PFI Ban: ನಾಸೀರ್ ಪಾಷಾ ಸಲ್ಲಿಸಿದ್ದ ರಿಟ್ ಅರ್ಜಿ ವಜಾ, ಪಿಎಫ್ಐ ನಿಷೇಧವನ್ನು ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್

| Updated By: ರಮೇಶ್ ಬಿ. ಜವಳಗೇರಾ

Updated on: Nov 30, 2022 | 3:39 PM

ನಾಸಿರ್ ಪಾಷಾ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದು, ಪಿಎಫ್ಐ ನಿಷೇಧವನ್ನು ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್

PFI Ban: ನಾಸೀರ್ ಪಾಷಾ ಸಲ್ಲಿಸಿದ್ದ ರಿಟ್ ಅರ್ಜಿ ವಜಾ, ಪಿಎಫ್ಐ ನಿಷೇಧವನ್ನು ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Follow us on

ಬೆಂಗಳೂರು: ಕೇಂದ್ರ ಸರ್ಕಾರ (Central Government) ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದ್ದನ್ನು (PFI Ban) ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ವಜಾಗೊಳಿಸಿದೆ. ಈ ಮೂಲಕ ಕೇಂದ್ರ ಸರ್ಕಾರದ ಪಿಎಫ್ಐ ನಿಷೇಧ ಆದೇಶವನ್ನು ಎತ್ತಿಹಿಡಿದಿದೆ.

ಪಿಎಫ್​ಐ ಬ್ಯಾನ್ ಪ್ರಶ್ನಿಸಿ ನಾಸೀರ್ ಅಲಿ ಎನ್ನುವವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು (ನ. 28) ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್ , ತೀರ್ಪನ್ನು ನವೆಂಬರ್ 30ಕ್ಕೆ ಕಾಯ್ದಿರಿಸಿತ್ತು. ಇದೀಗ ಕರ್ನಾಟಕ ಹೈಕೋರ್ಟ್​ ಏಕಸದಸ್ಯ ಪೀಠ ತೀರ್ಪು ಪ್ರಕಟಿಸಿದ್ದು, ನಾಸೀರ್ ಅಲಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. ಇದರೊಂದಿಗೆ ಕೇಂದ್ರ ಸರ್ಕಾರ ಆದೇಶವನ್ನು ಎತ್ತಿಹಿಡಿದಿದೆ.

ಇದನ್ನೂ ಓದಿ: ಟರ್ಕಿ ದೇಶದ ಜೊತೆ ಸಂಪರ್ಕ ಹೊಂದಿದ್ದ ಪಿಎಫ್ಐಗೆ ಹರಿದುಬಂದ ಹಣದ ಹೊಳೆ

ಗಣ್ಯ ವ್ಯಕ್ತಿಗಳ ಹತ್ಯೆಗೆ ಸಂಚು, ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಪಿತೂರಿ, ಉಗ್ರ ಸಂಘಟನೆಗಳ ಜೊತೆ ನಿಕಟ ಸಂಪರ್ಕ ಹೊಂದಿದ ಆರೋಪದಡಿ ಕೇಂದ್ರ ಗೃಹ ಇಲಾಖೆ ಪಿಎಫ್​ ಸಂಘಟನೆಯನ್ನು ಐದು ವರ್ಷಗಳ ಕಾಲ ನಿಷೇಧ ಮಾಡಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ನಾಸಿರ್ ಪಾಷಾ ಎನ್ನುವವರು ಹೈಕೋರ್ಟ್​ಗೆ ರಿಟ್​ ಅರ್ಜಿ ಅಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್​, ಇಂದಿಗೆ (ನವೆಂಬರ್ 30) ತೀರ್ಪು ಕಾಯ್ದಿರಿಸಿತ್ತು.

ವಾದ-ಪ್ರತಿವಾದ

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಜಯಕುಮಾರ್ ಎಸ್.ಪಾಟೀಲ್ ಪಿಎಫ್ಐ (PFI) ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ. ಆದರೆ ಪಿಎಫ್ಐ ಕಾನೂನು ಬಾಹಿರ ಸಂಘಟನೆ ಎನ್ನುವುದಕ್ಕೆ ಕೇಂದ್ರ ಸರ್ಕಾರ ಸೂಕ್ತ ಕಾರಣ ನೀಡಿಲ್ಲ. ತಕ್ಷಣದ ಬ್ಯಾನ್​ಗೆ ಪ್ರತ್ಯೇಕ ಕಾರಣ ನೀಡಬೇಕಿತ್ತು. ವಾದಮಂಡನೆಗೆ ಕಾಲಾವಕಾಶ ನೀಡದೇ ಬ್ಯಾನ್ ಮಾಡಲಾಗಿದೆ. ಯುಎಪಿಎ ಕಾಯ್ದೆಗೆ ವಿರುದ್ಧವಾಗಿ ಆದೇಶ ಹೊರಡಿಸಲಾಗಿದೆ ಎಂದು ವಾದ ಮಂಡಿಸಿದ್ದರು.

ಹಾಗೇ ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪಿಎಫ್ಐ ಸಂಘಟನೆಯಿಂದ ದೇಶ ವಿರೋಧಿ ಚಟುವಟಿಕೆ ನಡೆಯುತ್ತಿದೆ. ದೇಶದಲ್ಲಿ ಹಿಂಸಾತ್ಮಕ ಕೃತ್ಯಗಳನ್ನು ಎಸಗುತ್ತಿದ್ದಾರೆ. ಸಂಘಟನೆಯ ಸದಸ್ಯರಿಂದ ಭೀತಿಯ ವಾತಾವರಣ ಸೃಷ್ಟಿಯಾಗಿದೆ. ಹೀಗಾಗಿ ಸಕಾರಣದಿಂದಲೇ ಪಿಎಫ್ಐ ಸಂಘಟನೆ ನಿರ್ಬಂಧಿಸಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:25 pm, Wed, 30 November 22