AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆನ್ನಾರ್‌ ನದಿ ನೀರು ವಿವಾದ: ಮಧ್ಯಸ್ಥಿಕೆಗೆ ಕೇಂದ್ರ ಸರ್ಕಾರದ ಮನವಿಗೆ ತಮಿಳುನಾಡು ವಿರೋಧ

ಕೋಲಾರ, ಬಂಗಾರಪೇಟೆ ಮತ್ತು ಮಾಲೂರು ನಗರ ಪಟ್ಟಣಗಳಿಗೆ ನೀರು ಪೂರೈಸುವ ಮಾರ್ಕಂಡೇಯ ಅಣೆಕಟ್ಟು ನಿರ್ಮಾಣ ವಿಚಾರವಾಗಿ ಸದ್ಯ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದು, ಕರ್ನಾಟಕ ಮತ್ತು ತಮಿಳುನಾಡು ನಡುವೆ ಮಧ್ಯಸ್ಥಿಕೆಗೆ 12 ವಾರಗಳ ಸಮಯ ಕೇಳಿದೆ. ಆದರೆ ಕೇಂದ್ರ ಸರ್ಕಾರದ ಈ ಮನವಿಗೆ ತಮಿಳುನಾಡು ವಿರೋಧ ವ್ಯಕ್ತಪಡಿಸಿದೆ.

ಪೆನ್ನಾರ್‌ ನದಿ ನೀರು ವಿವಾದ: ಮಧ್ಯಸ್ಥಿಕೆಗೆ ಕೇಂದ್ರ ಸರ್ಕಾರದ ಮನವಿಗೆ ತಮಿಳುನಾಡು ವಿರೋಧ
ಸುಪ್ರೀಂಕೋರ್ಟ್
ಹರೀಶ್ ಜಿ.ಆರ್​.
| Edited By: |

Updated on: Oct 16, 2023 | 5:48 PM

Share

ದೆಹಲಿ, ಅಕ್ಟೋಬರ್​​ 16: ಕೋಲಾರ, ಬಂಗಾರಪೇಟೆ ಮತ್ತು ಮಾಲೂರು ನಗರ ಪಟ್ಟಣಗಳಿಗೆ ನೀರು ಪೂರೈಸುವ ಮಾರ್ಕಂಡೇಯ ಅಣೆಕಟ್ಟು ನಿರ್ಮಾಣ ವಿಚಾರವಾಗಿ ಸದ್ಯ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದು, ಕರ್ನಾಟಕ ಮತ್ತು ತಮಿಳುನಾಡು (Tamil Nadu) ನಡುವೆ ಮಧ್ಯಸ್ಥಿಕೆಗೆ 12 ವಾರಗಳ ಸಮಯ ಕೇಳಿದೆ. ಆದರೆ ಕೇಂದ್ರ ಸರ್ಕಾರದ ಈ ಮನವಿಗೆ ತಮಿಳುನಾಡು ವಿರೋಧ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರದ ಅಫಿಡವಿಟ್ ಪರಿಶೀಲನೆ ನಡೆಸಿ, ರಾಜ್ಯಗಳ ಅಭಿಪ್ರಾಯ ಪಡೆದು ಆದೇಶಿಸುವ ಭರವಸೆ ನೀಡಿದ್ದು, ಸದ್ಯ 4 ವಾರಗಳ ಕಾಲ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ.

ಕರ್ನಾಟಕವು ಪೆನ್ನಾರ್ ನದಿಯ ಉಪನದಿ ಮಾರ್ಕಂಡೇಯ ನದಿಗೆ ಅಡ್ಡಲಾಗಿ ಕೋಲಾರ ಜಿಲ್ಲೆಯ ಯರಗೋಳದಲ್ಲಿ ಅಣೆ ಕಟ್ಟನ್ನು ನಿರ್ಮಿಸುತ್ತಿದೆ, ಇದಕ್ಕೆ 240 ಕೋಟಿ ರೂ. ವೆಚ್ಚದ ಯೋಜನೆಗೆ ಸರ್ಕಾರದಿಂದ ಅನುಮತಿ ಪಡೆಯಲಾಗಿದೆ. ಆದರೆ ಈ ಅಣೆಕಟ್ಟು ನಿರ್ಮಾಣ ಕುರಿತು ತಮಿಳುನಾಡು ತದಾಗೆ ತೆಗೆದಿತ್ತು. ಅಣೆಕಟ್ಟು ನಿರ್ಮಾಣಗೊಂಡರೆ ನದಿಯ ನೈಸರ್ಗಿಕ ಹರಿವಿಗೆ ತೊಂದರೆಯಾಗಲಿದ್ದು, ಕೃಷಿ ಚಟುವಟಿಕೆ ಹಾಗೂ ಕುಡಿಯುವ ನೀರಿನ ಮೇಲೆ ಪ್ರಭಾವ ಬೀರಲಿದೆ ಎಂದು ವಾದಿಸಲಾಗಿತ್ತು.

ಇದನ್ನೂ ಓದಿ: Pennaiyar River Dispute : ಕರ್ನಾಟಕ-ತಮಿಳುನಾಡು ನಡುವಿನ ಜಲ ವಿವಾದ ಬಗೆಹರಿಸಲು ನೀರು ನ್ಯಾಯಾಧೀಕರಣ ರಚಿಸುವಂತೆ ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ

ಪೆನ್ನಾರ್ ನದಿ ನೀರಿನ ವಿಚಾರದಲ್ಲಿ ಕರ್ನಾಟಕದೊಂದಿಗೆ ಇರುವ ಸಮಸ್ಯೆಗಳನ್ನು ಬಗೆಹರಿಸಲು ಅಂತಾರಾಜ್ಯ ಜಲ ವಿವಾದ ನ್ಯಾಯಾಧೀಕರಣ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ತಮಿಳುನಾಡು ಸರ್ಕಾರ ಈ ಹಿಂದೆಯೇ ಮನವಿ ಮಾಡಿತ್ತು. ಕಳೆದ ವಿಚಾರಣೆ ವೇಳೆ, ಕೇಂದ್ರವು ನಾಲ್ಕು ವಾರಗಳಲ್ಲಿ ನ್ಯಾಯಾಧೀಕರಣವನ್ನು ಸ್ಥಾಪಿಸುವುದಾಗಿ ಹೇಳಿತ್ತು. ಶೀಘ್ರದಲ್ಲೇ ಗೆಜೆಟ್ ಅಧಿಸೂಚನೆಯನ್ನು ಪ್ರಕಟಿಸುವುದಾಗಿ ಸುಪ್ರೀಂಕೋರ್ಟ್​ಗೆ ತಿಳಿಸಲಾಗಿತ್ತು.

ತಮಿಳುನಾಡು ತಕರಾರು

ಮಾರ್ಕಂಡೇಯ ನದಿಯು ಪೆನ್ನಾರ್​ನ ಉಪನದಿಯಾದ ಕಾರಣ ಅಣೆಕಟ್ಟು ನಿರ್ಮಿಸಿದರೆ ನದಿ ನೀರಿನ ಹರಿವಿಗೆ ತೊಂದರೆಯಾಗುತ್ತದೆ ತಮಿಳುನಾಡಿನ ಜನರು ಕೃಷಿ ಹಾಗೂ ಕುಡಿಯಲು ಪೆನ್ನಾರ್​ ನದಿ ನೀರನ್ನು ಅವಲಂಬಿಸಿದ್ದಾರೆ. ಹಾಗಾಗಿ ಅಣೆಕಟ್ಟು ನಿರ್ಮಿಸಲು ಅವಕಾಶ ನೀಡಬಾರದು ಎಂದು ತಮಿಳುನಾಡು  ತಕರಾರು ತೆಗೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More