AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು-ಜೇನಿನ ಸಂಬಂಧ ಎಂದ ಸಿಎಂ: ಕುಚಿಕು ಗೆಳೆಯನಿಗಾಗಿ ತ್ಯಾಗ ಪ್ರದರ್ಶಿಸಿ ಎಂದು ಕುಮಾರಣ್ಣ ಕೌಂಟರ್

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಫೋನ್ ಟ್ಯಾಪಿಂಗ್ ಕದನ ಶುರುವಾಗಿದೆ. ನಿನ್ನೆಯಷ್ಟೇ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂತಹದೊಂದು ಬಾಂಬ್ ಸಿಡಿಸಿದ್ದರು. ಈ ಆರೋಪಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಹಲವು ನಾಯಕರು ತಿರುಗೇಟು ಕೊಟ್ಟಿದ್ದಾರೆ. ಇದೀಗ ಮತ್ತೆ ಕುಮಾರಸ್ವಾಮಿ ಅವರು ಪ್ರತಿಕ್ರಿಯಸಿ,ಕುಂಬಳಕಾಯಿ ಕಳ್ಳ ಅಂದ್ರೆ ನಾನೆ ನಾನೆ ಅಂತ ಹೆಗಲು ಮುಟ್ಟಿಕೊಂಡ್ರೆ ಏನು ಮಾಡ್ಲಿ ಎಂದು ಸಿಎಂಗೆ ಕೌಂಟರ್ ಕೊಟ್ಟಿದ್ದಾರೆ.

ಹಾಲು-ಜೇನಿನ ಸಂಬಂಧ ಎಂದ ಸಿಎಂ: ಕುಚಿಕು ಗೆಳೆಯನಿಗಾಗಿ ತ್ಯಾಗ ಪ್ರದರ್ಶಿಸಿ ಎಂದು ಕುಮಾರಣ್ಣ ಕೌಂಟರ್
Siddaramaiah And Hd Kumaraswamy
ರಮೇಶ್ ಬಿ. ಜವಳಗೇರಾ
|

Updated on:Mar 03, 2026 | 10:24 PM

Share

ಬೆಂಗಳೂರು, ಮಾರ್ಚ್ 03): ವಿಪಕ್ಷಗಳಾದ ಜೆಡಿಎಸ್ ಹಾಗೂ ಬಿಜೆಪಿ  (JDS And BJP) ಸೇರಿಕೊಂಡು ಅಧಿಕಾರ ಹಂಚಿಕೆ ಬಿಕ್ಕಟ್ಟು ಕಾಂಗ್ರೆಸ್​ನೊಳಗಿನ ಕಿಚ್ಚಿಗೆ ಫೋನ್ ಕದ್ದಾಲಿಕೆ (Phone Tapping) ಎನ್ನುವ ತುಪ್ಪ ಸುರಿದಿದ್ದು, ಇದು ತೀವ್ರ ಸ್ವರೂಪ ಪಡೆದುಕೊಂಡಿದೆ. ಡಿಸಿಎಂ ಡಿಕೆ ಬಣದ ಮೇಲೆ ನಿಗಾ ಇಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಆ್ಯಂಡ್ ಟೀಮ್​ನ ಮೇಲೆ ಕುಮಾರಸ್ವಾಮಿ (HD Kumaraswamy) ಪರೋಕ್ಷವಾಗಿ ಆರೋಪ ಮಾಡಿದ್ದು, ಇದಕ್ಕೆ ಸಿದ್ದರಾಮಯ್ಯ ಸಹ ವಿಪಕ್ಷಗಳಿಗೆ ತಿರುಗೇಟು ನೀಡಿದ್ದರು. ಇದೀಗ ಸಿದ್ದರಾಮಯ್ಯ ಹೊರಡಿಸಿದ ಪತ್ರಿಕಾ ಪ್ರಕಟಣೆಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಸಿದ್ದರಾಮಯ್ಯನವರೇ ಈ ನಡುವೆ ನೀವು ಬಹಳ ಪುರುಸೊತ್ತಾಗಿದ್ದೀರಿ ಎಂದು ಭಾವಿಸಿದ್ದೇನೆ. ಕೆಲಸ ಮಾಡುವುದು ಬಿಟ್ಟು ಕೌಂಟರ್ ಕೊಡುವುದರಲ್ಲಿ ಹೆಚ್ಚು ಬ್ಯುಸಿಯಾಗಿದ್ದೀರಿ. ಕುಂಬಳಕಾಯಿ ಕಳ್ಳ ಎಂದರೆ ನಾನೇ ನಾನೇ ಎಂದು ಹೆಗಲು ಮುಟ್ಟಿ ನೋಡಿಕೊಂಡರೆ ನಾನೇನು ಮಾಡಲಿ ಎಂದು ಟಾಂಗ್ ಕೊಟ್ಟಿದ್ದಾರೆ.

