AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್ ಬಂಕ್​ಗಳಲ್ಲಿ ನಡೆಯುತ್ತಿದೆ ಅಳತೆ ಮೋಸ! ಅನುಮಾನ ಬಂದರೆ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಲು ಸಚಿವ ರಿಜ್ವಾನ್ ಅರ್ಷದ್ ಸಲಹೆ

ಕರ್ನಾಟಕದ ಪೆಟ್ರೋಲ್ ಬಂಕ್‌ಗಳಲ್ಲಿ ಅಳತೆ ವ್ಯತ್ಯಯದ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. 805 ಬಂಕ್‌ಗಳ ಪರಿಶೀಲನೆಯಲ್ಲಿ 768 ಕಡೆ ಅಳತೆ ವ್ಯತ್ಯಯ ಕಂಡುಬಂದಿದ್ದು, 101 ಬಂಕ್‌ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ.

ಪೆಟ್ರೋಲ್ ಬಂಕ್​ಗಳಲ್ಲಿ ನಡೆಯುತ್ತಿದೆ ಅಳತೆ ಮೋಸ! ಅನುಮಾನ ಬಂದರೆ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಲು ಸಚಿವ ರಿಜ್ವಾನ್ ಅರ್ಷದ್ ಸಲಹೆ
ಪೆಟ್ರೋಲ್ ಬಂಕ್‌ಗಳಲ್ಲಿ ಅಳತೆ ವ್ಯತ್ಯಯದ ಆರೋಪಗಳ ಹಿನ್ನೆಲೆ ಸಚಿವ ರಿಜ್ವಾನ್ ಅರ್ಷದ್ ಮಾಹಿತಿImage Credit source: TV9 Network
ಹರೀಶ್ ಜಿ.ಆರ್​.
| Edited By: |

Updated on: Sep 16, 2026 | 2:30 PM

Share

ಮುಖ್ಯಾಂಶಗಳು

  • 805 ಬಂಕ್‌ಗಳ ಪರಿಶೀಲನೆಯಲ್ಲಿ 768 ಕಡೆ ಅಳತೆ ವ್ಯತ್ಯಯ
  • 101 ಬಂಕ್‌ಗಳ ವಿರುದ್ಧ ಪ್ರಕರಣ ದಾಖಲು
  • ದೂರುಗಳಿಗೆ 18005991100 ಟೋಲ್‌ಫ್ರೀ ಸಂಖ್ಯೆ

ಬೆಂಗಳೂರು, ಸೆಪ್ಟೆಂಬರ್ 16: ಪೆಟ್ರೋಲ್, ಡೀಸೆಲ್‌ ಖರೀದಿಸುವ ಗ್ರಾಹಕರ ಹಕ್ಕುಗಳ ರಕ್ಷಣೆಗೆ ರಾಜ್ಯ ಸರ್ಕಾರ ಹಲವು ಕ್ರಮಗಳಿಗೆ ಮುಂದಾಗಿದೆ. ಪೆಟ್ರೋಲ್ ಬಂಕ್‌ಗಳ ಕ್ಯಾಲಿಬರೇಷನ್ ಹಾಗೂ ಪರಿಶೀಲನೆಯ ಅವಧಿಯನ್ನು ಸ್ಪಷ್ಟವಾಗಿ ನಮೂದಿಸಿ, ಅದನ್ನು ಡಿಸ್ಪ್ಲೇ ಮೂಲಕ ಸಾರ್ವಜನಿಕರ ಗಮನಕ್ಕೆ ತರುವಂತೆ ಸೂಚಿಸಲಾಗುವುದು ಎಂದು ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವರು, ರಾಜ್ಯದಲ್ಲಿ ಒಟ್ಟು 5,946 ಪೆಟ್ರೋಲ್ ಬಂಕ್‌ಗಳಿದ್ದು, ಕಳೆದ ಒಂದು ವಾರದಲ್ಲಿ ಇಲಾಖೆಯ ಅಧಿಕಾರಿಗಳು 805 ಬಂಕ್‌ಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ಪೈಕಿ 768 ಬಂಕ್‌ಗಳಲ್ಲಿ ಅಳತೆ ವ್ಯತ್ಯಯ ಕಂಡುಬಂದಿದ್ದು, 101 ಬಂಕ್‌ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

805 ಬಂಕ್‌ಗಳಲ್ಲಿದ್ದ ಒಟ್ಟು 3,071 ಪೆಟ್ರೋಲ್ ಗನ್‌ಗಳ ಪೈಕಿ 2,618 ಗನ್‌ಗಳಲ್ಲಿ ಶಾರ್ಟ್ ಅಳತೆ ಕಂಡುಬಂದಿದೆ ಎಂದು ಸಚಿವರು ಹೇಳಿದರು. ನಿಯಮಾನುಸಾರ ಶೇ 0.5ರಷ್ಟು ವ್ಯತ್ಯಾಸಕ್ಕೆ ಅವಕಾಶವಿದ್ದರೂ, ಕೆಲವು ಕಡೆ ಇದಕ್ಕಿಂತ ಹೆಚ್ಚಿನ ವ್ಯತ್ಯಾಸ ಕಂಡುಬಂದಿದೆ. ಮೂರು ಬಂಕ್‌ಗಳಲ್ಲಿ 10 ಮಿಲಿಲೀಟರ್‌ಗಿಂತಲೂ ಹೆಚ್ಚು ವ್ಯತ್ಯಾಸ ಕಂಡುಬಂದಿದೆ ಎಂದು ಅವರು ತಿಳಿಸಿದರು.

