AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯನಿಗೆ ಸೆಡ್ಡು ಹೊಡೆದು, ಸೆಲೆಬ್ರಿಟಿಯಾದ ಸ್ನೇಹಮಯಿ ಕೃಷ್ಣ, ಸೆಲ್ಫಿಗೆ ಮುಗಿಬೀಳ್ತಿದ್ದಾರಂತೆ ಜನ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೆಡ್ಡು ಹೊಡೆದು ನಿಂತಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಈಗ ಸೆಲೆಬ್ರಿಟಿ ಆಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಸೇರಿದಂತೆ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿರುವ ಸ್ನೇಹಮಯಿ ಕೃಷ್ಣ ಅವರಿಗೆ ಫ್ಯಾನ್ ಬೇಸ್ ಕ್ರಿಯೇಟ್ ಆಗಿದೆ.

ಸಿಎಂ ಸಿದ್ದರಾಮಯ್ಯನಿಗೆ ಸೆಡ್ಡು ಹೊಡೆದು, ಸೆಲೆಬ್ರಿಟಿಯಾದ ಸ್ನೇಹಮಯಿ ಕೃಷ್ಣ, ಸೆಲ್ಫಿಗೆ ಮುಗಿಬೀಳ್ತಿದ್ದಾರಂತೆ ಜನ
ಸ್ನೇಹಮಯಿ ಕೃಷ್ಣ
ದಿಲೀಪ್​, ಚೌಡಹಳ್ಳಿ
| Edited By: |

Updated on: Nov 14, 2024 | 11:35 AM

Share

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೆಡ್ಡು ಹೊಡೆದು ನಿಂತಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಈಗ ಸೆಲೆಬ್ರಿಟಿ ಆಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಸೇರಿದಂತೆ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿರುವ ಸ್ನೇಹಮಯಿ ಕೃಷ್ಣ ಅವರಿಗೆ ಫ್ಯಾನ್ ಬೇಸ್ ಕ್ರಿಯೇಟ್ ಆಗಿದೆ. ಸ್ನೇಹಮಯಿ ಕೃಷ್ಣ ಅವರು ಕಂಡರೆ ಸಾಕು ಜನರು ಸೆಲ್ಫಿಗಾಗಿ ಮುಗಿಬೀಳುತ್ತಿದ್ದಾರೆ. ಜತೆಯಾಗಿ ಸೆಲ್ಫಿ ತೆಗೆದುಕೊಳ್ಳುವ ಮೂಲಕ ಅವರ ಹೋರಾಟಕ್ಕೆ ಜನರು ಬೆಂಬಲ ಸೂಚಿಸುತ್ತಿದ್ದಾರೆ. ನಿಮ್ಮ ಹೋರಾಟ ಹೀಗೆಯೇ ಇರಲಿ, ನಮ್ಮ ಬೆಂಬಲ ಇರುತ್ತೆ ಎಂದು ಜನರು ಹೇಳುತ್ತಿದ್ದಾರೆ.

ಏನಿದು ಮುಡಾ ಪ್ರಕರಣ? ಸಿದ್ದರಾಮಯ್ಯ ಪತ್ನಿಗೆ ಸೈಟ್ ಸಿಕ್ಕಿದ್ದು ಹೇಗೆ? ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿ ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧವೂ ಆರೋಪಗಳು ಕೇಳಿಬರುತ್ತಿವೆ. ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು.

ಈ ಜಾಗವನ್ನು ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ಕೊಟ್ಟಿದ್ದರು. ಇದು ಒಟ್ಟು 1,48,104 ಚದರ ಅಡಿ ಜಾಗ ಇತ್ತು. ಅದರ ಬದಲಿಗೆ ಮುಡಾ 2021ರಲ್ಲಿ ಪಾರ್ವತಿ ಅವರಿಗೆ ಮೈಸೂರಿನ ವಿಜಯನಗರ ಬಡಾವಣೆಯಲ್ಲಿ 38,284 ಚದರ ಅಡಿ ಜಾಗ ಕೊಟ್ಟಿದ್ದಾರೆ ಇದು ಈಗ ಚರ್ಚೆಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಬಾಮೈದ ಜಾಗ ಕೊಟ್ಟಿದ್ದ ಬಗ್ಗೆ ಸ್ಪಷ್ಟನೆಯನ್ನೂ ನೀಡಿದ್ದಾರೆ.

