ನವನಗರ ನಿರ್ಮಾಣಕ್ಕೆ ಬಿಜೆಪಿಗೆ ಜನರ ಬೆಂಬಲ ಖಚಿತ: ಡಾ.ಸಿ.ಎನ್.ಅಶ್ವತ್ಥನಾರಾಯಣ

|

Updated on: Apr 24, 2021 | 4:37 PM

ಬಿಜೆಪಿ ಅಭ್ಯರ್ಥಿಗಳು ಇಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಮಾತನಾಡಿದ ಸಚಿವ ಸಿ.ಪಿ.ಯೋಗೇಶ್ವರ್ ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರಚಿಸಲಾಗಿದೆ ಎಂದು ಅಭಿಪ್ರಾಯಪಟ್ಟರೆ, ಸಚಿವರಾದ ಡಾ. ಸುಧಾಕರ್ ಅವರು ರಾಜೀವ್ ​ಗಾಂಧಿ ವಿವಿ ಕಟ್ಟಡ ಕಾಮಗಾರಿ ಶೀಘ್ರವೇ ಜಿಲ್ಲೆಯಲ್ಲಿ ಆರಂಭಿಸಲಾಗುವುದು ಎಂದರು.

ನವನಗರ ನಿರ್ಮಾಣಕ್ಕೆ ಬಿಜೆಪಿಗೆ ಜನರ ಬೆಂಬಲ ಖಚಿತ: ಡಾ.ಸಿ.ಎನ್.ಅಶ್ವತ್ಥನಾರಾಯಣ
ನವ ರಾಮನಗರ- ಚನ್ನಪಟ್ಟಣ: ಬಿಜೆಪಿ ವಾಗ್ದಾದ ಪ್ರಣಾಳಿಕೆ ಬಿಡುಗಡೆ
Follow us on

ಬೆಂಗಳೂರು: ರಾಮನಗರ ಮತ್ತು ಚನ್ನಪಟ್ಟಣ ನವನಗರಗಳ ನಿರ್ಮಾಣದ ದೃಷ್ಟಿಯಿಂದ ಜನತೆ ಈ ಬಾರಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದಾರೆ ಎಂದು ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಇಂದು (ಏಪ್ರಿಲ್ 24) ವಿಶ್ವಾಸ ವ್ಯಕ್ತಪಡಿಸಿದರು. ನಗರಸಭಾ ಚುನಾವಣೆಯ ಹಿನ್ನೆಲೆಯಲ್ಲಿ ‘ನವ ರಾಮನಗರ- ಚನ್ನಪಟ್ಟಣ: ಬಿಜೆಪಿ ವಾಗ್ದಾದ’ ಪ್ರಣಾಳಿಕೆ ಬಿಡುಗಡೆ ಕುರಿತ ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈ ನಗರಗಳ ಸರ್ವತೋಮುಖ ಪ್ರಗತಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದರು.

ಇಲ್ಲಿನ ಜನಪ್ರತಿನಿಧಿಗಳು ಕೇವಲ ತಮ್ಮ ವೈಯಕ್ತಿಕ ಅಭಿವೃದ್ಧಿ, ಸ್ವಜನ ಪಕ್ಷಪಾತದಲ್ಲೇ ತೊಡಗಿದ್ದರು. ಇದರಿಂದಾಗಿ ಇಲ್ಲಿ ಅಭಿವೃದ್ಧಿ ಆಗಿಲ್ಲ. ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ ಅರ್ಹರಿಗೆ ನಿವೇಶನ ಒದಗಿಸಿ ಮನೆ ನಿರ್ಮಾಣ ಮಾಡಿಕೊಡಲಾಗುವುದು. ಮನೆಮನೆಗೂ ಉದ್ಯೋಗಾವಕಾಶ ನೀಡಲಾಗುವುದು. ಸರ್ವರಿಗೂ ಆರೋಗ್ಯದ ಪರಿಕಲ್ಪನೆ ಸರಿಯಾಗಿ ಜಾರಿಗೊಳ್ಳಲಿದೆ. ರಾಮನಗರಕ್ಕೆ ಪ್ರತ್ಯೇಕ ವಿಶ್ವವಿದ್ಯಾನಿಲಯ ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಬಿಜೆಪಿ ಅಭ್ಯರ್ಥಿಗಳು ಇಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಮಾತನಾಡಿದ ಸಚಿವ ಸಿ.ಪಿ.ಯೋಗೇಶ್ವರ್ ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರಚಿಸಲಾಗಿದೆ ಎಂದು ಅಭಿಪ್ರಾಯಪಟ್ಟರೆ, ಸಚಿವರಾದ ಡಾ. ಸುಧಾಕರ್ ಅವರು ರಾಜೀವ್ ​ಗಾಂಧಿ ವಿವಿ ಕಟ್ಟಡ ಕಾಮಗಾರಿ ಶೀಘ್ರವೇ ಜಿಲ್ಲೆಯಲ್ಲಿ ಆರಂಭಿಸಲಾಗುವುದು. ರಾಮನಗರವನ್ನು ಆರೋಗ್ಯ ನಗರವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದಿದ್ದಾರೆ.

ಸಚಿವ ಬೈರತಿ ಬಸವರಾಜ್, ಎಂ.ಟಿ.ಬಿ.ನಾಗರಾಜ್, ಆರ್.ಶಂಕರ್, ನಾರಾಯಣ ಗೌಡ, ಕರ ಕೌಶಲ್ಯ ನಿಗಮದ ಅಧ್ಯಕ್ಷರಾದ ರಾಘವೇಂದ್ರ, ಸರ್ವ ಕ್ಷೇತ್ರಗಳ ಮತ್ತು ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ಜನರು ಈ ಬಾರಿ ಬಿಜೆಪಿಯನ್ನು ಬೆಂಬಲಿಸುವ ವಿಶ್ವಾಸ ವ್ಯಕ್ತಪಡಿಸಿದರು. ನೀರಿನ ಸಮಸ್ಯೆ ಮತ್ತು ಒಳಚರಂಡಿ ಸಮಸ್ಯೆ ಪರಿಹಾರಕ್ಕಾಗಿ ಮತ್ತು ಜಿಲ್ಲೆಯ ವಿವಿಧ ಸಮಸ್ಯೆಗಳ ಪರಿಹಾರದ ದೃಷ್ಟಿಯಿಂದ ಮತದಾರರು ಬಿಜೆಪಿಗೆ ಗೆಲುವು ತಂದು ಕೊಡಲಿದ್ದಾರೆ ಎಂದು ಆಶಿಸಿದರು.

ಸಂಸದರಾದ ಪಿ.ಸಿ.ಮೋಹನ್, ಪಕ್ಷದ ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜ್ ಮತ್ತು ಇತರ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ

ಅಮೃತ್​ಸರ್​ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಆರು ರೋಗಿಗಳು ಸಾವು

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಹಯೋಗದೊಂದಿಗೆ ಅರಣ್ಯ ಬೆಳೆಸುವ ಹಾಗೂ ವನ್ಯಜೀವಿ ಸಂತತಿ ಹೆಚ್ಚಳಕ್ಕೆ ಕಾರ್ಯಕ್ರಮ ರೂಪಿಸಲಾಗುವುದು: ಸಚಿವ ಅರವಿಂದ ಲಿಂಬಾವಳಿ

(People support to BJP for New City says cn Ashwatthanarayana)