ಪೂರ್ಣಗೊಳ್ಳದ ರಸ್ತೆ ಕಾಮಗಾರಿ ವಿರುದ್ಧ ಸಿಡಿದೆದ್ದ ಜನತೆ; 45 ಕಿಲೋಮೀಟರ್ ಉದ್ದದ ಔರಾದ್-ಬೀದರ್ ರಸ್ತೆ ನಿರ್ಮಾಣಕ್ಕೆ ಮನವಿ

335 ಕೋಟಿ ರೂಪಾಯಿ ವೆಚ್ಚದಲ್ಲಿ ಔರಾದ್-ಬೀದರ್ ರಸ್ತೆಯನ್ನು ರಾಜ್ಯ ಹೆದ್ದಾರಿಯಿಂದ ರಾಷ್ಟ್ರೀಯ ಹೆದ್ದಾರಿ-16 ಎ ಎಂದು ಮೆಲ್ದರ್ಜೇಗೇರಿಸಲು ತಿರ್ಮಾನಿಸಲಾಗಿದೆ. ಅಲ್ಲದೆ ದ್ವಿಪತದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಶಂಕು ಸ್ಥಾಪನೆ ಕೂಡಾ ಮಾಡಲಾಗಿದೆ. ಆದರೆ ಈ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಏಳು ತಿಂಗಳು ಕಳೆದರು ಇನ್ನೂ ರಸ್ತೆ ಕಾಮಗಾರಿ ಮಾತ್ರ ಆರಂಭಿಸಿಲ್ಲ.

ಪೂರ್ಣಗೊಳ್ಳದ ರಸ್ತೆ ಕಾಮಗಾರಿ ವಿರುದ್ಧ ಸಿಡಿದೆದ್ದ ಜನತೆ; 45 ಕಿಲೋಮೀಟರ್ ಉದ್ದದ ಔರಾದ್-ಬೀದರ್ ರಸ್ತೆ ನಿರ್ಮಾಣಕ್ಕೆ ಮನವಿ
ಪೂರ್ಣಗೊಳ್ಳದ ರಸ್ತೆ ಕಾಮಗಾರಿ ವಿರುದ್ಧ ಸಿಡಿದೆದ್ದ ಜನತೆ
Follow us
TV9 Web
| Updated By: preethi shettigar

Updated on: Jul 05, 2021 | 12:58 PM

ಬೀದರ್: 45 ಕಿಲೋಮೀಟರ್ ಉದ್ದದ ಔರಾದ್-ಬೀದರ್ ರಸ್ತೆಯನ್ನು 2017 ಜನವರಿ 3 ರಂದು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸಲಾಗಿತ್ತು. ಆದರೆ ರಾಷ್ಟ್ರೀಯ ಹೆದ್ದಾರಿಯಾಗಿ ಅಭಿವೃದ್ಧಿ ಪಡಿಸುವ ಮೂಲ ಕೆಲಸ ಶುರುವಾಗಲೇ ಇಲ್ಲ. ಮುಂಚೆ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿದ್ದ ಈ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಕಲಬುರಗಿ ವಿಭಾಗಕ್ಕೆ ಹಸ್ತಾಂತರ ಮಾಡಲಾಯಿತು. ಆದರೆ ಈ ರಸ್ತೆಯ ಕಾಮಗಾರಿಯನ್ನು ಮಾತ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಕೈಗೆತ್ತಿಕೊಳ್ಳಲೇ ಇಲ್ಲ. ಹೀಗಾಗಿ ಔರಾದ್-ಬೀದರ್ ರಸ್ತೆಯಲ್ಲಿ ವಾಹನ ಸವಾರರು ಓಡಾಡಬೇಕಾದರೆ ಜೀವ ಕೈಯಲ್ಲಿ ಹಿಡಿದುಕೊಂಡು ವಾಹನ ನಡೆಸಬೇಕಾಗಿದ ಸ್ಥಿತಿ ನಿರ್ಮಾಣವಾಗಿದೆ.

