AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪರ್ಕ ಭಾಷೆಯಾಗಿ ಹಿಂದಿ ಬಳಸಬೇಕೆಂದು ಸಚಿವ ಅಮಿತ್​ ಶಾ ಫರ್ಮಾನು -ಸರಣಿ ಟ್ವೀಟ್ ಮೂಲಕ ಗುಡುಗಿದ ಸಿದ್ದರಾಮಯ್ಯ

ಕೇಂದ್ರದಲ್ಲಿ @BJP4India ಅಧಿಕಾರಕ್ಕೆ ಬಂದ ದಿನದಿಂದ ಹಿಂದಿಯನ್ನು ರಾಷ್ಟ್ರಭಾಷೆ ಎನ್ನುವ ರೀತಿಯಲ್ಲಿ ಬಿಂಬಿಸುವ ಜೊತೆಯಲ್ಲಿ, ರಾಜ್ಯ ಭಾಷೆಗಳನ್ನು ದಮನಿಸುವ ಪ್ರಯತ್ನ ನಡೆಯುತ್ತಲೇ ಇದೆ. ಇದನ್ನು ಹಿಂದಿಯೇತರ ಭಾಷೆಗಳನ್ನಾಡುವ ರಾಜ್ಯಗಳು ಕೂಡಿ ಪ್ರತಿಭಟಿಸುವ ಕಾಲ ಸನ್ನಿಹಿತವಾಗಿದೆ - ಕರ್ನಾಟಕದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಲಕ ಆಕ್ರೋಶ

ಸಂಪರ್ಕ ಭಾಷೆಯಾಗಿ ಹಿಂದಿ ಬಳಸಬೇಕೆಂದು ಸಚಿವ ಅಮಿತ್​ ಶಾ ಫರ್ಮಾನು -ಸರಣಿ ಟ್ವೀಟ್ ಮೂಲಕ ಗುಡುಗಿದ ಸಿದ್ದರಾಮಯ್ಯ
ಸಂಪರ್ಕ ಭಾಷೆಯಾಗಿ ಹಿಂದಿ ಬಳಸಬೇಕೆಂದು ಸಚಿವ ಅಮಿತ್​ ಶಾ ಫರ್ಮಾನು; ಸರಣಿ ಟ್ವೀಟ್ ಮೂಲಕ ಗುಡುಗಿದ ಸಿದ್ದರಾಮಯ್ಯ
TV9 Web
| Updated By: ಸಾಧು ಶ್ರೀನಾಥ್​|

Updated on:Apr 08, 2022 | 3:10 PM

Share

ಬೆಂಗಳೂರು: ಕರ್ನಾಟಕದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಸರಣಿ ಟ್ವೀಟ್ ಮಾಡಿದ್ದು, ವಿವಿಧ ರಾಜ್ಯಗಳ ಜನರು ಇಂಗ್ಲಿಷ್ (English) ಬದಲು ಹಿಂದಿ (Hindi) ಬಳಸಬೇಕು ಎಂಬ ಹೇಳಿಕೆಗೆ ತೀವ್ರ ಆಕ್ಷೇಪ ಎತ್ತಿದ್ದಾರೆ. ರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ ಹಿಂದಿಯನ್ನು‌ ಬಳಸಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು (Amit Shah) ಫರ್ಮಾನು ಹೊರಡಿಸಿರುವುದು ಅತ್ಯಂತ‌ ಆಕ್ಷೇಪಾರ್ಹ ನಡವಳಿಕೆಯಾಗಿದೆ. ಒಬ್ಬ ಸ್ವಾಭಿಮಾನಿ‌ ಕನ್ನಡಿಗನಾಗಿ‌ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಗುಡುಗಿದ್ದಾರೆ.

