AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ಅತ್ಯಾಚಾರ ಕೇಸಿಗೆ ಹೊಸ ತಿರುವು ಕೊಟ್ಟ ವಕೀಲ: ಕೋರ್ಟಿನಲ್ಲಿ ವಾದ ಪ್ರತಿವಾದ ಹೇಗಿತ್ತು?

ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ (Life imprisonment) ವಿಧಿಸಲಾಗಿದೆ. ಇದನ್ನು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಕರ್ನಾಟಕ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿದ್ದು, ಪ್ರಜ್ವಲ್​ ಪರ ವಕೀಲರು ತಮ್ಮ ಪ್ರಬಲ ವಾದದ ಮೂಲಕ ಕೋರ್ಟ್​​ನ ಗಮನಸೆಳೆದಿದ್ದಾರೆ. ಹಾಗಾದ್ರೆ ಪ್ರಜ್ವಲ್ ರೇವಣ್ಣ ಪರ ವಕೀಲರ ವಾದ ಹೇಗಿತ್ತು? ಎನ್ನುವ ವಿವರ ಇಲ್ಲಿದೆ.

ಪ್ರಜ್ವಲ್ ಅತ್ಯಾಚಾರ ಕೇಸಿಗೆ ಹೊಸ ತಿರುವು ಕೊಟ್ಟ ವಕೀಲ: ಕೋರ್ಟಿನಲ್ಲಿ ವಾದ ಪ್ರತಿವಾದ ಹೇಗಿತ್ತು?
Prajwal Revanna
Ramesha M
| Updated By: ರಮೇಶ್ ಬಿ. ಜವಳಗೇರಾ|

Updated on:Dec 01, 2025 | 5:07 PM

Share

ಬೆಂಗಳೂರು, (ಡಿಸೆಂಬರ್ 01): ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಜೀವತಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ಆದ್ರೆ, ಇದೀಗ ಈ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಹೈಕೋರ್ಟ್​​ಗೆ (Karnataka High Court) ಅರ್ಜಿ ಸಲ್ಲಿಸಿದ್ದು, ಇಂದು (ಡಿಸೆಂಬರ್ 01) ನ್ಯಾಯಮೂರ್ತಿಗಳಾದ ಕೆ.ಎಸ್‌ ಮುದಗಲ್‌ ಮತ್ತು ಟಿ ವೆಂಕಟೇಶ್‌ ನಾಯಕ್‌ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲ ಸಿದ್ಧಾರ್ಥ್‌ ಲೂಥ್ರಾ ಪ್ರಬಲ ವಾದ ಮಂಡಿಸಿದ್ದು, ಸಂತ್ರಸ್ತೆಯ ಮೌನ, ಸಾಕ್ಷ್ಯಗಳ ಮೇಲಿನ ಸಂಶಯಗಳನ್ನು ಮುಂದಿಟ್ಟು ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡುವಂತೆ ಮನವಿ ಮಾಡಿದರು.

ಪ್ರಜ್ವಲ್‌ ಪರ ವಕೀಲರ ವಾದ ಹೇಗಿತ್ತು?

ಪ್ರಜ್ವಲ್ ರೇವಣ್ಣ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್‌ ಲೂಥ್ರಾ ಪ್ರಬಲ ವಾದ ಮಂಡಿಸಿದ್ದು, ಪ್ರಜ್ವಲ್‌ 2024 ಏಪ್ರಿಲ್‌ 24ರಂದು ದೇಶ ತೊರೆಯುವಾಗ ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ಆ್ಯಪಲ್ ಮೊಬೈಲ್ ವಶಕ್ಕೆ ನೀಡಿಲ್ಲವೆಂದು ಪ್ರಾಸಿಕ್ಯೂಷನ್ ಆರೋಪಿಸಿದೆ. ಆ್ಯಪಲ್ ಮೊಬೈಲ್ ನೀಡುವಂತೆ ಸೆ.91ರ ಅಡಿ ನೋಟಿಸ್ ನೀಡಿಲ್ಲ. ಐಎಂಇಐ ನಂಬರ್ ಆಧರಿಸಿ ಮೊಬೈಲ್ ಕಂಪನಿಯಿಂದ ಮಾಹಿತಿ ಪಡೆಯಲು ಯತ್ನಿಸಿಲ್ಲ. ಸಂತ್ರಸ್ತೆ ದೂರು ದಾಖಲಿಸದೇ 3 ವರ್ಷ ಮೌನವಾಗಿ ಇದ್ದಿದ್ದೇಕೆ? ಒಮ್ಮೆಗೇ ನಾಲ್ಕು ಪ್ರತ್ಯೇಕ ಕ್ರಿಮಿನಲ್ ಕೇಸ್​ಗಳು ಹೇಗೆ ದಾಖಲಾದವು? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಜೀವಿತಾವಧಿ ಶಿಕ್ಷೆ ತೀರ್ಪು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಪ್ರಜ್ವಲ್, ಸರ್ಕಾರಕ್ಕೆ ಕೋರ್ಟ್ ಮಹತ್ವದ ಸೂಚನೆ