ಸಾರ್ವಜನಿಕರ ಒತ್ತಡಕ್ಕೆ ಮಣಿದು 2020 ಡಿಸೆಂಬರ್ 19 ರಂದು ಈ ರಸ್ತೆ ಕಾಮಗಾರಿಗೆ ಆನ್​ಲೈನ್ ಮೂಲಕ ಸಚಿವ ನಿತಿನ್ ಗಡ್ಕರಿ ಚಾಲನೆ ನೀಡಿದ್ದು, 335 ಕೋಟಿ ರೂಪಾಯಿ ವೆಚ್ಚದಲ್ಲಿ ಔರಾದ್-ಬೀದರ್ ರಸ್ತೆಯನ್ನು ರಾಜ್ಯ ಹೆದ್ದಾರಿಯಿಂದ ರಾಷ್ಟ್ರೀಯ ಹೆದ್ದಾರಿ-16 ಎ ಎಂದು ಮೆಲ್ದರ್ಜೇಗೇರಿಸಲು ತಿರ್ಮಾನಿಸಲಾಗಿದೆ. ಅಲ್ಲದೆ ದ್ವಿಪತದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಶಂಕು ಸ್ಥಾಪನೆ ಕೂಡಾ ಮಾಡಲಾಗಿದೆ. ಆದರೆ ಈ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಏಳು ತಿಂಗಳು ಕಳೆದರು ಇನ್ನೂ ರಸ್ತೆ ಕಾಮಗಾರಿ ಮಾತ್ರ ಆರಂಭಿಸಿಲ್ಲ. ಹೀಗಾಗಿ ಅದೇ ಹಾಳಾದ ರಸ್ತೆಯಲ್ಲಿ ಓಡಾಡುವುದು ಅನಿವಾರ್ಯವಾಗಿದ್ದು, ಇದು ಸಹಜವಾಗಿಯೇ ಇಲ್ಲಿನ ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಒಂದೆರಡು ದಿನದಲ್ಲಿ ಔರಾದ್ ತಾಲೂಕಿನ ಲಾಧಾ ಗ್ರಾಮದ ಹತ್ತಿರ, ರಸ್ತೆ ಕಾಮಗಾರಿ ಮಾಡುವ ವಾಹನಗಳನ್ನು, ಮಷೀನ್​​ಗಳನ್ನ ಮತ್ತು ಕೆಲವು ರಸ್ತೆ ಕಾಮಗಾರಿ ಮಾಡುವ ಸಿಬ್ಬಂಧಿಯನ್ನು ಕರೆತಂದರು. ಇದೆನ್ನೇಲ್ಲ ನೋಡಿದ ವಾಹನ ಸವಾರರು ಇನ್ನೇನು ಒಂದೇ ವರ್ಷದಲ್ಲಿ ರಸ್ತೆ ಕಾಮಗಾರಿ ಮಾಡಿಯೇ ಬಿಡುತ್ತಾರೆ ಎಂದುಕೊಂಡರು. ಆದರೆ ಏಳು ತಿಂಗಳು ಕಳೆದರು ಕೂಡಾ ಇನ್ನೂ ರಸ್ತೆ ಕಾಮಗಾರಿ ಆರಂಭಿಸಿಲ್ಲ. ಒಂದು ವರ್ಷದಲ್ಲಿ ಮುಗಿಯೋ ಕೆಲಸ ಐದಾರು ವರ್ಷ ತೆಗೆದುಕೊಳ್ಳುತ್ತಾರೆ ಎನ್ನುವುದು ಈ ಕೆಲಸ ನೋಡಿದರೆ ತಿಳಿಯುತ್ತದೆ ಎಂದು ಗ್ರಾಮಸ್ಥರಾದ ರವಿ ಮರಕಲ್ ತಿಳಿಸಿದ್ದಾರೆ.

