AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಮಾವಳಿಗಳನ್ನು ಗಾಳಿಗೆ ತೂರಿದ ಜನ; ಎರಡನೇ ಅಲೆ ಬಗ್ಗೆ ನಿರ್ಲಕ್ಷ್ಯ

ಕೊರೊನಾವನ್ನು ಮಟ್ಟ ಹಾಕಲೇಬೇಕೆಂದು ಪಣ ತೊಟ್ಟಿರುವ ಸರ್ಕಾರ ನಿನ್ನೆಯಷ್ಟೇ ಕೊವಿಡ್​ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆದರೆ, ಆ ಆದೇಶಗಳು ಕೇವಲ ಹೇಳಿಕೆಗೆ ಮಾತ್ರ ಸೀಮಿತವೇನೋ ಎಂಬಂತಾಗಿದ್ದು, ಇಂದು ಮುಂಜಾನೆಯಿಂದ ಕಂಡುಬರುತ್ತಿರುವ ದೃಶ್ಯಗಳನ್ನು ಗಮನಿಸಿದರೆ ಜನರು ಮೈಮರೆತು ನಿಯಮ ಉಲ್ಲಂಘನೆ ಮಾಡುತ್ತಿರುವುದು ಸ್ಪಷ್ಟವಾಗಿದೆ.

ಕೊರೊನಾ ನಿಯಮಾವಳಿಗಳನ್ನು ಗಾಳಿಗೆ ತೂರಿದ ಜನ; ಎರಡನೇ ಅಲೆ ಬಗ್ಗೆ ನಿರ್ಲಕ್ಷ್ಯ
ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ವ್ಯಾಪಾರ ವಹಿವಾಟು
Skanda
| Edited By: |

Updated on: Apr 03, 2021 | 9:02 AM

Share

ಬೆಂಗಳೂರು: ಕೊರೊನಾ ಎರಡನೇ ಅಲೆ ತಡೆಗಟ್ಟಲು ಕಠಿಣ ನಿಯಮಗಳನ್ನು ಜಾರಿಗೊಳಿಸುವ ಅನಿವಾರ್ಯತೆ ಬಂದಿದೆ. ದಯವಿಟ್ಟು ಜಾಗ್ರತೆಯಿಂದಿರಿ ಎಂದು ಸರ್ಕಾರ ಅತ್ತ ಅಸಹಾಯಕ ಧ್ವನಿಯಲ್ಲಿ ಕೇಳಿಕೊಳ್ಳುತ್ತಿದ್ದರೆ. ಇತ್ತ ಜನಸಾಮಾನ್ಯರು ನಮಗೂ ಅದಕ್ಕೂ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ವೇಗವಾಗಿ ಹಬ್ಬುತ್ತಿರುವ ಕೊರೊನಾವನ್ನು ಮಟ್ಟ ಹಾಕಲೇಬೇಕೆಂದು ಪಣ ತೊಟ್ಟಿರುವ ಸರ್ಕಾರ ನಿನ್ನೆಯಷ್ಟೇ ಕೊವಿಡ್​ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆದರೆ, ಆ ಆದೇಶಗಳು ಕೇವಲ ಹೇಳಿಕೆಗೆ ಮಾತ್ರ ಸೀಮಿತವೇನೋ ಎಂಬಂತಾಗಿದ್ದು, ಇಂದು ಮುಂಜಾನೆಯಿಂದ ಕಂಡುಬರುತ್ತಿರುವ ದೃಶ್ಯಗಳನ್ನು ಗಮನಿಸಿದರೆ ಜನರು ಮೈಮರೆತು ನಿಯಮ ಉಲ್ಲಂಘನೆ ಮಾಡುತ್ತಿರುವುದು ಸ್ಪಷ್ಟವಾಗಿದೆ.