ಮತ್ತೊಬ್ಬರನ್ನು ಆಡಿಕೊಳ್ಳುವುದರಲ್ಲೇ ಹೆಚ್ಚು ಆಸಕ್ತಿ

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಸಿದ್ದರಾಮಯ್ಯನವರೇ, ಈ ನಡುವೆ ನೀವು ಬಹಳ ಪುರುಸೊತ್ತಾಗಿದ್ದೀರಿ ಎಂದು ಭಾವಿಸಿದ್ದೇನೆ. ಕೆಲಸ ಮಾಡುವುದು ಬಿಟ್ಟು ಕೌಂಟರ್ ಕೊಡುವುದರಲ್ಲಿ ಹೆಚ್ಚು ಬ್ಯುಸಿಯಾಗಿದ್ದೀರಿ. ಕುಂಬಳಕಾಯಿ ಕಳ್ಳ ಎಂದರೆ ನಾನೇ.. ನಾನೇ.. ಹೆಗಲು ಮುಟ್ಟಿ ನೋಡಿಕೊಂಡರೆ ನಾನೇನು ಮಾಡಲಿ. ಫೋನ್ ಕದ್ದಾಲಿಕೆ ಬಗ್ಗೆ ಮಾಧ್ಯಮಗಳೇ ಮಾತನಾಡುತ್ತಿವೆ. ಆ ಬಗ್ಗೆ ನಾನು ಪ್ರತಿಕ್ರಿಯಿಸಿದ್ದೇನೆ ಅಷ್ಟೇ. ನಿಮ್ಮ ಪುಂಖಾನುಪುಂಖ ಪುರಾಣ ನೋಡಿದರೆ ನಿಮಗೆ ಆಡಳಿತಕ್ಕಿಂತ ಮತ್ತೊಬ್ಬರನ್ನು ಆಡಿಕೊಳ್ಳುವುದರಲ್ಲೇ ಹೆಚ್ಚು ಮುತುವರ್ಜಿ, ಆಸಕ್ತಿ ಇದ್ದಂತಿದೆ. ಪ್ರತಿಪಕ್ಷಗಳು ತಮ್ಮ ಕೆಲಸ ತಾವು ಮಾಡುತ್ತಿವೆ. ಜನರು ದಯೆ ತೋರಿ ನಿಮಗೆ 140 ಸೀಟು ಕೊಟ್ಟರೆ ಆಡಳಿತ ನಡೆಸುವುದು ಬಿಟ್ಟು ಅಡ್ನಾಡಿಗಳಂತೆ ಹಾದಿಬೀದಿಯಲ್ಲಿ ಕಚ್ಚಾಡುತ್ತಿದ್ದೀರಿ. ನಿಮ್ಮ ಪಕ್ಷದಲ್ಲಿನ ಕುರ್ಚಿ ಕಾಳಗದ ಮುಂದುವರಿದ ಭಾಗವೇ ಫೋನ್ ಕದ್ದಾಲಿಕೆ ಎನ್ನುವ ಅನುಮಾನ ಪ್ರತಿಪಕ್ಷಗಳದ್ದು ಮತ್ತು ಮಾಧ್ಯಮಗಳದ್ದು. ಪ್ರಶ್ನಿಸುವ ಜಾಗದಲ್ಲಿ ಪ್ರತಿಪಕ್ಷಗಳಿವೆ, ಉತ್ತರಿಸಿ. ವಿಷಯಾಂತರ ಬಿಟ್ಟು ಸತ್ಯ ಹೇಳಿ. ಸತ್ಯ ನಿಮ್ಮನೆ ದೇವರು ಅಲ್ಲವೇ? ಸತ್ಯಮೇವ ಜಯತೇ ನಿಮ್ಮ ಸಿದ್ದಸ್ಲೋಗನ್! ಕಥೆ ಕಟ್ಟಿ ಕಾಲಹರಣ ಮಾಡುತ್ತಿರೇಕೆ? ನಾನು ಎರಡು ಸಣ್ಣ ಅವಧಿಗೆ ಮುಖ್ಯಮಂತ್ರಿ ಆಗಿದ್ದೆ.ಸ್ವತಂತ್ರ ಸರಕಾರವೂ ನನ್ನದಲ್ಲ. ಕದ್ದಾಲಿಸುವ ಕರ್ಮ ನನಗೇಕೆ? ನಿಮ್ಮಂತೆ ಸಿದ್ದವನದಲ್ಲಿ ಕೂತು ಮನೆಹಾಳು ಮಾಡೋದಕ್ಕೆ ಶಾಸಕರಿಗೆ ಬ್ರೈನ್ ವಾಶ್ ಮಾಡುವ ಹೀನ ಜಾಯಮಾನ ನನ್ನದಲ್ಲ. ನಿಮ್ಮ ಮೊದಲ ಐದು ವರ್ಷದ ಸರಕಾರವೂ.. ಈಗಿನ ನಿಮ್ಮ ಗುಪ್ತಚರವೂ ರಾಜಕಾರಣವನ್ನು ನಾನು ಕಂಡಿರುವುದೇ ಅಲ್ಲವೇ? ಎಂದು ತಿವಿದಿದ್ದಾರೆ.

