AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆ ಆರಂಭದಲ್ಲೇ ಹಾಹಾಕಾರ: ಒಂದು ಬಿಂದಿಗೆಗೆ 8 ರೂ. ಕೊಟ್ಟು ನೀರನ್ನು ಖರೀದಿಸುತ್ತಿರುವ ಕೋಲಾರ ಮಂದಿ

ಬರದ ಹಣೆಪಟ್ಟಿ ಕಟ್ಟಿಕೊಂಡಿರುವ ಕೋಲಾರ ಜಿಲ್ಲೆಯ ಹಳ್ಳಿಗಳಲ್ಲಿ ನೀರು ಹಿಡಿದುಕೊಳ್ಳಲು ಮಹಿಳೆಯರು ಮುಗಿ ಬೀಳುತ್ತಿದ್ದು, ಬೇಸಿಗೆಯ ಆರಂಭದಲ್ಲಿ ನೀರಿಗಾಗಿ ಜನರು ಪರದಾಡುತ್ತಿದ್ದಾರೆ. ಯಾವುದೇ ನದಿ ನಾಲೆಗಳಿಲ್ಲದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಜನರನ್ನು ಬಿಟ್ಟು ಬಿಡದೆ ಕಾಡುತ್ತಿದೆ.

ಬೇಸಿಗೆ ಆರಂಭದಲ್ಲೇ ಹಾಹಾಕಾರ: ಒಂದು ಬಿಂದಿಗೆಗೆ 8 ರೂ. ಕೊಟ್ಟು ನೀರನ್ನು ಖರೀದಿಸುತ್ತಿರುವ ಕೋಲಾರ ಮಂದಿ
ನೀರಿಗಾಗಿ ಪರದಾಡುತ್ತಿರುವ ಜನರು
sandhya thejappa
| Updated By: preethi shettigar|

Updated on: Mar 16, 2021 | 11:31 AM

Share

ಕೋಲಾರ: ಬರದ ನಾಡು ಕೋಲಾರದಲ್ಲಿ ಬೇಸಿಗೆ ಆರಂಭದಲ್ಲೇ ನೀರಿಗಾಗಿ ಜನರ ಪರದಾಟ ಶುರುವಾಗಿದೆ.  ಜಿಲ್ಲೆಯಲ್ಲಿ 42 ಕ್ಕೂ ಹೆಚ್ಚು ಗ್ರಾಮಗಳಲ್ಲಿ ನೀರಿನ ಸಮಸ್ಯೆ ತಲೆದೂರಿದ್ದು, ಜಿಲ್ಲಾಡಳಿತ ಬೇಸಿಗೆಯನ್ನು ಎದುರಿಸಲು ಸಿದ್ಧವಾಗುತ್ತಿದೆ. ಈ ಬಾರಿಯ ಬಿರು ಬಿಸಿಲನ್ನು ಗೆಲ್ಲುವುದು ಜಿಲ್ಲಾಡಳಿತಕ್ಕೆ ದೊಡ್ಡ ಸವಾಲಾಗಿದೆ.ಬರದ ಹಣೆಪಟ್ಟಿ ಕಟ್ಟಿಕೊಂಡಿರುವ ಕೋಲಾರ ಜಿಲ್ಲೆಯ ಹಳ್ಳಿಗಳಲ್ಲಿ ನೀರು ಹಿಡಿದುಕೊಳ್ಳಲು ಮಹಿಳೆಯರು ಮುಗಿ ಬೀಳುತ್ತಿದ್ದು, ಬೇಸಿಗೆಯ ಆರಂಭದಲ್ಲಿ ನೀರಿಗಾಗಿ ಜನರು ಪರದಾಡುತ್ತಿದ್ದಾರೆ. ಯಾವುದೇ ನದಿ ನಾಲೆಗಳಿಲ್ಲದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಜನರನ್ನು ಬಿಟ್ಟು ಬಿಡದೆ ಕಾಡುತ್ತಿದೆ.

ಜಿಲ್ಲೆಯ ಜನರು ಕುಡಿಯುವ ನೀರು ಹಾಗೂ ದಿನ ಬಳಕೆ ನೀರಿಗಾಗಿ ಪ್ರತಿನಿತ್ಯ ಬಿಂದಿಗೆಗಳೊಂದಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಗ್ರಾಮ ಪಂಚಾಯತಿ​​ಗಳಿಂದ ಸರಿಯಾದ ನೀರು ಸರಬರಾಜು ಆಗದ ಹಿನ್ನೆಲೆಯಲ್ಲಿ ಜನರು ಖಾಸಗಿ ಟ್ಯಾಂಕರ್​ಗಳ ಮೊರೆ ಹೋಗಿ ಒಂದು ಬಿಂದಿಗೆ ಕುಡಿಯುವ ನೀರಿಗೆ 8 ರಿಂದ 10 ರೂಪಾಯಿ ಹಣ ಕೊಟ್ಟು ಖರೀದಿ ಮಾಡುತ್ತಿದ್ದಾರೆ.

