AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭಯದ ನಡುವೆ ಮೈಸೂರು ಕಾಡಂಚಿನ ಗ್ರಾಮದ ಜನರಲ್ಲಿ ಹೆಚ್ಚಾದ ಹುಲಿ ಭಯ, ಕೂಂಬಿಂಗ್ ನಡೆಸಿದರೂ ಪ್ರಯೋಜನವಾಗಿಲ್ಲ

ಹುಣಸೂರು ತಾಲ್ಲೂಕಿನ ಕಚುವಿನಹಳ್ಳಿ, ದೊಡ್ಡಹೆಜ್ಜೂರು, ದಾಸನಪುರ, ಹನಗೋಡು, ನೇಗತ್ತೂರು ಗ್ರಾಮಗಳಲ್ಲಿ ಹುಲಿಯ ಆತಂಕ ಹೆಚ್ಚಾಗಿದೆ. ಹೀಗಾಗಿ ಗ್ರಾಮದ ಜನರ ಆತಂಕ ದೂರ ಮಾಡಲು ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಪತ್ತೆಗೆ ಸಾಕಾನೆಗಳಿಂದ ಕೂಂಬಿಂಗ್ ನಡೆಸಿದರು. ಆದರೆ ಕೂಂಬಿಂಗ್ ವೇಳೆಯೂ ಹುಲಿ ಪತ್ತೆಯಾಗಿಲ್ಲ. ಅಲ್ಲಲ್ಲಿ ಕಾಣಿಸಿಕೊಂಡು ಜನರಲ್ಲಿ ಆತಂಕ‌ ಸೃಷ್ಟಿಸುತ್ತಿದೆ.

ಕೊರೊನಾ ಭಯದ ನಡುವೆ ಮೈಸೂರು ಕಾಡಂಚಿನ ಗ್ರಾಮದ ಜನರಲ್ಲಿ ಹೆಚ್ಚಾದ ಹುಲಿ ಭಯ, ಕೂಂಬಿಂಗ್ ನಡೆಸಿದರೂ ಪ್ರಯೋಜನವಾಗಿಲ್ಲ
ಮೈಸೂರು ಕಾಡಂಚಿನ ಗ್ರಾಮದ ಜನರಲ್ಲಿ ಹೆಚ್ಚಾದ ಹುಲಿ ಭಯ
ಆಯೇಷಾ ಬಾನು
ಆಯೇಷಾ ಬಾನು|

Updated on:May 20, 2021 | 9:02 AM

Share

ಮೈಸೂರು: ಕೊರೊನಾ ಲಾಕ್‌ಡೌನ್ ನಡುವೆ ಮೈಸೂರಿನಲ್ಲಿ ಹುಲಿ ಕಾಟ ಶುರುವಾಗಿದೆ. ಕಳೆದ ಎರಡು ವಾರಗಳಿಂದ ಕಾಡಂಚಿನ ಗ್ರಾಮದಲ್ಲಿ ಜಾನುವಾರುಗಳ ಮೇಲೆ ಹುಲಿ ದಾಳಿ ಮಾಡುತ್ತಿದೆ ಇದರಿಂದ ಜನ ಆತಂಕಕ್ಕೆ ಒಳಗಾಗಿದ್ದಾರೆ.

ಹುಣಸೂರು ತಾಲ್ಲೂಕಿನ ಕಚುವಿನಹಳ್ಳಿ, ದೊಡ್ಡಹೆಜ್ಜೂರು, ದಾಸನಪುರ, ಹನಗೋಡು, ನೇಗತ್ತೂರು ಗ್ರಾಮಗಳಲ್ಲಿ ಹುಲಿಯ ಆತಂಕ ಹೆಚ್ಚಾಗಿದೆ. ಹೀಗಾಗಿ ಗ್ರಾಮದ ಜನರ ಆತಂಕ ದೂರ ಮಾಡಲು ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಪತ್ತೆಗೆ ಸಾಕಾನೆಗಳಿಂದ ಕೂಂಬಿಂಗ್ ನಡೆಸಿದರು. ಆದರೆ ಕೂಂಬಿಂಗ್ ವೇಳೆಯೂ ಹುಲಿ ಪತ್ತೆಯಾಗಿಲ್ಲ. ಅಲ್ಲಲ್ಲಿ ಕಾಣಿಸಿಕೊಂಡು ಜನರಲ್ಲಿ ಆತಂಕ‌ ಸೃಷ್ಟಿಸುತ್ತಿದೆ.

ಮೊದಲ ಬಾರಿಗೆ ಮೇ 3 ರಂದು ನೇಗತ್ತೂರಿನಲ್ಲಿ ಹಸುವಿನ ಮೇಲೆ ದಾಳಿ ನಡೆಸಿತ್ತು. ಮೇ 6ರಂದು ಕಚುವಿನಹಳ್ಳಿ ಸಿದ್ದೇಗೌಡರ ಜಾನುವಾರುವಿನ ಮೇಲೆ ದಾಳಿ ಮೇ 8ರಂದು ದಾಸನಪುರದಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವಿನ ಮೇಲೆ ದಾಳಿ ಮೇ 10 ರಂದು ದೊಡ್ಡಹೆಜ್ಜೂರಿನಲ್ಲಿ ಮೇಕೆ ಮೇಲೆ ದಾಳಿ ಮೇ 12 ರಲ್ಲಿ ಲಕ್ಕ ಪಟ್ಟಣ ಮೀಸಲು ಅರಣ್ಯ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿತ್ತು ಮೇ 14ರಂದು ಶೆಟ್ಟಳ್ಳಿ ಲಕ್ ಪಟ್ಟಣ ಗಿರಿಜನರ ಬಾಳೆ ತೋಟ ಹಾಗೂ ಜಮೀನಿನಲ್ಲಿ ಕಾಣಿಸಿಕೊಂಡಿತ್ತು ಮೇ 18ರಂದು ವೀರ ತಮ್ಮನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡಿತ್ತು

ಬಲರಾಮ, ಕೃಷ್ಣ, ಗಣೇಶ ಗೋಪಾಲಸ್ವಾಮಿ ಸಾಕಾನೆಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು. ಆದರೆ ಇದುವರೆಗೂ ಹುಲಿ ಸಿಕಿಲ್ಲ. ಗ್ರಾಮದ ಜನರಲ್ಲಿ ಕೊರೊನಾ ಭಯಕಿಂತಲೂ ಹುಲಿ ಭಯ ಹೆಚ್ಚಾಗಿದೆ. ಆದಷ್ಟು ಬೇಗ ಹಂತಕ ಹುಲಿಯನ್ನು ಸೆರೆ ಹಿಡಿದು ಜನರ ಭಯ ದೂರ ಮಾಡಬೇಕಿದೆ.

ಇದನ್ನೂ ಓದಿ: ಆನೇಕಲ್ ಬಳಿ ಕರಡಿ ಪ್ರತ್ಯಕ್ಷ, ಹುಬ್ಬಳ್ಳಿಯಲ್ಲಿ ಹುಲಿ ಓಡಾಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

Published On - 9:01 am, Thu, 20 May 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು