ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: 6 ಗಂಟೆ ಸ್ತಬ್ಧವಾದ ಒಡಿಶಾ!
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು ಒಡಿಶಾದಲ್ಲಿ ಪ್ರತಿಭಟನೆ ಕೈಗೊಂಡಿದ್ದಾರೆ. ಈ ಕುರಿತಂತೆ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು: ದಿನೇ ದಿನೇ ಪೆಟ್ರೋಲ್ ಬೆಲೆ ಜಿಗಿಯುತ್ತಿದೆ. ಇಂದು ಸತತ 7ನೇ ಬಾರಿಯೂ ದರ ಏರಿಕೆಯತ್ತ ಸಾಗಿದೆ. ಇಂದು ಲೀಟರ್ ಪೆಟ್ರೋಲ್ ಬೆಲೆ 26 ಪೈಸೆ ಏರಿಕೆಯಾಗಿದ್ದು, ಲೀಟರ್ ಡೀಸೆಲ್ ಬೆಲೆ 29 ಪೈಸೆಯಷ್ಟು ಏರಿಕೆಯಾಗಿದೆ. ಈ ಕುರಿತಂತೆ ಕಾಂಗ್ರೆಸ್ ಕಾರ್ಯಕರ್ತರು ಧರಣಿ ಕುಳಿತಿದ್ದಾರೆ. ಒಡಿಶಾದ ಭುವನೇಶ್ವರದಲ್ಲಿ ಪೆಟ್ರೋಲ್ ಬೆಲೆ ಲೀ.ಗೆ 89.69 ರೂ. ಹಾಗೂ ಡೀಸೆಲ್ ಬೆಲೆ ಪ್ರತಿ ಲೀ.ಗೆ 86.47 ರೂ. ಆಗಿದೆ. ಒಡಿಶಾದಲ್ಲಿ 6 ಗಂಟೆಗಳ ಕಾಲ ಬಂದ್ ಮಾಡಿದ್ದಾರೆ. ಇದಲ್ಲದೆ, ರೈಲು ತಡೆ ಕೂಡ ನಡೆದಿದೆ.
ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಏರಿಕೆಯ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಟ್ವೀಟ್ ಮಾಡಿದ್ದಾರೆ.
जनता से लूट,सिर्फ़ ‘दो’ का विकास।#LPGPriceHike pic.twitter.com/GHdNcQJFYq
— Rahul Gandhi (@RahulGandhi) February 15, 2021
ಪೆಟ್ರೋಲ್ ಬೆಲೆ ಏರಿಕೆಯ ಕುರಿತು ಮೈಸೂರಿನಲ್ಲೂ ಆಕ್ರೋಶ: ಪೆಟ್ರೋಲ್ ಬೆಲೆ ಏರಿಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ವಾಹನ ಸವಾರರು ಕಿಡಿಕಾರುತ್ತಿದ್ದಾರೆ. ಪೆಟ್ರೋಲ್ ವಾಹನ ಬಿಟ್ಟು ಎಲೆಕ್ಟ್ರಿಕಲ್ ವಾಹನ ಖರೀದಿಸೋಣ ಎಂದರೆ ಅದರ ಬೆಲೆಯನ್ನೂ ಜಾಸ್ತಿ ಮಾಡಿದ್ದಾರೆ. ಅಚ್ಛೆ ದಿನ್, ಅಚ್ಛೆ ದಿನ್ ಅನ್ನೋದು ಇದೇನಾ ಎಂದು ವಾಹನ ಸವಾರರು ಪ್ರಶ್ನೆ ಒಡ್ಡಿದ್ದಾರೆ.
ಬೆಳಗಾವಿಯಲ್ಲಿ ಪ್ರತಿಭಟನೆ : ಪೆಟ್ರೋಲ್, ಡೀಸೆಲ್ ದರ ಏರಿಕೆ ಬಿಸಿ ಬೆಳಗಾವಿ ವಾಹನ ಸವಾರರ ಆಕ್ರೋಶಕ್ಕೂ ಕಾರಣವಾಗಿದೆ. ಇಂದಿನ ಪೆಟ್ರೋಲ್ ದರ ಲೀಟರ್ಗೆ 91.81 ರೂ ಹಾಗೂ ಡೀಸೆಲ್ ದರ ಲೀಟರ್ಗೆ 84 ರೂ. ಆಗಿದೆ. ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡಿಸೇಲ್ ದರ ಇಳಿಸುವುದಾಗಿ ಹೇಳಿ ಇದೀಗ ಏರಿಕೆ ಮಾಡಿದ್ದೀರಿ, ಕೂಡಲೇ ಪೆಟ್ರೋಲ್ ಬೆಲೆ ಕಡಿಮೆ ಮಾಡಿ ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಫೆಬ್ರವರಿ 26ರಂದು ದೇಶಾದ್ಯಂತ ಧರಣಿ; ಲಾರಿ ಮಾಲೀಕರ ಬೆಂಬಲ
ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಟಿವಿ9 ಜೊತೆ ಮಾತನಾಡಿ, ಫೆ.26ರಂದು ಹೆದ್ದಾರಿಗಳಲ್ಲಿ ಲಾರಿ ನಿಲ್ಲಿಸಿ ಪ್ರತಿಭಟನೆ ಕೈಗೊಳ್ಳಲು ಬೆಂಬಲ ವ್ಯಕ್ತವಾಗುತ್ತಿದೆ. ಅಂಗಡಿ ಮುಂಗಟ್ಟು ಬಂದ್ ಮಾಡಿ ಪ್ರತಿಭಟನೆ ನಡೆಸುವ ಆಲೋಚನೆ ಇದೆ. ವ್ಯಾಪಾರಿಗಳ ಪ್ರತಿಭಟನೆಗೆ ಲಾರಿ ಮಾಲೀಕರ ಸಂಘದ ಬೆಂಬಲವಿದೆ. ಬೆಳಗ್ಗೆಯಿಂದ ಸಂಜೆವರೆಗೆ ಲಾರಿ ನಿಲ್ಲಿಸಿ ಪ್ರತಿಭಟನೆ ನಡೆಸ್ತೇವೆ ಎಂದಿದ್ದಾರೆ.
Published On - 4:37 pm, Mon, 15 February 21