ಕೆಲವೆಡೆ ಗ್ರಾಮಕ್ಕೆಲ್ಲಾ ಒಂದೆ ಒಂದು ಕೊಳವೆ ಬಾವಿ ಇದ್ದು, ಎಲ್ಲರೂ ಒಂದೆ ನಲ್ಲಿಯಲ್ಲಿ ನೀರು ಹಿಡಿದು ಕೊಳ್ಳಬೇಕು. ಇನ್ನು ಈ ಬಗ್ಗೆ ಅಧಿಕಾರಿಗಳನ್ನ ಮತ್ತು ಜನಪ್ರತಿನಿಧಿಗಳನ್ನ ಕೇಳಿದರೆ ಬೋರ್ ವೆಲ್ ಕೆಟ್ಟೋಗಿದೆ ಅಥವಾ ನೀರಿಗಾಗಿ ನಮ್ಮ ಬಳಿ ಹಣ ಇಲ್ಲ ಎಂದು ಹೇಳುವ ಮೂಲಕ ಜಾರಿಕೊಳ್ಳುತ್ತಿದ್ದಾರೆ ಎಂದು ಜನರು ಹೇಳುತ್ತಿದ್ದಾರೆ.

ಒಂದು ಬಿಂದಿಗೆಗೆ 8 ರಿಂದ 10 ರೂ. ಕೊಟ್ಟು ನೀರನ್ನು ಖರೀದಿಸುತ್ತಿದ್ದಾರೆ

ಟ್ಯಾಂಕರ್​ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ

42 ಗ್ರಾಮಗಳಲ್ಲಿ ನೀರಿನ ಸಮಸ್ಯೆ ನೀರಿನ ನಾಲೆಗಳಾದ ಕೆರೆ, ಕುಂಟೆ, ಬಾವಿಗಳು ಭತ್ತಿ ಹೋಗಿದ್ದು, ಸದ್ಯ ಕೊಳವೆ ಬಾವಿಗಳಲ್ಲಿ ಸಿಗುತ್ತಿರುವ ಅಲ್ಪಸ್ವಲ್ಪ ನೀರೇ ಈಗ ಜನರಿಗೆ ಆಸರೆಯಾಗಿದೆ. ಕುಡಿಯುವ ನೀರಿನ ಸಮಸ್ಯೆ ಹೆಚ್ಚಾದ ಹಿನ್ನೆಲೆ ಜಿಲ್ಲೆಯಾದ್ಯಂತ ಜನರು ನೀರಿಗಾಗಿ ಊರಿಂದ ಊರಿಗೆ ಬಿಂದಿಗೆಗಳನ್ನು ಹಿಡಿದುಕೊಂಡು ಪರದಾಡುವ ಪರಿಸ್ಥಿತಿ ಬಂದೊದಗಿದೆ. ಸದ್ಯ ಅಧಿಕಾರಿಗಳ ಲೆಕ್ಕಾಚಾರದ ಪ್ರಕಾರ ಜಿಲ್ಲೆಯಲ್ಲಿ 42 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಈ ಎಲ್ಲಾ ಗ್ರಾಮಗಳಿಗೂ ಖಾಸಗಿ ಕೊಳವೆ ಬಾವಿಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಕೆಲವೆಡೆ ಟ್ಯಾಂಕರ್​ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇನ್ನು ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯಲ್ಲಿನ ವಾರ್ಡ್​ಗಳಿಗೆ ಟ್ಯಾಂಕರ್​ಗಳ ಮೂಲಕವೇ ನೀರನ್ನು ಸರಬರಾಜು ಮಾಡಲು ಸೂಚನೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೇವಿನ ಸಮಸ್ಯೆ ಈವರೆಗೆ ಕಂಡು ಬಂದಿಲ್ಲ. ಆದರೆ ಅದಕ್ಕೆ ಬೇಕಾದ ಪೂರಕ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ತಿಳಿಸಿದ್ದಾರೆ.

ತಲೆ ಮೇಲೆ ಮತ್ತು ಕೈಯಲ್ಲಿ ನೀರನ್ನು ಹಿಡಿದು ಸಾಗುತ್ತಿರುವ ಮಹಿಳೆ

ನೀರಿಗಾಗಿ ಕೊಡಗು ಜನರ ಪರದಾಟ

ಪ್ರತಿನಿತ್ಯ ಮಹಿಳೆಯವರು, ಮಕ್ಕಳು ಕೊಡ ಹೊತ್ತು ನೀರಿಗಾಗಿ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ಎದುರಾಗಿದೆ. ಗ್ರಾಮಗಳಲ್ಲಿ ಮತ್ತೆ ನೀರಿನ ರಾಜಕೀಯ ಶುರುವಾಗಿದ್ದು, ಗ್ರಾಮೀಣ ಭಾಗದ ಜನರು ಈಗ ಅಡ್ಡಕತ್ತರಿಯಲ್ಲಿ ಸಿಲುಕಿಕೊಂಡು ನಮ್ಮ ಗೋಳು ಕೇಳುವವರು ಯಾರು ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ

ಈ ಬಾರಿ ಬೇಸಿಗೆಯಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಪ್ರಾಣಿಗಳಿಗಿಲ್ಲ ನೀರಿನ ತೊಂದರೆ

ಹಕ್ಕಿಜ್ವರ ಶಂಕೆ: ಒಂದೇ ವಾರದಲ್ಲಿ 7ರಿಂದ 8 ಸಾವಿರ ಕೋಳಿಗಳ ಸಾವು.. ರಾತ್ರೋರಾತ್ರಿ ಸತ್ತ ಕೋಳಿಗಳ ವಿಲೇವಾರಿ ಮಾಡಿ ಪ್ರಕರಣ ಮುಚ್ಚಿಹಾಕುವ ಯತ್ನ?

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