ಕಳಪೆ ರಸ್ತೆ ಕಾಮಗಾರಿ; ಚಿತ್ರದುರ್ಗ ಜನರ ಹಿಡಿಶಾಪ

ಅವೈಜ್ಞಾನಿಕವಾಗಿ ಏಕಕಾಲಕ್ಕೆ ರಸ್ತೆ ಆರಂಭಿಸಲಾಗಿದ್ದು, ಜನ ಸಂಚಾರಕ್ಕೆ ಅಡ್ಡಿಯಾಗಿದೆ. ಕೊರೊನಾ ಭೀತಿಯ ಸಂದರ್ಭದಲ್ಲಿ ಧೂಳಿನಿಂದ ಜನ ಕಂಗಾಲಾಗಿದ್ದಾರೆ. ಮೂರು ವರ್ಷ ಕಳೆದರೂ ಕಾಮಗಾರಿ ಮುಗಿದಿಲ್ಲ. ಅಲ್ಲದೆ ಮುಖ್ಯ ರಸ್ತೆ ಸೇರಿ ಅನೇಕ ಕಡೆ ಕಳಪೆ ಕಾಮಗಾರಿಯೂ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಕಳಪೆ ರಸ್ತೆ ಕಾಮಗಾರಿ; ಚಿತ್ರದುರ್ಗ ಜನರ ಹಿಡಿಶಾಪ
ರಸ್ತೆ ಕಾಮಗಾರಿ

Updated on: Mar 21, 2021 | 12:30 PM

ಚಿತ್ರದುರ್ಗ: ಕೋಟೆನಾಡಿನಲ್ಲಿ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಆದರೆ ಅಭಿವೃದ್ಧಿಯ ನೆಪದಲ್ಲಿ ಅವೈಜ್ಞಾನಿಕವಾಗಿ ಎಲ್ಲೆಂದರಲ್ಲಿ ರಸ್ತೆಗಳನ್ನು ಅಗೆದು ಬಿಟ್ಟಿರುವ ಕಾರಣ ಜನ ಸಂಕಷ್ಟಕ್ಕೀಡಾಗಿದ್ದು, ಹಿಡಿಶಾಪ ಹಾಕುತ್ತಿದ್ದಾರೆ. ಒಂದು ಕಡೆ ಡಿಎಂಎಫ್ ಫಂಡ್, ಲೋಕೋಪಯೋಗಿ ಇಲಾಖೆ, ಭದ್ರಾ ಮೇಲ್ದಂಡೆ ಯೋಜನೆ ಅನುದಾನದಡಿ ಬಿ.ಡಿ.ರಸ್ತೆ, ಹೊಳಲ್ಕೆರೆ ರಸ್ತೆ, ಜೋಗಿಮಟ್ಟಿ ರಸ್ತೆ, ದೊಡ್ಡಪೇಟೆ ರಸ್ತೆ ಸೇರಿದಂತೆ ಬಹುತೇಕ ರಸ್ತೆಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದೆ.