ಔರಾದ್ ಬೀದರ್ ರಸ್ತೆಯ ಮೇಲೆ ಸಾವಿರಾರು ವಾಹನಗಳು ಓಡಾಡುತ್ತವೆ. ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೂ ಕೂಡ ಇದಾಗಿದೆ. ಈ ರಸ್ತೆಯ ಕೆಲಸ ಎಷ್ಟೂ ಬೇಗ ಮಾಡುತ್ತಾರೋ ಅಷ್ಟು ವಾಹನ ಸವಾರರಿಗೆ ಅನುಕೂಲವಾಗಲಿದೆ. ಇಲ್ಲಿ ದ್ವೀಪತದ ರಾಷ್ಟ್ರೀಯ ಹೆದ್ದಾರಿಯಾಗಿರುವುದರಿಂದ ಸಾರ್ವಜನಕರಿಗೆ, ಕೈಗಾರಿಕೋದ್ಯಮಿಗಳಿಗೆ ಇದರಿಂದ ಸಾಕಷ್ಟು ಅನುಕೂಲವಾಗಲಿದೆ. ಇಲ್ಲಿಂದ ಇದೇ ಮಾರ್ಗವಾಗಿ ಮಹಾರಾಷ್ಟ್ರದ ನಾಂದೇಡ್​ಗೆ ನೇರ ಸಂಪರ್ಕ ಕಲ್ಪಿಸುವುದುರಿಂದ ಜನರಿಗೆ ಬಹಳ ಅನುಕೂಲವಾಗಲಿದೆ. ಈ ರಸ್ತೆ ಕಾಮಗಾರಿ ಪಡೆದ ಗುತ್ತಿದೆಗಾರನಿಗೆ 2022 ರವರೆಗೆ ರಸ್ತೆ ಪೂರ್ಣಗೊಳಿಸಲು ಅವಕಾಶವಿದ್ದು, ರಸ್ತೆ ಕಾಮಗಾರಿ ಗುಣಮಟ್ಟದಿಂದ ಮಾಡಲಾಗುತ್ತದೆ. ಹೀಗಾಗಿ ಸ್ವಲ್ಪ ತಡವಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚೌಹಾಣ್ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಗೆ ಚಾಲನೆ ಸಿಕ್ಕ ಕೂಡಲೇ ಆ ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರು ಖುಷಿಯಾಗಿದ್ದರು. ಆದರೆ ಇನ್ನೇನು ಕೆಲವೇ ಕೆಲವು ತಿಂಗಳಲ್ಲಿ ಉತ್ತಮ ಗುಣಮಟ್ಟದ ರಸ್ತೆಯಾಗುತ್ತದೆಂದು ತಿಳಿದಿದ್ದ ಸಾರ್ವಜನಕರಿಗೆ ನಿರಾಸೆ ಭಾವನೆ ಕಾಡಲಾರಂಭಿಸಿದೆ. ಬೇಗ ರಸ್ತೆ ಕಾಮಗಾರಿ ಆರಂಭಿಸಿ ಬೇಗ ಕೆಲಸ ಮುಗಿಸಿದರೆ ಜನರಿಗೆ ಅನುಕೂಲವಾಗುತ್ತದೆ ಎನ್ನುವುದು ಸದ್ಯ ಈ ಭಾಗದ ಜನರ ಮನವಿಯಾಗಿದೆ.

ಇದನ್ನೂ ಓದಿ: ರಸ್ತೆ ಕಾಮಗಾರಿ ನೆಪ ಮರಗಳ ಮಾರಣ ಹೋಮ; ಸರ್ಕಾರಿ ಜಾಗವಲ್ಲ ಎನ್ನುತ್ತಿರುವ ಜನ, ಕ್ರಮಕ್ಕೆ ಮುಂದಾದ ಅರಣ್ಯ ಇಲಾಖೆ

ಕೋಟೆನಾಡಿನಲ್ಲಿ ಮುಗಿಯದ ರಸ್ತೆ ಕಾಮಗಾರಿ: ಹೆಚ್ಚಿನ ಧೂಳಿನಿಂದ ಸೃಷ್ಟಿಯಾಯ್ತು ಕೊರೊನಾ ಆತಂಕ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