ಇದನ್ನೂ ಓದಿ: ರಾಜ್ಯ ರಾಜಕಾರಣದಲ್ಲಿ ಫೋನ್​​ ಟ್ಯಾಪಿಂಗ್​​ ಬಿರುಗಾಳಿ: ವಿಪಕ್ಷಗಳ ಮೇಲೆ ಮುಗಿಬಿದ್ದ ಕಾಂಗ್ರೆಸ್​​

ಗುರುವಿಗೆ ಗುನ್ನ ಇಟ್ಟಿರಿ

ನನ್ನ ಜತೆ ನೇರ ಸಂಘರ್ಷಕ್ಕೆ ಬಂದಾಗಲೆಲ್ಲ ನೀವು ದೇವೇಗೌಡರನ್ನು ಎಳೆದು ತರುತ್ತೀರಿ. ದೇವೇಗೌಡರು ನಿಮ್ಮ ರಾಜಕೀಯ ಗುರು, ನಿಮ್ಮನ್ನು ಗುರುತಿಸಿ ಬೆಳೆಸಿದವರು. ಅದಕ್ಕಾಗಿ ಎಷ್ಟೋ ನಾಯಕರ ವಿರೋಧ ಕಟ್ಟಿಕೊಂಡರು. ಅದೂ ನಿಮಗೂ ಗೊತ್ತಿದೆ. ಆದರೆ, ಸಮಯಕ್ಕೆ ಕಾಯುತ್ತಿದ್ದ ನೀವು ಗುರುವಿಗೆ ಗುನ್ನ ಇಟ್ಟಿರಿ. ಅಷ್ಟರ ಮಟ್ಟಿಗೆ ನಿಮ್ಮ ಕಪಟತನ, ಕುಟಿಲತೆಯನ್ನು ಸ್ವಯಂ ಸ್ಮರಣೆ ಮಾಡುತ್ತಿದ್ದೀರಿ, ಸಂತೋಷ. ದೆಹಲಿಯಲ್ಲಿ ದೇವೇಗೌಡರು ಅಧಿಕಾರ ಕಳೆದುಕೊಂಡಾಗ ನೀವು ಯಾವ ಪಕ್ಷದಲ್ಲಿದ್ದಿರಿ ಎನ್ನುವುದನ್ನು ಅರೆಕ್ಷಣ ನೆನಪು ಮಾಡಿಕೊಳ್ಳಿ. ನಿಮಗೂ ಆತ್ಮಸಾಕ್ಷಿ ಎನ್ನುವುದು ಇರಬೇಕಲ್ಲಾ? ಆಗ ನಿಮ್ಮ ನಾಲಿಗೆಯಿಂದ ಉದುರಿದ್ದ ಸರಣಿ ನುಡಿಮುತ್ತುಗಳನ್ನು ಒಮ್ಮೆ ಪುನಾಸ್ಮರಣೆ ಮಾಡಿಕೊಳ್ಳಿ? ಅವತ್ತು ಅದೇ ಸೀತಾರಾಂ ಕೇಸರಿ ಬಗ್ಗೆ ತಾವು ಏನೇನು ಹೇಳಿದಿರಿ? ಆ ನಂತರದ ಕಾಲದಲ್ಲಿ ಶ್ರೀಮತಿ ಸೋನಿಯಾ ಗಾಂಧಿ ಅವರನ್ನು ಅದೆಷ್ಟು ವಾಚಾಮಗೋಚರ ನಿಂದಿಸಿದ್ದಿರಿ ಎಂಬುದನ್ನು ಜ್ಞಾಪಕ ಮಾಡಿಕೊಳ್ಳಿ ಅಂದಿನ ಘಟನೆಯನ್ನು ನೆನಪಿಸಿ ತಿರುಗೇಟು ನೀಡಿದ್ದಾರೆ.

