ಜಿಲ್ಲಾಸ್ಪತ್ರೆಯ ವೈದ್ಯರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸನ್ಮಾನ ಮಾಡಿದ ಬೀದರ್ ಜನತೆ

ವೈದ್ಯರ ನಿರ್ಲಕ್ಷ್ಯದಿಂದ ಜನ ಸಾವನ್ನಪ್ಪುತ್ತಿದ್ದಾರೆ ಎಂದು ಹಲವು ಕುಟುಂಬಸ್ಥರು ಆರೋಪಿಸಿರುವ ಬಗ್ಗೆ ಈಗಾಗಲೇ ಟಿವಿ9 ನಲ್ಲಿ ಹಲವು ಬಾರಿ ವರದಿ ಪ್ರಕಟವಾಗಿದೆ. ಸೋಂಕಿತರನ್ನು ಕಳೆದುಕೊಂಡ ಸಂಬಂಧಿಕರು ಕೆಲ ಆಸ್ಪತ್ರೆ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಈ ನಡುವೆ ಬೀದರ್ ಜನ ಜಿಲ್ಲಾಸ್ಪತ್ರೆ ವೈದ್ಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ

ಜಿಲ್ಲಾಸ್ಪತ್ರೆಯ ವೈದ್ಯರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸನ್ಮಾನ ಮಾಡಿದ ಬೀದರ್ ಜನತೆ
ಬ್ರೀಮ್ಸ್ ಆಸ್ಪತ್ರೆ
Follow us
sandhya thejappa
|

Updated on:May 22, 2021 | 8:40 AM

ಬೀದರ್: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಪರಿಣಾಮ ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್​ಗಳ ಕೊರತೆ ಎದುರಾಗಿದೆ. ಇದರ ಜೊತೆಗೆ ರಾಜ್ಯದ ಕೆಲ ಆಸ್ಪತ್ರೆಗಳ ವೈದ್ಯರು ಮತ್ತು ಸಿಬ್ಬಂದಿ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ. ಸೂಕ್ತ ಚಿಕಿತ್ಸೆ ಸಿಗದೆ ಹಲವರು ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯಕ್ಕೆ ಈಗಾಗಲೇ ಬಡ ಜೀವಿಗಳ ಪ್ರಾಣ ಪಕ್ಷಿ ಹಾರಿಹೋಗಿದೆ. ವೈದ್ಯರ ಬೇಜಾವಾಬ್ದಾರಿಯಿಂದ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು, ಸಂಬಂಧಿಗಳು ಆರೋಪಿಸುತ್ತಿದ್ದಾರೆ. ಈ ನಡುವೆ ಬೀದರ್ ಜಿಲ್ಲಾಸ್ಪತ್ರೆಯ ವೈದ್ಯರ ಬಗ್ಗೆ ಜನ ಮೆಚ್ಚುಗೆ ವ್ಯಕ್ತಪಡಿಸಿ, ಸನ್ಮಾನ ಕೂಡಾ ಮಾಡಿದ್ದಾರೆ.

