ಶವದ ಮೇಲಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ: ಕರ್ನಾಟಕ ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ

ಯುವತಿ ಮೃತ ದೇಹದೊಂದಿಗೆ ಲೈಂಗಿಕ ಕ್ರಿಯೆ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್​ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. ಮೃತದೇಹದೊಂದಿಗಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ. ಅಗತ್ಯವಿದ್ದರೆ ಸಂಸತ್ ಕಾನೂನು ರೂಪಿಸಬಹುದು ಎಂದು ಸುಪ್ರೀಂಕೋರ್ಟ್​ ಸ್ಪಷ್ಟಪಡಿಸಿ ಕರ್ನಾಟಕ ಹೈಕೋರ್ಟ್​ನ ಆದೇಶವನ್ನು ಎತ್ತಿಹಿಡಿದೆ. ಏನಿದು ಪ್ರಕರಣ?

ಶವದ ಮೇಲಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ: ಕರ್ನಾಟಕ ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ
ಸುಪ್ರೀಂ ಕೋರ್ಟ್-ಕರ್ನಾಟಕ ಹೈಕೋರ್ಟ್​
Edited By:

Updated on: Feb 04, 2025 | 11:09 PM

ನವದೆಹಲಿ/ಬೆಂಗಳೂರು, (ಫೆಬ್ರವರಿ.04): ಶವದ ಮೇಲಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು ಕರ್ನಾಟಕ ಹೈಕೋರ್ಟ್​ ನೀಡಿದ್ದ ಆದೇಶವನ್ನು ಇದೀಗ ಸುಪ್ರೀಂಕೋರ್ಟ್ ಸಹ ಎತ್ತಿಹಿದಿದೆ. ಶವದ ಮೇಲಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ. ಅತ್ಯಾಚಾರ ಎಂದು ಪರಿಗಣಿಸಲು ಸಾಧ್ಯವಿಲ್ಲವೆಂದ ಸುಪ್ರೀಂಕೋರ್ಟ್ ಇಂದು (ಫೆಬ್ರವರಿ 04) ರಾಜ್ಯ ಸರ್ಕಾರದ ಅರ್ಜಿಯನ್ನು ವಜಾಗೊಳಿಸಿದೆ. 21 ವರ್ಷದ ಯುವತಿಯನ್ನು ಕೊಲೆ ಮಾಡಿ ಬಳಿಕ ಆರೋಪಿಗಳು ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದರು. ಈ ಸಂಬಂಧ ಪೊಲೀಸರು ಕೊಲೆ ಜತೆ ಅತ್ಯಾಚಾರ ಕೇಸ್ ದಾಖಲಿಸಿದ್ದರು. ಆದ್ರೆ, ಹೈಕೋರ್ಟ್​, ಶವದ ಮೇಲಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಇಂದು ಸುಪ್ರೀಂಕೋರ್ಟ್ ವಜಾ ಮಾಡಿದೆ. ಈ ಮೂಲಕ ಕರ್ನಾಟಕ ಹೈಕೋರ್ಟ್​ನ ಆದೇಶವನ್ನು ಎತ್ತಿಹಿಡಿದಿದೆ.

ಈ ಸಂಬಂಧ ಕಾನೂನು ರೂಪಿಸಲು ಸಂಸತ್ ಗೆ ಅವಕಾಶವಿದೆ. ಅಗತ್ಯವಿದ್ದರೆ ಸಂಸತ್ ಕಾನೂನು ರೂಪಿಸಬಹುದು ಎಂದು ಸುಪ್ರೀಂಕೋರ್ಟ್ ನ್ಯಾyಮೂರ್ತಿ ಸುಧಾಂಶು ಧುಲಿಯಾ ಪೀಠ ಅಭಿಪ್ರಾಯಪಟ್ಟಿದೆ.

ಪ್ರಕರಣದಲ್ಲಿ 21ವರ್ಷದ ಯುವತಿಯನ್ನು ಕೊಲೆ ಮಾಡಲಾಗಿತ್ತು. ಬಳಿಕ ಆರೋಪಿಗಳು, ಮೃತದೇಹದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು, ಆರೋಪಿಗಳ ವಿರುದ್ಧ ಕೊಲೆ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್​, ಮೃತದೇಹದ ಮೇಲಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು 2023ರಲ್ಲಿ ತೀರ್ಪು ನೀಡಿತ್ತು. ಆದ್ರೆ, ಹೈಕೋರ್ಟ್​ನ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಇಂದು (ಫೆಬ್ರವರಿ 04) ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸುಧಾಂಶು ಧುಲಿಯಾ ಪೀಠ, ಕರ್ನಾಟಕ ಹೈಕೋರ್ಟ್​ನ ಆದೇಶವನ್ನು ಎತ್ತಿ ಹಿಡಿದಿದ್ದು, ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ.