ಮಂಗಳೂರು: ಉಪ್ಪಿನಂಗಡಿ ಲಾಠಿ ಚಾರ್ಜ್ ಖಂಡಿಸಿ ಇಂದು ಪಿಎಫ್ಐ ಸಂಘಟನೆಯಿಂದ ಎಸ್ಪಿ ಕಚೇರಿ ಚಲೋ ಪ್ರತಿಭಟನೆ ನಡೆಯಿತು. ಮಂಗಳೂರಿನ ಕ್ಲಾಕ್ಟವರ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ರಸ್ತೆ ಬಂದ್ ಮಾಡಿ ಬ್ಯಾರಿಕೇಡ್ ಅಳವಡಿಸಿದ್ದರು. ಹೀಗಾಗಿ ವಾಹನ ಸವಾರರು ಪರದಾಡುವಂತಾಯಿತು. ಇದರಿಂದ ಪೊಲೀಸರು ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದ್ದರು. ಎಸ್ಪಿ ಕಚೇರಿಗೆ ತೆರಳುವ ರಸ್ತೆಯಲ್ಲೂ ಬ್ಯಾರಿಕೇಡ್ಗಳ ಅಳವಡಿಸಿ ಮಂಗಳೂರು ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ತೆ ಮಾಡಲಾಗಿದೆ.
ಇದೇ ವೇಳೆ ಬ್ಯಾರಿಕೇಟ್ ತೆಗೆಯಬೇಕು ಪ್ರತಿಭಟನೆಗೆ ಅವಕಾಶ ಕೊಡಬೇಕು ಎಂದು ಪ್ರತಿಭಟನೆಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದದ್ದು ಬ್ಯಾರಿಕೇಡ್ ಬಳಿ ಪ್ರತಿಭಟನಕಾರರನ್ನು ಪೊಲೀಸರು ತಡೆದಿದ್ದಾರೆ. ಪಿಎಫ್ ಐ ಕಾರ್ಯಕರ್ತರ ಅಕ್ರಮ ಬಂಧನ ಖಂಡಿಸಿ ಠಾಣೆಯ ಎದುರು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು ಎನ್ನಲಾಗಿತ್ತು. ಈ ಹಿನ್ನಲೆಯಲ್ಲಿ ಪುತ್ತೂರು ಉಪವಿಭಾಗದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿತ್ತು. ಇದೀಗ ಘಟನೆಯನ್ನು ಖಂಡಿಸಿ ಪಿಎಫ್ಯ ಕಾರ್ಯಕರ್ತರು ಎಸ್ಪಿ ಕಚೇರಿ ಚಲೋ ಪ್ರತಿಭಟನೆ ನಡೆಸಿದ್ದಾರೆ.
ಇದನ್ನೂ ಓದಿ:
ಉಪ್ಪಿನಂಗಡಿ: ಪೊಲೀಸರ ಲಾಠಿ ಚಾರ್ಜ್ ಖಂಡಿಸಿ ಎಸ್ಪಿ ಕಚೇರಿ ಚಲೋ; ಪುತ್ತೂರು ಉಪವಿಭಾಗದಲ್ಲಿ ಸೆಕ್ಷನ್ 144 ಜಾರಿ