ಎಫ್‌ಎಸ್‌ಎಲ್ ಸಾಕ್ಷಿ ಬಗ್ಗೆ ಸಂಶಯ

ಇನ್ನು ಇದೇ ವೇಳೆ ಎಫ್‌ಎಸ್‌ಎಲ್ ಸಾಕ್ಷಿ ಬಗ್ಗೆ ಸಂಶಯ ವ್ಯಕ್ತಪಡಿಸಿದ ವಕೀಲ ಸಿದ್ಧಾರ್ಥ್‌ ಲೂಥ್ರಾ , ರಾಜಕೀಯ ದುರುದ್ದೇಶದಿಂದ ಈ ಪ್ರಕರಣಗಳನ್ನು ದಾಖಲಿಸಲಾಗಿದೆ. ಸಂತ್ರಸ್ತೆಯನ್ನು ಇಲ್ಲಿನ ಸರ್ಕಾರ ಬಳಸಿ ಕೇಸ್ ದಾಖಲಿಸಿದೆ. 2019, 2021ರಲ್ಲಿ ಅತ್ಯಾಚಾರಕ್ಕೆ ಒಳಗಾದರೂ 2023ರಲ್ಲಿ ಸಂತ್ರಸ್ತೆ ಬಂದಿದ್ದೇಕೆ? ಫಾರ್ಮ್​ಹೌಸ್​ಗೆ ಬಂದರೂ ಆಕೆಯ ಬಟ್ಟೆಗಳನ್ನು ಹಿಂಪಡೆಯಲಿಲ್ಲವೇಕೆ? ಪೊಲೀಸರು ಬಟ್ಟೆಯನ್ನು ವಶಕ್ಕೆ ಪಡೆದಿರುವುದೇ ಸಂಶಯಾಸ್ಪದವಾಗಿದೆ. ಡಿಎನ್‌ಎ ಪರೀಕ್ಷೆ ಮಾಡಿದ ವ್ಯಕ್ತಿಯೇ ಮೃತಪಟ್ಟಿದ್ದಾರೆ. ಹೀಗಾಗಿ FSL ಸಾಕ್ಷಿ ಒಪ್ಪತಕ್ಕದ್ದಲ್ಲವೆಂದು ಪ್ರಬಲ ವಾದ ಮಂಡಿಸಿದರು.

ಹೀಗೆ ಪ್ರಶ್ನೆಗಳ ಮೇಲೆ ಪ್ರಶ್ನೆ ಹಾಕಿದ ಪ್ರಜ್ವಲ್ ಪರ ವಕೀಲರ ವಾದ ಆಲಿಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ನಾಡಿದ್ದು ಅಂದರೆ ಬುಧವಾರಕ್ಕೆ ಮುಂದೂಡಿದ್ದು, ಅಂದು ಹೇಗೆಲ್ಲಾ ವಾದ ಪ್ರತಿವಾದ ನಡೆಯುತ್ತೆ? ಇದಕ್ಕೆ ಕೋರ್ಟ್​​ ಏನು ಹೇಳುತ್ತೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:58 pm, Mon, 1 December 25

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್