ಪೆಟ್ರೋಲ್ ಬಂಕ್‌ಗಳ ಮಾಲೀಕರು ಪ್ರತಿದಿನ ಪೆಟ್ರೋಲ್ ಗನ್‌ಗಳ ಅಳತೆಯನ್ನು ಪರಿಶೀಲಿಸಬೇಕು ಎಂದು ಸೂಚಿಸಲಾಗುವುದು. ಗ್ರಾಹಕರಿಗೆ ಅಳತೆಯ ಬಗ್ಗೆ ಅನುಮಾನ ಬಂದರೆ, ನಿಗದಿತ ಮಾಪಕಗಳ ಮೂಲಕ ಪರಿಶೀಲನೆ ನಡೆಸಲು ಅವಕಾಶ ಕಲ್ಪಿಸಲಾಗುವುದು. ಬಂಕ್‌ಗಳಲ್ಲಿ ಸೂಕ್ತ ಶುಚಿತ್ವ, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸುವಂತೆಯೂ ಸೂಚನೆ ನೀಡಲಾಗುವುದು ಎಂದು ಸಚಿವರು ಹೇಳಿದರು.

ಕೇಂದ್ರ ಸರ್ಕಾರದ ಕ್ಯಾಲಿಬರೇಷನ್‌ ಅಧಿಸೂಚನೆಗಳಿಗೆ ಆಕ್ಷೇಪ

ಕೇಂದ್ರ ಸರ್ಕಾರದ ಕ್ಯಾಲಿಬರೇಷನ್‌ಗೆ ಸಂಬಂಧಿಸಿದ ಎರಡು ಅಧಿಸೂಚನೆಗಳಿಗೆ ರಾಜ್ಯ ಸರ್ಕಾರದ ಆಕ್ಷೇಪವಿದೆ ಎಂದು ರಿಜ್ವಾನ್ ಅರ್ಷದ್ ತಿಳಿಸಿದರು. ಈ ಹಿಂದೆ ವರ್ಷಕ್ಕೊಮ್ಮೆ ಕ್ಯಾಲಿಬರೇಷನ್ ಮಾಡಿಸಬೇಕಿದ್ದ ನಿಯಮವನ್ನು ಎರಡು ವರ್ಷಕ್ಕೊಮ್ಮೆ ಮಾಡುವಂತೆ ಬದಲಾವಣೆ ಮಾಡಲಾಗಿದೆ. ಅಲ್ಲದೆ, ಪೆಟ್ರೋಲ್ ಗನ್‌ಗಳ ಕ್ಯಾಲಿಬರೇಷನ್‌ ಅನ್ನು ಖಾಸಗಿಯವರು ಮಾಡಬಹುದು ಎಂಬ ಮತ್ತೊಂದು ಅಧಿಸೂಚನೆಯೂ ಬಂದಿದೆ ಎಂದು ಸಚಿವರು ಹೇಳಿದರು.

ಖಾಸಗಿಯವರು ಕ್ಯಾಲಿಬರೇಷನ್ ಮಾಡಿದರೆ ವಿಶ್ವಾಸಾರ್ಹತೆ ಹೇಗೆ: ಅರ್ಷದ್ ಪ್ರಶ್ನೆ

ಖಾಸಗಿಯವರು ಕ್ಯಾಲಿಬರೇಷನ್ ಮಾಡಿದರೆ ಅದರ ವಿಶ್ವಾಸಾರ್ಹತೆ ಹೇಗೆ ಖಚಿತಪಡಿಸಿಕೊಳ್ಳಬೇಕು ಎಂಬ ಪ್ರಶ್ನೆ ಇದೆ. ಪೆಟ್ರೋಲ್ ಬಂಕ್ ಮಾಲೀಕರು ತಮಗೆ ಪರಿಚಯವಿರುವವರಿಂದ ಸರ್ಟಿಫಿಕೇಟ್ ಪಡೆದುಕೊಳ್ಳುವ ಸಾಧ್ಯತೆ ಇರುವುದರಿಂದ ಗ್ರಾಹಕರಿಗೆ ತೊಂದರೆಯಾಗಬಹುದು ಎಂದು ಸಚಿವರು ಆಕ್ಷೇಪ ವ್ಯಕ್ತಪಡಿಸಿದರು. ಈ ಎರಡು ಅಧಿಸೂಚನೆಗಳನ್ನು ರಾಜ್ಯ ಸರ್ಕಾರ ಒಪ್ಪುವುದಿಲ್ಲ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.

LIVE TV

ಪೆಟ್ರೋಲ್ ಬಂಕ್‌ಗಳಲ್ಲಿ ಅಳತೆ, ಗುಣಮಟ್ಟ, ಶುಚಿತ್ವ ಅಥವಾ ಇತರ ಯಾವುದೇ ಸಮಸ್ಯೆಗಳಿದ್ದರೆ ಸಾರ್ವಜನಿಕರು 18005991100 ಟೋಲ್‌ಫ್ರೀ ಸಂಖ್ಯೆಗೆ ದೂರು ನೀಡುವಂತೆ ಸಚಿವರು ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?