ವಲ್​ ರೇವಣ್ಣ
Follow us
ಕಿರಣ್​ ಹನಿಯಡ್ಕ
| Updated By: ವಿವೇಕ ಬಿರಾದಾರ

Updated on:May 18, 2024 | 9:41 AM

ಬೆಂಗಳೂರು, ಮೇ 18: ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿಶೇಷ ತನಿಖಾ ದಳ (SIT) ಮೋಸ್ಟ್​​ ವಾಂಟೆಡ್​ ಲಿಸ್ಟ್​ನಲ್ಲಿದ್ದಾರೆ. ಲೋಕಸಭೆ ಚುನಾವಣೆಗೆ ರಾಜ್ಯದ ಮೊದಲ ಹಂತದ ಮತದಾನ (ಏ.26) ಬಳಿಕ ಪ್ರಜ್ವಲ್​ ರೇವಣ್ಣ ವಿದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು ಮಾಹಿತಿ ಇತ್ತು. ಇದೀಗ ಪ್ರಜ್ವಲ್​ ರೇವಣ್ಣ ಜರ್ಮನಿಯಿಂದಲೂ ಕಾಲ್ಕಿತ್ತಿದ್ದು, ಲಂಡನ್​ಗೆ ಹೋಗಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.

ಇಂಗ್ಲೆಂಡ್​ನಲ್ಲಿನ ಭಾರತದ ಉದ್ಯಮಿಯೊಬ್ಬರ ಸಹಾಯದಿಂದ ಸಂಸದ ಪ್ರಜ್ವಲ್​ ರೇವಣ್ಣ ಮತ್ತು ಅವರ ಇಬ್ಬರು ಗೆಳೆಯರು ರೈಲು ಮೂಲಕ ಜರ್ಮಿನಿಯ ಮ್ಯೂನಿಚ್ ಲಂಡನ್‌ಗೆ ಹೋಗಿರುವ ಬಗ್ಗೆ ಟಿವಿ9ಗೆ ಮೂಲಗಳಿಂದ ಮಾಹಿತಿ ಸಿಕ್ಕಿದೆ. ದುಬೈ ಮೂಲದ ಒರ್ವ ಮತ್ತು ಬೆಂಗಳೂರು ಮೂಲದ ಒರ್ವ ಸ್ನೇಹಿತ ಪ್ರಜ್ವಲ್​ ರೇವಣ್ಣ ಅವರ ಜೊತೆ ಇದ್ದಾರೆ. ಮೂರು ಮಂದಿ ಒಟ್ಟಿಗೆ ಲಂಡನ್​ಗೆ ಹೋಗಿರುವ ಸಾಧ್ಯೆತೆ ಇದೆ. ಇನ್ನು ಪ್ರಜ್ವಲ್​ ರೇವಣ್ಣ ಕೆಳದ 15 ದಿನಗಳಿಂದ ಕುಟುಂಬದ ಸಂಪರ್ಕದಲ್ಲಿಲ್ಲ.

2 ಬಾರಿ ವಿಮಾನ ಟಿಕೆಟ್​ ಕ್ಯಾನ್ಸಲ್​

ಪ್ರಜ್ವಲ್​ ರೇವಣ್ಣ ಈಗಾಗಲೇ 2 ಬಾರಿ ಟಿಕೆಟ್ ಕ್ಯಾನ್ಸಲ್ ಮಾಡಿದ್ದಾರೆ. ಮೇ 03 ಮತ್ತು 15 ರಂದು ಭಾರತಕ್ಕೆ ಬರಲು ವಿಮಾನದ ಟಿಕೆಟ್ ಬುಕ್ ಮಾಡಿ ಕ್ಯಾನ್ಸಲ್ ಮಾಡಿದ್ದಾರೆ. ಹೀಗಾಗಿ ಅಧಿಕಾರಿಗಳು ಮುಂದಿನ ಟಿಕೆಟ್ ಬುಕ್ಕಿಂಗ್ ಮೇಲೆ ಹದ್ದಿನ ಕಣ್ಣಿಟ್ಟು ಕಾಯುತ್ತಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್ ಕೇಸ್​: ತಮ್ಮ ಆಪ್ತರ ಬಂಧನಕ್ಕೆ ಸ್ಪಷ್ಟನೆ ನೀಡಿದ ಪ್ರೀತಂಗೌಡ

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ, ಅಂದರೆ ಜೂನ್ 4ರ ನಂತರ ಪ್ರಜ್ವಲ್ ಭಾರತಕ್ಕೆ ಬರಬಹುದು ಎಂದು ವರದಿಯಾಗಿತ್ತು. ಮತ್ತೊಂದೆಡೆ, ವಾಪಸಾಗುವಂತೆ ಕುಟುಂಬಸ್ಥರಿಂದ ಪ್ರಜ್ವಲ್​ಗೆ ಒತ್ತಡ ಹೆಚ್ಚಾಗಿದೆ ಎಂದೂ ಇತ್ತೀಚೆಗೆ ವರದಿಯಾಗಿತ್ತು.

ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್​ ಮಾಡಿದ್ದವ ಬಂಧನ

ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪಿಯನ್ನು ಕುದುರೆಮುಖ ಠಾಣೆ ಪೊಲೀಸರು ಬಂಧಿಸಿದ್ದರು. ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಬಂಧಿತ ಆರೋಪಿ. ಆರೋಪಿ ಪ್ರಜ್ವಲ್, ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಎಂದು ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್​ನಲ್ಲಿ ಅಪ್ಲೋಡ್​ ಮಾಡಿದ್ದನು. ಪ್ರಜ್ವಲ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಐಪಿಸಿ ಸೆಕ್ಷನ್​ 67,67 (ಎ) ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಪ್ರಜ್ವಲ್​ ಟ್ರೋಲ್ ಪೇಜ್ ಅಡ್ಮಿನ್ ಆಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:37 am, Sat, 18 May 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