ವಿರೋಚಿತ ತ್ಯಾಗವನ್ನು ಒಮ್ಮೆ ಪ್ರದರ್ಶಿಸಿ

ದೇವೇಗೌಡರು ಅಧಿಕಾರವನ್ನು ವಿರೋಚಿತವಾಗಿ ತ್ಯಜಿಸಿದರು. ರಾಜೀನಾಮೆ ಘೋಷಿಸಿದ ಮರುಕ್ಷಣದಲ್ಲೇ ಸಂಸತ್ತಿನಲ್ಲಿಯೇ ವಾಜಪೇಯಿ ಅವರು ಮುಕ್ತ ಬೆಂಬಲ ಕೊಡುತ್ತೇವೆ ಎಂದರೂ ಆ ಅಧಿಕಾರ ಬೇಡವೆಂದು ವಿನಯದಿಂದ ಧಿಕ್ಕರಿಸಿದರು. ಅವರ ಗರಡಿಯಲ್ಲಿ ಪಳಗಿ, ಈಗಲೂ ಬೆಳಗುತ್ತಿರುವ ನೀವೂ ಅಂಥ ಕೆಚ್ಚನ್ನು, ವಿರೋಚಿತ ತ್ಯಾಗವನ್ನು ಒಮ್ಮೆ ಪ್ರದರ್ಶಿಸಿ. ನಿಮ್ಮ ಕುಚುಕು ಗೆಳೆಯನ ಮೇಲೆ ಪ್ರೀತಿ ತೋರಿಸಿ. ಗುಂಡಿಗೆ ಸಾಲುತ್ತಿಲ್ಲವೇ ಮಿಸ್ಟರ್ ಸಿದ್ದರಾಮಯ್ಯನವರೇ, ಸೋತರೆ ಸೋಲಬೇಕು ಬಾಹುಬಲಿಯಂತೆ! ನಾನು ಸೋತಿದ್ದೇನೆ, ಓಡಿ ಹೋಗಿಲ್ಲ. ನಾನು ರಣಹೇಡಿಯಂತೆ ಪಲಾಯನ ಮಾಡುವುದಿಲ್ಲ, ನೆನಪಿರಲಿ ಎಂದು ಖಾರವಾಗಿ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:09 pm, Tue, 3 March 26

Follow Us
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್