Petrol Price Today: ಇತಿಹಾಸದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಶತಕ ಬಾರಿಸಿ ಮುನ್ನುಗ್ಗಿದ ಪೆಟ್ರೋಲ್​ ದರ

Petrol Diesel Rate Today: ಇಂದು ಪ್ರತಿ ಲೀಟರ್​ ಪೆಟ್ರೋಲ್​ ದರದಲ್ಲಿ 26-27 ಪೈಸೆ ಹಾಗೂ ಲೀಟರ್​ ಡೀಸೆಲ್​ ದರದಲ್ಲಿ 28-30 ಪೈಸೆ ಹೆಚ್ಚಳ ಮಾಡಲಾಗಿದೆ. 

Petrol Price Today: ಇತಿಹಾಸದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಶತಕ ಬಾರಿಸಿ ಮುನ್ನುಗ್ಗಿದ ಪೆಟ್ರೋಲ್​ ದರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on:Jun 18, 2021 | 8:58 AM

Petrol Diesel Price Today | ಬೆಂಗಳೂರು: ಜೂನ್​ ತಿಂಗಳ ಆರಂಭದಿಂದ ಪೆಟ್ರೋಲ್​ ಮತ್ತು ಡೀಸೆಲ್​ ದರ ಒಟ್ಟು 10 ಬಾರಿ ಏರಿಕೆ ಕಂಡಿದೆ. ಒಂದು ದಿನದ ವಿರಾಮದ ಬಳಿಕ ಇಂದು (ಶುಕ್ರವಾರ, ಜೂನ್​ 18) ಇಂಧನ ದರ ಏರಿಕೆಯ ಕಂಡಿದೆ. ಆ ಮೂಲಕ ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 100ರ ಗಡಿ ದಾಟಿ ಮುನ್ನುಗ್ಗಿದೆ. ಇಂದು ಪ್ರತಿ ಲೀಟರ್​ ಪೆಟ್ರೋಲ್​ ದರದಲ್ಲಿ 26-27 ಪೈಸೆ ಹಾಗೂ ಲೀಟರ್​ ಡೀಸೆಲ್​ ದರದಲ್ಲಿ 28-30 ಪೈಸೆ ಹೆಚ್ಚಳ ಮಾಡಲಾಗಿದೆ. 

ಜೂನ್​ ತಿಂಗಳ ಪ್ರಾರಂಭದಿಂದ ಇಲ್ಲಿಯವರೆಗೆ ಇಂಧನ ದರವನ್ನು ಒಟ್ಟು 10 ಬಾರಿ ಏರಿಕೆ ಮಾಡಲಾಯಿತು. ಕಳೆದ ಮೇ ತಿಂಗಳಿನಲ್ಲಿ ಒಟ್ಟು 16 ಬಾರಿ ಇಂಧನ ದರವನ್ನು ಹೆಚ್ಚಳ ಮಾಡಲಾಗಿತ್ತು. ಕಳೆದ ತಿಂಗಳಿನಿಂದ ಇಲ್ಲಿಯವರೆಗೆ ಒಟ್ಟು 26 ಬಾರಿ ಇಂಧನ ದರವನ್ನು ಹೆಚ್ಚಿಸಲಾಗಿದೆ. ಕರ್ನಾಟಕ ರಾಜ್ಯದ ಚಿಕ್ಕಮಗಳೂರು, ಬಳ್ಳಾರಿ ಹಾಗೂ ಉತ್ತರ ಕನ್ನಡದ ಶಿರಸಿಯಲ್ಲಿ ಈಗಾಗಲೇ ಲೀಟರ್​ ಪೆಟ್ರೋಲ್​ ದರ ಶತಕ ಬಾರಿಸಿ ಮುನ್ನುಗ್ಗಿದೆ. ಕಳೆದ ಒಂದು ದಿನದ ಹಿಂದೆಯಷ್ಟೇ ತೈಲ ದರ ಹೆಚ್ಚಳ ಬಳಿಕ ಈ ಗುಂಪಿಗೆ ಬೀದರ್​ ಮತ್ತು ಹಾವೇರಿ ಜಿಲ್ಲೆಗಳು ಸೇರಿಕೊಂಡಿದ್ದವು.

ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 96.93 ರೂಪಾಯಿಗೆ ಏರಿಕೆ ಆಗಿದೆ. ಲೀಟರ್​ ಡೀಸೆಲ್​ ದರ 87.69 ರೂಪಾಯಿಗೆ ಹೆಚ್ಚಳವಾಗಿದೆ. ಅದೇ ರೀತಿ ಪ್ರಮುಖ ಮೆಟ್ರೋ ನಗರಗಳಲ್ಲಿ ಗರಿಷ್ಟ ಮಟ್ಟದಲ್ಲಿರುವ ಮುಂಬೈ ನಗರದಲ್ಲಿ ಲೀಟರ್​ ಪೆಟ್ರೋಲ್​ ದರ 103.08 ರೂಪಾಯಿಗೆ ಏರಿಕೆ ಆಗಿದೆ ಹಾಗೂ ಲೀಟರ್​ ಡೀಸೆಲ್​ ದರ 95.14 ರೂಪಾಯಿಗೆ ಹೆಚ್ಚಳವಾಗಿದೆ.

ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 98.14 ರೂಪಾಯಿಗೆ ಏರಿಕೆ ಆಗಿದೆ. ಲೀಟರ್​ ಡೀಸೆಲ್​ ದರ 92.31 ರೂಪಾಯಿಗೆ ಹೆಚ್ಚಳವಾಗಿದೆ. ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 96.84 ರೂಪಾಯಿ ಇದ್ದು, ಲೀಟರ್​ ಡೀಸೆಲ್​ ದರ 90.54 ರೂಪಾಯಿ ಇದೆ.

ರಾಜಸ್ಥಾನದ ಗಂಗಾನಗರ್​ನಲ್ಲಿ ಲೀಟರ್​ ಪೆಟ್ರೋಲ್​ ದರ 108.07 ರೂಪಾಯಿ ಆಗಿದ್ದು, ಲೀಟರ್​ ಡೀಸೆಲ್​ ದರ 100.82 ರೂಪಾಯಿಗೆ ಹೆಚ್ಚಳವಾಗಿದೆ. ಈ ಪುಟ್ಟ ನಗರದಲ್ಲಿ ಪೆಟ್ರೋಲ್​ ದರ ಮಾತ್ರವಲ್ಲದೇ ಲೀಟರ್​ ಡೀಸೆಲ್​ ದರವೂ ಕೂಡಾ 100ರ ಗಡಿ ದಾಟಿ ಮುನ್ನುಗ್ಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 8:52 am, Fri, 18 June 21