ಮತ್ತಷ್ಟು ಓದಿ: ಮುಡಾ ಹಗರಣ ಬಗೆಯುತ್ತಿದೆ ಇಡಿ: ಸಿಎಂ ಸಿದ್ದರಾಮಯ್ಯ ಖಾಸಗಿ ಆಪ್ತ ಸಹಾಯಕನಿಗೆ ಗ್ರಿಲ್

ಆದರೂ ಸಿಎಂ ಪತ್ನಿಗೆ ವಿಜಯನಗರದಲ್ಲೇ ಏಕೆ ಸೈಟ್ ಕೊಟ್ಟರು ಎಂಬ ಪ್ರಶ್ನೆ ಮೂಡಿದೆ. ಇದೇ ಪ್ರಶ್ನೆ ಈಗ ಮುಡಾದ ನಡೆ ಮೇಲೆ ಅನುಮಾನ ಬರುವಂತೆ ಮಾಡಿದೆ. ಮೈಸೂರಿನ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿರೋ 3ಎಕರೆ 16 ಗುಂಟೆ ಜಾಗವನ್ನ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಸಹೋದರ, ಪಾರ್ವತಿಯವರಿಗೆ ದಾನವಾಗಿ ನೀಡಿದ್ದರು.

ಈ ಜಾಗವನ್ನು ಅಭಿವೃದ್ಧಿಗಾಗಿ ಪ್ರಾಧಿಕಾರ, ಕಾನೂನು ಪ್ರಕಾರವೇ ವಶಪಡಿಸಿಕೊಂಡಿತ್ತು. 1998ರಲ್ಲಿ ನೋಟಿಫೈ ಮಾಡಿತ್ತು. ಇದೇ ಜಾಗದಲ್ಲಿ ದೇವನೂರು 3ನೇ ಹಂತದ ಬಡಾವಣೆಯನ್ನೂ ಅಭಿವೃದ್ಧಿ ಮಾಡಿದೆ. ವಿಷಯ ಏನೆಂದರೆ, ವಶಪಡಿಸಿಕೊಂಡ ಜಾಗಕ್ಕೆ ಬದಲಿ ಭೂಮಿ ಕೊಡುವುದು ಪ್ರಾಧಿಕಾರದ ಕರ್ತವ್ಯ.

ಹೀಗಾಗಿ ಬದಲಿ ಭೂಮಿ ನೀಡುವಂತೆ 2014ರಲ್ಲಿ ಸಿಎಂ ಪತ್ನಿ ಅರ್ಜಿ ಹಾಕಿದ್ದರು. 2017ರಲ್ಲಿ ನಡೆದ ಸಭೆಯಲ್ಲಿ ಅಭಿವೃದ್ಧಿಪಡಿಸದ ಭೂಮಿ ನೀಡಲು ತೀರ್ಮಾನಿಸಲಾಗಿತ್ತು. ಆದರೆ, ಇದಕ್ಕೆ ಒಪ್ಪದ ಸಿಎಂ ಪತ್ನಿ ಪಾರ್ವತಿ 2021ರಲ್ಲಿ ಮತ್ತೊಂದು ಪತ್ರ ಬರೆದಿದ್ದರು. 50:50ಅನುಪಾತದಲ್ಲಿ ಬದಲಿ ನಿವೇಶನ ಕೊಡಿ ಎಂದು ಮನವಿ ಸಲ್ಲಿಸಿದ್ದರು. ಸಿಎಂ ಪತ್ನಿ ಕೋರಿಕೆಯಂತೆ 2021ರಲ್ಲಿ 50:50ಅನುಪಾತದಲ್ಲಿ ಭೂಮಿ ನೀಡಲಾಗಿದೆ ಎಂಬುದು ಆರೋಪ.

ಭೂಮಿ ವಶಪಡಿಸಿಕೊಂಡ ಜಾಗದಲ್ಲಿ, ಅಥವಾ ಸಮಾನಾಂತರ ಜಾಗದಲ್ಲಿ ಬದಲಿ ಭೂಮಿ ನೀಡಬೇಕು ಎಂಬುದು ಕಾನೂನಿನಲ್ಲಿದೆ. ಆದರೆ ಸಿಎಂ ಪತ್ನಿಗೆ ಭೂಸ್ವಾಧೀನವಾದ ಜಾಗ ಬಿಟ್ಟು, ವಿಜಯನಗರದಲ್ಲಿ ಭೂಮಿ ಕೊಡಲಾಗಿದೆ. 50:50 ಅನುಪಾತ ನಿಯಮವನ್ನ ದುರುಪಯೋಗಪಡಿಸಿಕೊಂಡು, 1998ರಲ್ಲಿ ವಶಪಡಿಸಿಕೊಂಡ ಜಾಗಕ್ಕೆ 2020ರಲ್ಲಿ ಜಾರಿಗೆ ಬಂದ 50-50 ಅನುಪಾತ ಬಳಸಿದ್ದೇಕೆ ಎಂಬುದು ದೂರುದಾರರ ಪ್ರಶ್ನೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು