Mega Job Fair 2026: ಮೈಸೂರಿನ ಉದ್ಯೋಗಾಕಾಂಕ್ಷಿಗಳಿಗೆ ಗುಡ್ನ್ಯೂಸ್​; ಜೂ. 24 ಬೃಹತ್ ಉದ್ಯೋಗ ಮೇಳ!

ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ನೇತೃತ್ವದಲ್ಲಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಬಿ.ಜಿ.ಎಸ್ ಶಿಕ್ಷಣ ಸಂಸ್ಥೆಗಳು ಪಿರಿಯಾಪಟ್ಟಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿವೆ. ಜೂನ್ 24 ರಂದು ನಡೆಯುವ ಈ ಮೇಳವು SSLC, PUC, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ಪಡೆದ 18-35 ವರ್ಷದ ಯುವಕ-ಯುವತಿಯರಿಗೆ ಉಚಿತ ಉದ್ಯೋಗಾವಕಾಶಗಳನ್ನು ಒದಗಿಸುತ್ತದೆ. ಆಸಕ್ತರು ಕೂಡಲೇ ಆನ್‌ಲೈನ್‌ ಮೂಲಕ ನೋಂದಾಯಿಸಿಕೊಳ್ಳಿ.

Mega Job Fair 2026: ಮೈಸೂರಿನ ಉದ್ಯೋಗಾಕಾಂಕ್ಷಿಗಳಿಗೆ ಗುಡ್ನ್ಯೂಸ್​; ಜೂ. 24 ಬೃಹತ್ ಉದ್ಯೋಗ ಮೇಳ!
ಬೃಹತ್ ಉದ್ಯೋಗ ಮೇಳ

Updated on: Jun 16, 2026 | 1:29 PM

ಮೈಸೂರು: ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಮಹತ್ವದ ಸಿಹಿ ಸುದ್ದಿ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ನೇತೃತ್ವದಲ್ಲಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮೈಸೂರು ಮತ್ತು ಬಿ.ಜಿ.ಎಸ್ ಶಿಕ್ಷಣ ಸಂಸ್ಥೆಗಳು ಪಿರಿಯಾಪಟ್ಟಣ ಇವರ ಜಂಟಿ ಸಹಯೋಗದೊಂದಿಗೆ ಪಿರಿಯಾಪಟ್ಟಣ ತಾಲೂಕಿನಲ್ಲಿ ಒಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಅರ್ಹ ಹಾಗೂ ಆಸಕ್ತ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಒದಗಿಸುವ ನಿಟ್ಟಿನಲ್ಲಿ ಈ ಮೇಳವು ಒಂದು ಅತ್ಯುತ್ತಮ ವೇದಿಕೆಯಾಗಲಿದ್ದು, ಪ್ರವೇಶ ಸಂಪೂರ್ಣ ಉಚಿತವಾಗಿರುತ್ತದೆ.

ಉದ್ಯೋಗ ಮೇಳದ ಸಂಪೂರ್ಣ ವಿವರಗಳು:

  • ದಿನಾಂಕ: 24-06-2026 (ಬುಧವಾರ)
  • ಸಮಯ: ಬೆಳಿಗ್ಗೆ 8:00 ರಿಂದ ಸಂಜೆ 4:00 ರವರೆಗೆ
  • ಸ್ಥಳ: ಬಿ.ಜಿ.ಎಸ್ ಶಿಕ್ಷಣ ಸಂಸ್ಥೆಗಳು, ಅಬ್ಬೂರು ಗ್ರಾಮ, ಪಿರಿಯಾಪಟ್ಟಣ ತಾಲ್ಲೂಕು, ಮೈಸೂರು ಜಿಲ್ಲೆ.

ಅರ್ಹತೆ ಮತ್ತು ವಯೋಮಿತಿ:

ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ವಿವಿಧ ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಎಸ್‌ಎಸ್‌ಎಲ್‌ಸಿ (SSLC), ಪಿಯುಸಿ (PUC), ಡಿಪ್ಲೋಮಾ, ಐಟಿಐ (ITI), ಯಾವುದೇ ಪದವಿ (Graduate) ಮತ್ತು ಸ್ನಾತಕೋತ್ತರ ಪದವಿ (Post Graduate) ಪಡೆದವರು ಭಾಗವಹಿಸಬಹುದು. 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬಹುದು.

ಇದನ್ನೂ ಓದಿ: ಲಿಖಿತ ಪರೀಕ್ಷೆಯಿಲ್ಲದೆ ಸಿಗಲಿದೆ ತಿಂಗಳಿಗೆ 2.25 ಲಕ್ಷ ರೂ. ಸಂಬಳದ ಉದ್ಯೋಗ! ಅರ್ಜಿ ಸಲ್ಲಿಸುವುದು ಹೇಗೆ?

ಆನ್‌ಲೈನ್ ನೋಂದಣಿ ಮತ್ತು ಸಂಪರ್ಕ ಮಾಹಿತಿ:

ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತ ಅಭ್ಯರ್ಥಿಗಳು ಕೆಳಗಿನ ಗೂಗಲ್ ಫಾರ್ಮ್ ಲಿಂಕ್ ಬಳಸಿ ತಕ್ಷಣವೇ ನೋಂದಾಯಿಸಿಕೊಳ್ಳಬಹುದು:

ಇಲ್ಲಿ ಕ್ಲಿಕ್ ಮಾಡಿ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಿ

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

ನಿಮಗೆ ಉದ್ಯೋಗ ಮೇಳದ ಕುರಿತು ಯಾವುದೇ ಪ್ರಶ್ನೆಗಳು ಅಥವಾ ಹೆಚ್ಚಿನ ಮಾಹಿತಿ ಅಗತ್ಯವಿದ್ದರೆ, ಈ ಕೆಳಗಿನ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ:

  • 9036356862
  • 9964463361
  • 8748984360

ಮುಖ್ಯ ಸೂಚನೆ:

ಉದ್ಯೋಗಾಕಾಂಕ್ಷಿಗಳು ಮೇಳಕ್ಕೆ ಬರುವಾಗ ತಮ್ಮ ರೆಸ್ಯೂಮ್ (Resume/Biodata) ಹಾಗೂ ಶೈಕ್ಷಣಿಕ ದಾಖಲಾತಿಗಳ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಲು ಕೋರಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us