Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ಪಾಪರ್‌ ಆಗಿರುವುದರಿಂದ ಕಾಂಗ್ರೆಸ್ ಸುಪ್ರೀಂಕೋರ್ಟ್ ಮೊರೆ ಹೋಗಿದೆ: ಆರ್ ಅಶೋಕ

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಮತ್ತು ರಾಜ್ಯದ ಕಾಂಗ್ರೆಸ್ ಸರ್ಕಾರದ ನಡುವೆ ಬರ ಪರಿಹಾರ ಹಣದ ವಿಚಾರವಾಗಿ ಜಟಾಪಟಿ ನಡೆಯುತ್ತಿದೆ. ಬರ ಪರಿಹಾರದ ಹಣಕ್ಕಾಗಿ ಕೇಂದ್ರದ ವಿರುದ್ಧ ಸುಪ್ರೀಂಕೋರ್ಟ್​ಗೆ ಅರ್ಜಿ ಹಾಕಿದ್ದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ತಿರುಗೇಟುಕೊಟ್ಟ ಆರ್ ಅಶೋಕ, ಸರ್ಕಾರ ಪಾಪರ್‌ ಆಗಿರುವುದರಿಂದ ಸುಪ್ರೀಂ ಮೊರೆ ಹೋಗಿದೆ ಎಂದರು.

ಸರ್ಕಾರ ಪಾಪರ್‌ ಆಗಿರುವುದರಿಂದ ಕಾಂಗ್ರೆಸ್ ಸುಪ್ರೀಂಕೋರ್ಟ್ ಮೊರೆ ಹೋಗಿದೆ: ಆರ್ ಅಶೋಕ
ಆರ್ ಅಶೋಕ ಮತ್ತು ಸಿದ್ದರಾಮಯ್ಯ
Follow us
Pramod Shastri G
| Updated By: Rakesh Nayak Manchi

Updated on: Mar 23, 2024 | 6:56 PM

ಬೆಂಗಳೂರು, ಮಾ.23: ರಾಜ್ಯ ಕಾಂಗ್ರೆಸ್ ಸರ್ಕಾರ ಪಾಪರ್‌ ಆಗಿರುವುದರಿಂದ ಸುಪ್ರೀಂಕೋರ್ಟ್ (Supreme Court) ಮೊರೆ ಹೋಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ (R Ashoka) ಹೇಳಿದ್ದಾರೆ. ಬರ ಪರಿಹಾರದ ಹಣಕ್ಕಾಗಿ ಕೇಂದ್ರದ ವಿರುದ್ಧ ಸುಪ್ರೀಂಕೋರ್ಟ್​ಗೆ ಅರ್ಜಿ ಹಾಕಿದ್ದಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಅಶೋಕ, ಕೇಂದ್ರದ ಜೊತೆ ರಾಜ್ಯ ಸರ್ಕಾರ ಉತ್ತಮ ಸಂಬಂಧ ಹೊಂದಿರಬೇಕು ಎಂದರು.

ಕಾಂಗ್ರೆಸ್‌ ಸರ್ಕಾರ ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಮೀಸಲಿಟ್ಟಿದ್ದ ಹಣವನ್ನು ನುಂಗಿ ನೀರು ಕುಡಿದಿದೆ. ಈಗ ಸರ್ಕಾರ ಪಾಪರ್ ಆಗಿದೆ, ಇದನ್ನು ಮುಚ್ಚಿಹಾಕಲು ಇಂತಹ ನಾಟಕವಾಡುತ್ತಿದೆ ಎಂದು ಆರೋಪಿಸಿದ ಅಶೋಕ, ನೆರೆ, ಬರ ಬಂದಾಗ ನಿಯಮದಂತೆ ಯಾವ ರಾಜ್ಯಗಳಿಗೆ ಎಷ್ಟು ಕೊಡಬೇಕೋ ಅಷ್ಟನ್ನು ಕೇಂದ್ರ ಹಣ ಕೊಡುತ್ತಿದೆ ಎಂದರು. ಅಲ್ಲದೆ, ಬರಗಾಲ ಎಂದು ಘೋಷಣೆಗೆ ಸರ್ಕಾರ 3 ತಿಂಗಳು ತಡ ಮಾಡಿತ್ತು ಎಂದು ಆರೋಪಿಸಿದರು.

ಇದನ್ನೂ ಓದಿ: ಕಾಂಗ್ರೆಸ್​​ ಸರಿಯಾಗಿ ಆರ್ಥಿಕ ನಿರ್ವಹಣೆ ಮಾಡಿಲ್ಲ, ಸುಪ್ರೀಂಕೋರ್ಟ್​ಗೆ ಹೋಗುವ ನಾಟಕ ಮಾಡ್ತಿದೆ: ಬೆಲ್ಲದ್

ಲೋಕಸಭೆ ಚುನಾವಣೆಯಲ್ಲಿ ಐಎನ್​ಡಿಐ ಮೈತ್ರಿಕೂಟ ಗೆಲುವು ಸಾಧಿಸಿದರೆ ಮೇಕೆದಾಟು ಯೋಜನೆ ಬಂದ್ ಆಗಲಿದೆ ಎಂದು ಡಿಎಂಕೆ ಹೇಳಿದೆ. ಈ ವಿಚಾರವಾಗಿ ಬಿಜೆಪಿ ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದೆ. ಡಿಎಂಕೆ ಹೇಳಿಕೆ ಬಗ್ಗೆ ಮಾತನಾಡಿದ ಅಶೋಕ, ಮೇಕೆದಾಟು ಯೋಜನೆಗೆ ಅವಕಾಶ ಕೊಡಲ್ಲವೆಂದು ಡಿಎಂಕೆ ಹೇಳಿದೆ. ಜನ ಈ ಬಗ್ಗೆ ಕೇಳುತ್ತಿದ್ದಾರೆ. ಜನರ ಮನಸ್ಸನ್ನು ಬೇರೆ ಕಡೆ ತಿರುಗಿಸಲು ಸುಪ್ರೀಂಕೋರ್ಟ್ ಮೊರೆ ಹೋಗಿದೆ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರಿನಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಸಿದ್ದರಾಮಯ್ಯ, ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದರೂ ಕೂಡ ಕೇಂದ್ರ ಸರ್ಕಾರ ಇನ್ನೂ ಬರ ಪರಿಹಾರ ಘೋಷಣೆ ಮಾಡಿಲ್ಲ. ಐದು ತಿಂಗಳ ಕಾಲ ಕಾದರೂ ಇನ್ನೂ ಬಿಡುಗಡೆ ಮಾಡಿಲ್ಲ. ಹೀಗಾಗಿ ಬರ ಪರಿಹಾರ ಕೊಡಿಸುವಂತೆ ಸುಪ್ರೀಂ ಕೋರ್ಟ್​ನಲ್ಲಿ ಆರ್ಟಿಕಲ್ 32ರ ಅಡಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಿಟ್ ಅರ್ಜಿ ಸಲ್ಲಿಸಿದ್ದೇವೆ. ಸುಪ್ರೀಂಕೋರ್ಟ್​ನ ವಾರದ ರಜೆ ಮುಗಿದ ಬಳಿಕ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳುತ್ತಾರೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