ಬೆಂಗಳೂರಿನಲ್ಲಿ ಎಲ್ಲಾ ಜಿಮ್‌ಗಳನ್ನು ಸ್ಥಗಿತಗೊಳಿಸುವಂತೆ ಸರ್ಕಾರ ಆದೇಶ ಹೊರಡಿಸಿದ್ದರೂ ಬಿಬಿಎಂಪಿ ಅಧಿಕಾರಿಗಳು ಎಚ್ಚೆತ್ತುಕೊಂಡಂತಿಲ್ಲ. ಬಿಬಿಎಂಪಿಯ ಪಾರ್ಕ್​ಗಳಲ್ಲಿರುವ ಜಿಮ್ ಸೌಲಭ್ಯ ಎಂದಿನಂತೆ ಬಳಕೆಯಾಗುತ್ತಿದ್ದು, ಸ್ಯಾನಿಟೈಜ್ ಸಹ ಆಗದ ಜಿಮ್ ಉಪಕರಣಗಳನ್ನು ಜನ ಆರಾಮಾಗಿ ಬಳಸುತ್ತಿದ್ದಾರೆ. ಈ ಬಗ್ಗೆ ಜನರನ್ನು ಪ್ರಶ್ನಿಸಿದರೆ ಜಿಮ್‌ ಬಂದ್ ಮಾಡಿದ್ರೆ ನಾವ್ಯಾಕೆ ಬರ್ತಿದ್ವಿ, ಓಪನ್ ಇತ್ತು ಬಂದಿದ್ದೇವೆ ಎಂದು ಸಮಜಾಯಿಷಿ ಕೊಟ್ಟಿದ್ದಾರೆ.

ಇತ್ತ ಬಿಎಂಟಿಸಿ ಬಸ್​ಗಳಲ್ಲಿ ಆಸನ ಸಾಮರ್ಥ್ಯವನ್ನು ಮೀರಿ ಪ್ರಯಾಣಿಕರನ್ನು ಹತ್ತಿಸುವಂತಿಲ್ಲ ಎಂಬ ಸರ್ಕಾರದ ಆದೇಶಕ್ಕೂ ಕವಡೆ ಕಾಸಿನ ಕಿಮ್ಮತ್ತಿಲ್ಲ ಎನ್ನುವಂತಾಗಿದೆ. ಬೆಳ್ಳಂಬೆಳಗ್ಗೆಯೇ ಮೆಜೆಸ್ಟಿಕ್​ನಲ್ಲಿ ಸರ್ಕಾರದ ನೀತಿ ನಿಯಮಗಳನ್ನು ಗಾಳಿಗೆ ತೂರಿದ ದೃಶ್ಯಗಳು ಕಣ್ಣಿಗೆ ರಾಚುತ್ತಿದ್ದು, ಬಸ್​ಗಳಲ್ಲಿ ಜನರನ್ನು ಆಸನ ವ್ಯವಸ್ಥೆಯ ಸಾಮರ್ಥ್ಯಕ್ಕೂ ಮೀರಿ ತುಂಬಿಸಿಕೊಂಡು ಹೋಗಲಾಗುತ್ತಿದೆ. ಈ ಬಗ್ಗೆ ಡ್ರೈವರ್​, ಕಂಡಕ್ಟರ್​ಗಳನ್ನು ವಿಚಾರಿಸಿದರೆ, ನಮಗೆ ಸರ್ಕಾರದ ಆದೇಶದ ಬಗ್ಗೆ ಮಾಹಿತಿಯೇ ಇಲ್ಲ ಎಂಬ ಉತ್ತರ ನೀಡಿದ್ದಾರೆ.