ವೈದ್ಯರ ನಿರ್ಲಕ್ಷ್ಯದಿಂದ ಜನ ಸಾವನ್ನಪ್ಪುತ್ತಿದ್ದಾರೆ ಎಂದು ಹಲವು ಕುಟುಂಬಸ್ಥರು ಆರೋಪಿಸಿರುವ ಬಗ್ಗೆ ಈಗಾಗಲೇ ಟಿವಿ9 ನಲ್ಲಿ ಹಲವು ಬಾರಿ ವರದಿ ಪ್ರಕಟವಾಗಿದೆ. ಸೋಂಕಿತರನ್ನು ಕಳೆದುಕೊಂಡ ಸಂಬಂಧಿಕರು ಕೆಲ ಆಸ್ಪತ್ರೆ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಈ ನಡುವೆ ಬೀದರ್ ಜನ ಜಿಲ್ಲಾಸ್ಪತ್ರೆ ವೈದ್ಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಕೊವಿಡ್ ಸೋಂಕಿತರಿಗೆ ಕೊಡುತ್ತಿರುವ ಚಿಕಿತ್ಸೆ ಬಗ್ಗೆ ಸಂತಸ ವ್ಯಕ್ತಪಡಿಸಿದ ಜಿಲ್ಲೆಯ ಜನ, ವೈದ್ಯರು, ನರ್ಸ್​ಗಳು, ಆಯಾಗಳು ಸೋಂಕಿತರನ್ನು ಪ್ರೀತಿಯಿಂದ ಆರೈಕೆ ಮಾಡುತ್ತಾರೆ ಎಂದು ತಿಳಿಸಿದ್ದಾರೆ. ಅಲ್ಲದೆ ಕೊರೊನಾದಿಂದ ಗುಣಮುಖರಾಗಿ ಮನೆಗೆ ಹೋಗುವಾಗ ವೈದ್ಯಗೆ ಸನ್ಮಾನ ಮಾಡಿ ಹೋಗುತ್ತಿದ್ದಾರೆ. ಹೀಗೆ 80 ವರ್ಷದ ತಾಯಿಯನ್ನು ಬೇಗ ಗುಣಮುಖರಾಗಿ ಮಾಡಿದಕ್ಕೆ ಜಿಲ್ಲಾಸ್ಪತ್ರೆಯ ವೈದ್ಯಗೆ ಸನ್ಮಾನ ಮಾಡಿದ್ದಾರೆ.

ಬೀದರ್​ಗೆ ಪ್ರಥಮ ಸ್ಥಾನ ಜಿಲ್ಲೆಯಲ್ಲಿ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ. ಐದು ದಿನದಲ್ಲಿ 1,701 ಸೋಂಕಿತರು ಗುಣಮುಖರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೊರೊನಾದಿಂದ ಗುಣಮುಖರಾದವರ ಸಂಖ್ಯೆ ಏರಿಕೆಯಾಗಿದ್ದು, ಕೊವಿಡ್ ನಿಯಂತ್ರಣದಲ್ಲಿ ರಾಜ್ಯದಲ್ಲಿ ಬೀದರ್ ಪ್ರಥಮ ಸ್ಥಾನ ಪಡೆದಿದೆ.

ಜಿಲ್ಲೆಯಲ್ಲಿ ಲಾಕ್​ಡೌನ್​ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ದಂಡ ವಿಧಿಸುತ್ತಿದ್ದಾರೆ. ಈಗಾಗಲೇ 1.58 ಲಕ್ಷ ರೂ. ದಂಡದ ಹಣ ಸಂಗ್ರಹವಾಗಿದೆ. ಒಂದು ದಿನದಲ್ಲಿ ಮಾಸ್ಕ್ ಧರಿಸದ 1,584 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಕರ್ನಾಟಕ ಎಪಿಡೆಮಿಕ್ ಡಿಸೀಸ್ ಆ್ಯಕ್ಟ್ ಉಲ್ಲಂಘನೆ ಸಂಬಂಧಿಸಿ 3 ಪ್ರಕರಣ ದಾಖಲಾಗಿದೆ. ಅನಗತ್ಯವಾಗಿ ಸಂಚಾರ ಮಾಡುತ್ತಿದ್ದ ಸುಮಾರು 103 ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ

ಕೊಹ್ಲಿ ನಿನಗೆ ಮಾದರಿಯಾಗಲಿ; ಕೊರೊನಾದಿಂದ ತಾಯಿಯನ್ನು ಕಳೆದುಕೊಂಡ ಪ್ರಿಯಾ ಪುನಿಯಾಗೆ ತಂದೆಯ ಸಾಂತ್ವನ

ಒಂದೇ ತೆರನಾದ ಅಭ್ಯಾಸ ಬಿಡಿ; ರೋಗನಿರೋಧಕ ಶಕ್ತಿ ಹೆಚ್ಚಿಸಲು ಆಹಾರ ಪದ್ಧತಿಯಲ್ಲಿ ವೈವಿಧ್ಯತೆ ಇರಲಿ

(people of Bidar have praised and honored district hospital doctor)

Published On - 8:39 am, Sat, 22 May 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