ಬೆಂಗಳೂರು: BIAAPA ಅಧ್ಯಕ್ಷರಾಗಿ ಕಂದಾಯ ಸಚಿವ ಆರ್.ಅಶೋಕ್ ಸಂಬಂಧಿಯಾದ ಎ.ರವಿ ನೇಮಕಾತಿಯನ್ನು ಪ್ರಶ್ನಿಸಿ ಹೈಕೋರ್ಟ್ಗೆ PIL ಸಲ್ಲಿಕೆಯಾಗಿದೆ. ರವಿ ಅವರಿಗೆ ನಿಗದಿತ ಶೈಕ್ಷಣಿಕ ಅರ್ಹತೆ ಇಲ್ಲದಿದ್ದರೂ ನೇಮಕ ಮಾಡಲಾಗಿದೆ ಎಂದು ಆರೋಪಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಇನ್ನು, ಪಿಐಎಲ್ ವಿಚಾರಣೆಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ಆಕ್ಷೇಪಣೆ ಸಲ್ಲಿಸಲು ಕಡೆಯ ಅವಕಾಶ ನೀಡಿದೆ. ಜೊತೆಗೆ, ನೇಮಕಾತಿ ಸಂಬಂಧಿಸಿದ ಕಡತ ಹಾಜರುಪಡಿಸಲು ಸೂಚನೆ ನೀಡಿದೆ. ಸದ್ಯ, ಹೈಕೋರ್ಟ್ ವಿಚಾರಣೆಯನ್ನು ಏಪ್ರಿಲ್ 12ಕ್ಕೆ ಮುಂದೂಡಿದೆ.
KIADB ಭೂ ಡಿನೋಟಿಫಿಕೇಷನ್ ಪ್ರಕರಣ: ಸಿಎಂ ಬಿಎಸ್‌ವೈಗೆ ಎದುರಾಯ್ತು ಸಂಕಷ್ಟ
ಅತ್ತ, ಡಿನೋಟಿಫಿಕೇಷನ್ ಭೂತ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಮತ್ತೊಮ್ಮೆ ಕಾಡಲು ಮುಂದಾಗಿದೆ. ಇದೀಗ, ಇದೇ ವಿಚಾರದಲ್ಲಿ ಸಿಎಂ ಬಿಎಸ್‌ವೈ ಹಾಗೂ ಬಿಜೆಪಿ ನಾಯಕ ಕಟ್ಟಾ ಸುಬ್ರಹ್ಮಣ್ಯನಾಯ್ಡುಗೆ ಸಂಕಷ್ಟ ಎದುರಾಗಿದೆ. ಹೌದು, ಕೆಐಎಡಿಬಿ ಭೂ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್‌ನಿಂದ ಕೈಬಿಟ್ಟ ಲೋಕಾಯುಕ್ತ ಕೋರ್ಟ್ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಜೊತೆಗೆ, ಚಾರ್ಜ್‌ಶೀಟ್ ಆಧರಿಸಿ ಕ್ರಮ ಜರುಗಿಸುವಂತೆ ಹೈಕೋರ್ಟ್‌ನಿಂದ ಆದೇಶ ಹೊರಬಿದ್ದಿದೆ.
ಏನಿದು ಪ್ರಕರಣ?
ಬೆಂಗಳೂರು ಉತ್ತರ ಜಾಲ ಹೋಬಳಿಯ ಹೂವಿನಾಯಕಹಳ್ಳಿಯಲ್ಲಿ ಕೆಐಎಡಿಬಿ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಲಾಗಿದೆ. ಸುಮಾರು 20 ಎಕರೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಮತ್ತು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯನಾಯ್ಡು ವಿರುದ್ಧ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ್ದರು.
ಇದೀಗ, 2012ರಲ್ಲಿ ಸಲ್ಲಿಸಿದ್ದ ದೋಷಾರೋಪ ಪಟ್ಟಿ ಅನುಸಾರ ಕ್ರಮ ಜರುಗಿಸಲು ಲೋಕಾಯುಕ್ತ ವಿಶೇಷ ಕೋರ್ಟ್‌ಗೆ ಹೈಕೋರ್ಟ್ ಸೂಚನೆ ನೀಡಿದೆ. ಹೈಕೋರ್ಟ್ ನ್ಯಾ.ಜಾನ್ ಮೈಕೆಲ್ ಕುನ್ಹಾರವರಿದ್ದ ಪೀಠದಿಂದ ಆದೇಶ ಹೊರಬಿದ್ದಿದೆ.
ಇದನ್ನೂ ಓದಿ: ಐ ಆಮ್ ಸಾರಿ ಅಂಕಲ್ -ಮನೆ ಮಾಲೀಕರಿಗೆ ಫೋನ್ ಮಾಡಿ ಕ್ಷಮೆ ಕೇಳಿದ್ದರಂತೆ ‘ಸಿಡಿ ಲೇಡಿ’!