ವಿಜಯನಗರ ಪ್ರತ್ಯೇಕ ಜಿಲ್ಲೆ ರಚನೆ ಪ್ರಶ್ನಿಸಿ ಹೈಕೋರ್ಟ್ಗೆ PIL ಸಲ್ಲಿಕೆ
ವಿಜಯನಗರ ಪ್ರತ್ಯೇಕ ಜಿಲ್ಲೆ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ಗೆ PIL ಸಲ್ಲಿಕೆಯಾಗಿದೆ. ಪ್ರತ್ಯೇಕ ಜಿಲ್ಲೆ ರಚನೆ ಪ್ರಶ್ನಿಸಿ ಹೈಕೋರ್ಟ್ಗೆ PIL ಸಲ್ಲಿಸಲಾಗಿದೆ. Vijayanagar
ಬೆಂಗಳೂರು: ವಿಜಯನಗರ ಪ್ರತ್ಯೇಕ ಜಿಲ್ಲೆ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ಗೆ PIL ಸಲ್ಲಿಕೆಯಾಗಿದೆ. ಪ್ರತ್ಯೇಕ ಜಿಲ್ಲೆ ರಚನೆ ಪ್ರಶ್ನಿಸಿ ಹೈಕೋರ್ಟ್ಗೆ PIL ಸಲ್ಲಿಸಲಾಗಿದೆ. ಬಳ್ಳಾರಿ ಮೂಲದ ಎರೀಸ್ವಾಮಿ ಎಂಬುವವರಿಂದ PIL ಸಲ್ಲಿಸಲಾಗಿದೆ. ನೂತನ ಜಿಲ್ಲೆಯ ರಚನೆ ಕುರಿತು ರಾಜ್ಯ ಸರ್ಕಾರ ಅಧಿಸೂಚನೆ ಪ್ರಕಟಿಸಿದ ಬೆನ್ನಲ್ಲೇ ಕೋರ್ಟ್ಗೆ PIL ಸಲ್ಲಿಕೆಯಾಗಿದೆ.
ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆಯನ್ನು ರಾಜ್ಯ ಸರ್ಕಾರ ಘೋಷಿಸಿತ್ತು. ಈ ಸಂಬಂಧ, ಫೆ.8ರಂದು ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಲಾಗಿತ್ತು. ಬಳ್ಳಾರಿ ಜಿಲ್ಲೆಯ ಸರಹದ್ದುಗಳನ್ನು ಮಾರ್ಪಡಿಸಿ ನೂತನ ವಿಜಯನಗರ ಜಿಲ್ಲೆಯನ್ನು ಅಸ್ತಿತ್ವಕ್ಕೆ ತರಲಾಗಿದೆ. ನೂತನ ವಿಜಯನಗರ ಜಿಲ್ಲೆಯ ಕೇಂದ್ರ ಸ್ಥಾನ ಹೊಸಪೇಟೆ ಆಗಿರಲಿದೆ.
ವಿಜಯನಗರ ಜಿಲ್ಲೆಯಲ್ಲಿ ಒಟ್ಟು 6 ತಾಲೂಕುಗಳು ಇರಲಿದೆ ಎಂದು ಸರ್ಕಾರ ಅಧಿಸೂಚನೆಯಲ್ಲಿ ಘೋಷಿಸಿತ್ತು. ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನಹಡಗಲಿ ಮತ್ತು ಹರಪನಹಳ್ಳಿ ತಾಲ್ಲೂಕುಗಳು ನೂತನ ಜಿಲ್ಲೆಯ ಭಾಗವಾಗಿದೆ.
ಇಷ್ಟು ದಿನ ಈ ತಾಲೂಕುಗಳು ಬಳ್ಳಾರಿ ಜಿಲ್ಲೆಯ ಭಾಗವಾಗಿದ್ದವು. ಮುಂದಿನ ದಿನಗಳಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಬಳ್ಳಾರಿ, ಕುರುಗೋಡು, ಸಿರಗುಪ್ಪ, ಕಂಪ್ಲಿ ಮತ್ತು ಸಂಡೂರು ತಾಲ್ಲೂಕುಗಳು ಮಾತ್ರ ಉಳಿಯುತ್ತವೆ.
ಅಸ್ತಿತ್ವಕ್ಕೆ ಬಂತು ವಿಜಯನಗರ ಜಿಲ್ಲೆ, ಬಳ್ಳಾರಿ ವಿಭಜನೆ; ಹೊರಬಿತ್ತು ಕರ್ನಾಟಕ ಸರ್ಕಾರದ ಅಧಿಸೂಚನೆ