#IndiaAgainstHindiImposition ಇಂಡಿಯಾ ಹಿಂದಿ ಹೇರಿಕೆಗೆ ವಿರುದ್ದವಾಗಿದೆ ಎಂದು ಹ್ಯಾಷ್ ಟ್ಯಾಗ್ ಬಳಸಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಅವರ ಸರಣಿ ಟ್ವೀಟ್ ಸಾರಾಂಶ ಹೀಗಿದೆ:

1/8 #IndiaAgainstHindiImposition ಹಿಂದಿ, ಇಂಗ್ಲೀಷ್, ತಮಿಳು,‌ ಮಲೆಯಾಳಿ, ಗುಜರಾತಿ ಸೇರಿದಂತೆ ಯಾವ ಭಾಷೆಗೂ ನಾವು ವಿರೋಧಿಗಳಲ್ಲ. ಆದರೆ ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಸ್ಥಾನ. ಯಾವುದೇ ಒಂದು ಭಾಷೆಯನ್ನು ಹೇರಲು ಹೊರಟರೆ ಸಹಿಸಲು ಸಾಧ್ಯ ಇಲ್ಲ. 2/8 #IndiaAgainstHindiImposition ನಮ್ಮ ಭಾಷಾ ನಿಲುವು ಮತ್ತು ದೇಶ-ರಾಜ್ಯಗಳ ಸಂಬಂಧವನ್ನು ರಾಷ್ಟ್ರಕವಿ‌ ಕುವೆಂಪು ಅವರು ದಶಕಗಳ ಹಿಂದೆಯೇ ಸ್ಪಷ್ಟವಾಗಿ ವ್ಯಾಖ್ಯಾನಿಸಿದ್ದಾರೆ. “ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ’ ಎನ್ನುವ ಕವಿ ನುಡಿಯೇ ನಮ್ಮ ಭಾಷಾ ಸಿದ್ಧಾಂತ. 3/8 #IndiaAgainstHindiImposition ಕೇಂದ್ರದಲ್ಲಿ @BJP4India ಅಧಿಕಾರಕ್ಕೆ ಬಂದ ದಿನದಿಂದ ಹಿಂದಿಯನ್ನು ರಾಷ್ಟ್ರಭಾಷೆ ಎನ್ನುವ ರೀತಿಯಲ್ಲಿ ಬಿಂಬಿಸುವ ಜೊತೆಯಲ್ಲಿ, ರಾಜ್ಯ ಭಾಷೆಗಳನ್ನು ದಮನಿಸುವ ಪ್ರಯತ್ನ ನಡೆಯುತ್ತಲೇ ಇದೆ. ಇದನ್ನು ಹಿಂದಿಯೇತರ ಭಾಷೆಗಳನ್ನಾಡುವ ರಾಜ್ಯಗಳು ಕೂಡಿ ಪ್ರತಿಭಟಿಸುವ ಕಾಲ ಸನ್ನಿಹಿತವಾಗಿದೆ. 4/8 #IndiaAgainstHindiImposition ಗುಜರಾತಿನಿಂದ ಬಂದಿರುವ @AmitShah ಅವರ ಮಾತೃಭಾಷೆ ಗುಜರಾತಿ. ಇವರು ತಮ್ಮ ಮಾತೃಭಾಷೆಯನ್ನೇ ಕಡೆಗಣಿಸಿ ಹಿಂದಿ ಭಾಷೆಯ ಗುಲಾಮಗಿರಿ‌ ಮಾಡುತ್ತಿರುವುದು ವಿಷಾದನೀಯ. 5/8 #IndiaAgainstHindiImposition ಅಮಿತ್ ಶಾ ಅವರ ತವರು ಗುಜರಾತ್ ರಾಜ್ಯದ ಮಣ್ಣಿನ‌ ಮಗನಾದ ಮಹಾತ್ಮ ಗಾಂಧೀಜಿ ಬಹು ಸಂಸ್ಕೃತಿ, ಬಹುಭಾಷೆಗಳ ಪ್ರತಿಪಾದಕರಾಗಿದ್ದರು. ಆದರೆ @AmitShah ಅವರಿಗೆ ಗಾಂಧೀಜಿಯವರಿಗಿಂತ ಏಕ ಸಂಸ್ಕೃತಿ, ಏಕಭಾಷೆಯ ಪ್ರತಿಪಾದಕರಾದ ಸೂಡೊ ರಾಷ್ಟ್ರೀಯವಾದಿ ಸಾವರ್ಕರ್ ಪ್ರಿಯರಾಗಿರುವುದು ದುರಂತ.

Published On - 3:06 pm, Fri, 8 April 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