ಅವೈಜ್ಞಾನಿಕವಾಗಿ ಏಕಕಾಲಕ್ಕೆ ರಸ್ತೆ ಆರಂಭಿಸಲಾಗಿದ್ದು, ಜನ ಸಂಚಾರಕ್ಕೆ ಅಡ್ಡಿಯಾಗಿದೆ. ಕೊರೊನಾ ಭೀತಿಯ ಸಂದರ್ಭದಲ್ಲಿ ಧೂಳಿನಿಂದ ಜನ ಕಂಗಾಲಾಗಿದ್ದಾರೆ. ಮೂರು ವರ್ಷ ಕಳೆದರೂ ಕಾಮಗಾರಿ ಮುಗಿದಿಲ್ಲ. ಅಲ್ಲದೆ ಮುಖ್ಯ ರಸ್ತೆ ಸೇರಿ ಅನೇಕ ಕಡೆ ಕಳಪೆ ಕಾಮಗಾರಿಯೂ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ನಗರದ ಚಳ್ಳಕೆರೆ ಗೇಟ್​ನಿಂದ ಪ್ರವಾಸಿ ಮಂದಿರದವರೆಗೆ ನಗರಸಭೆ ವಿಶೇಷ ಅನುದಾನದಡಿ 26 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಎಸ್ಎನ್​ಡಿಬಿ ಯೋಜನೆಯಡಿ 19 ಕೋಟಿ ವೆಚ್ಚದಲ್ಲಿ ಹೊಳಲ್ಕೆರೆ ರಸ್ತೆ ನಿರ್ಮಾಣ ನಡೆಯುತ್ತಿದೆ. ಲೋಕೋಪಯೋಗಿ ಇಲಾಖೆ ಅನುದಾನದಡಿ 18 ಕೋಟಿ ವೆಚ್ಚದಲ್ಲಿ ಗಾಂಧಿ ವೃತ್ತದಿಂದ ಜೆಎಂಐಟಿ ವೃತ್ತದವರೆಗೆ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಜೋಗಿಮಟ್ಟಿ ರಸ್ತೆ, ದೊಡ್ಡಪೇಟೆ ರಸ್ತೆ ತಲಾ 3 ಕೋಟಿ ವೆಚ್ಚದಲ್ಲಿ ನಡೆಯುತ್ತಿದೆ. ಧವಳಗಿರಿ ಬಡಾವಣೆಯಲ್ಲಿ 8 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಆದರೆ ನಿಯಮಾನುಸಾರ ವ್ಯವಸ್ಥಿತವಾಗಿ ಕಾಮಗಾರಿ ಮಾತ್ರ ನಡೆಯುತ್ತಿಲ್ಲ. ಹೀಗಾಗಿ ಕಳಪೆ ಕಾಮಗಾರಿ ನಡೆಯುತ್ತಿದೆ. ಅಲ್ಲದೆ ಕಾಮಗಾರಿ ವಿಳಂಬವಾಗುತ್ತಿದ್ದು, ಜನರು ಯಮಹಿಂಸೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ನಗರಸಭೆ ಪೌರಾಯುಕ್ತರಾದ ಹನುಮಂತರಾಜು ಕೇಳಿದರೆ ಯುಜಿಡಿ, ನೀರಿನ ಪೈಪ್ ಲೈನ್ ಸರಿಪಡಿಸಿಕೊಂಡು ಕಾಮಗಾರಿ ಮಾಡುವುದು. ಹಾಗೂ ರಸ್ತೆ ಬದಿ ಕಟ್ಟಡಗಳ ಕೆಲವರು ಕೋರ್ಟ್ ಮೊರೆ ಹೋದ ಕಾರಣ ವಿಳಂಬ ಆಗಿದೆ. ಇನ್ನೆರಡು ತಿಂಗಳಲ್ಲಿ ಬಹುತೇಕ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿವೆ. ಈಗಾಗಲೇ ಡಿಸಿ ಕವಿತಾ ಸಹ ಕಾಮಗಾರಿ ಪರಿಶೀಲನೆ ಮಾಡಿದ್ದು, ಶೀಘ್ರ ಪೂರ್ಣಗೊಳಿಸಲು ಸೂಚಿಸಿದ್ದಾರೆ. ಅಂತೆಯೇ ಕಳಪೆ ಕಾಮಗಾರಿ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎನ್ನುತ್ತಾರೆ.

ರಸ್ತೆ ಕಾಮಗಾರಿಯಿಂದ ಧೂಳು

ರಸ್ತೆಯಲ್ಲಿ ಹೊಂಡ ಬಿದ್ದಿದ್ದರಿಂದ ಓಡಾಡಲು ಕಷ್ಟವಾಗುತ್ತಿದೆ

ಇದನ್ನೂ ಒದಿ

Corona Cases and Lockdown News LIVE: ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಹೊರಗುತ್ತಿಗೆ ವೈದ್ಯರು, ಸಿಬ್ಬಂದಿಗಳ ಸೇವಾವಧಿ ವಿಸ್ತರಣೆ: ಸಚಿವ ಡಾ. ಸುಧಾಕರ್

ಇಟ್ಟಿಗೆ ಫ್ಯಾಕ್ಟರಿಯಿಂದ ಪರಿಸರ ಮಾಲಿನ್ಯ; ಕಡಿವಾಣ ಹಾಕಲು ಚಾಮರಾಜನಗರ ಜನತೆಯ ಒತ್ತಾಯ