People not following Corona Guidelines

ಕೊರೊನಾ ಎರಡನೇ ಅಲೆ ಬಗ್ಗೆ ಜನರ ನಿರ್ಲಕ್ಷ್ಯ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಕೊರೊನಾ ನಿಯಮ ಉಲ್ಲಂಘನೆಯಾಗಿದೆ ನಗರದ ತರಕಾರಿ ಮಾರುಕಟ್ಟೆಯಲ್ಲಿ ಜನದಟ್ಟಣೆ ಇದ್ದು, ಮಾಸ್ಕ್‌ ಧರಿಸಿ, ಅಂತರ ಕಾಪಾಡುವಂತೆ ಪೊಲೀಸರು ಮನವಿ ಮಾಡಿದರೂ ಯಾರೂ ಸಹ ಮನವಿಗೆ ಓಗೊಡದೆ ವ್ಯಾಪಾರ ವಹಿವಾಟಿನಲ್ಲಿ ತೊಡಗಿಕೊಂಡಿದ್ದಾರೆ. ಮೈಸೂರಿನಲ್ಲಿ ನಿನ್ನೆ ಒಂದೇ ದಿನ 174 ಕೊರೊನಾ ಪಾಸಿಟಿವ್​ ಪ್ರಕರಣಗಳು ಪತ್ತೆಯಾಗಿದ್ದು, ಬೆಂಗಳೂರಿನ ನಂತರ ಮೈಸೂರು ಕೊರೊನಾ ಹಾಟ್​ಸ್ಪಾಟ್ ಎಂದು ಗುರುತಿಸಿಕೊಂಡಿದೆ. ವಿಜಯಪುರ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಜನಜಂಗುಳಿ ಎಂದಿನಂತೆ ಇದೆ. ಮಾಸ್ಕ್‌ ಧರಿಸದೇ, ದೈಹಿಕ ಅಂತರವನ್ನೂ ಕಾಪಾಡದೆ ವ್ಯಾಪಾರ ವಹಿವಾಟು ನಡೆಸಲಾಗುತ್ತಿದೆ. ನಿಯಮ ಉಲ್ಲಂಘನೆ ಸ್ಪಷ್ಟವಾಗಿ ಕಾಣುತ್ತಿದ್ದರೂ ಅಧಿಕಾರಿಗಳು ಮಾತ್ರ ಕ್ರಮ ಕೈಗೊಳ್ಳದೆ ಮೌನ ವಹಿಸಿದ್ದಾರೆ.

ಅಂತೆಯೇ, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ರಾಯಚೂರು, ಮಂಡ್ಯ, ಹುಬ್ಬಳ್ಳಿ, ಧಾರವಾಡ ನಗರಗಳಲ್ಲೂ ವ್ಯಾಪಾರ ವಹಿವಾಟು ಎಂದಿನಂತೆ ನಡೆಯುತ್ತಿದ್ದು ಜನರು ಕೊರೊನಾ ನಿಯಮಗಳನ್ನು ಪಾಲಿಸದೇ ಸುತ್ತಾಡುತ್ತಿರುವುದು ಚಿಂತೆಗೆ ಕಾರಣವಾಗಿದೆ. ಆಂಧ್ರದ ಗಡಿಭಾಗವಾದ ಬಳ್ಳಾರಿಯ ಎಪಿಎಂಸಿಗೆ ಆಂಧ್ರದಿಂದ ರೈತರು ಬರುವುದರಿಂದ ಕೊರೊನಾ ಭೀತಿ ಸಹಜವಾಗಿಯೇ ಹೆಚ್ಚಾಗಿದೆ.

ಇದನ್ನೂ ಓದಿ: ಕೊರೊನಾ ಎರಡನೇ ಅಲೆಗೆ ಕಾಫಿನಾಡು ಕಂಗಾಲು.. ಮೊನ್ನೆ ದಂಪತಿ ಸಾವು, ಇಂದು ಒಂದೇ ಶಾಲೆಯ 26 ವಿದ್ಯಾರ್ಥಿನಿಯರಿಗೆ ಸೋಂಕು 

Explainer: ಭಾರತದಲ್ಲಿ ಈಗ ಹರಡುತ್ತಿರುವ ಕೊರೊನಾ 2ನೇ ಅಲೆ ಮೊದಲ ಅಲೆಗಿಂತ ಸಂಪೂರ್ಣ ಭಿನ್ನ: ಏನಿದು 2ನೇ ಅಲೆ? ಏಕಿಷ್ಟು ಆತಂಕ?

( People not following Corona Guidelines in Karnataka amidst of Covid 19 Second wave fear)

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