ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ವಿರೋಧಿಸಿ ಹೈಕೋರ್ಟ್ಗೆ ಸಲ್ಲಿಕೆಯಾಗಿರುವ ಕೆಲ ಅರ್ಜಿಗಳಿಗೆ ಕರ್ನಾಟಕ ಸರ್ಕಾರ ಬುಧವಾರ ಆಕ್ಷೇಪಣಾ ಪತ್ರ ಸಲ್ಲಿಸಿದೆ. ಗೋ ಸಂರಕ್ಷಣೆಯು ರಾಜ್ಯಪಟ್ಟಿಯಲ್ಲಿ ಬರುವ ವಿಚಾರವಾಗಿದೆ. ಈ ಕುರಿತು ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರಕ್ಕೆ ಅಧಿಕಾರವಿದೆ. ಅದನ್ನು ಬಳಸಿಕೊಂಡು ಕಾನೂನು ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಿತು.
ಕಳೆದ 10 ವರ್ಷಗಳಲ್ಲಿ ಜಾನುವಾರುಗಳ ಸಂಖ್ಯೆ ಜಾಸ್ತಿ ಆಗಿದೆ. ಜಾನುವಾರು ದೇಶದ ರೈತರ ಆದಾಯದ ಮೂಲವೂ ಹೌದು. ಗೋಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಗುಜರಾತ್, ಮಹಾರಾಷ್ಟ್ರದಲ್ಲಿ ನ್ಯಾಯಾಲಯಗಳಿಗೆ ಅರ್ಜಿಗಳು ಸಲ್ಲಿಕೆಯಾಗಿದ್ದವು. ಅಲ್ಲಿನ ಸಾಂವಿಧಾನಿಕ ಪೀಠಗಳು ಇಂಥ ಅರ್ಜಿಗಳನ್ನು ತಿರಸ್ಕರಿಸಿ, ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿದ್ದವು. ಈ 2 ತೀರ್ಪುಗಳ ಆಧಾರದಲ್ಲಿ ಇಲ್ಲಿ ಸಲ್ಲಿಕೆಯಾಗಿರುವ ರಿಟ್ ಅರ್ಜಿಗಳನ್ನು ತಿರಸ್ಕರಿಸಬೇಕು ಎಂದು ರಾಜ್ಯ ಸರ್ಕಾರವು ಆಕ್ಷೇಪಣಾ ಪತ್ರ ಸಲ್ಲಿಸಿದೆ ಎಂದು ರಾಜ್ಯ ಸರ್ಕಾರವು ಮಾಧ್ಯಮ ಪ್ರಕಟಣೆಯಲ್ಲಿ ಹೇಳಿದೆ.
ಏಕೆ ವಿರೋಧ?
ಗೋಹತ್ಯೆ ನಿಷೇಧ ಕಾಯ್ದೆಯ ತಿದ್ದುಪಡಿ ಕಾನೂನು ಜಾರಿಯಾದ ನಂತರ ವಯಸ್ಸಾದ ಜಾನುವಾರುಗಳನ್ನು ಸಾಕಲು ರೈತರು ಕಷ್ಟಪಡುವಂತೆ ಆಗಿದೆ ಎಂದು ಹಲವರು ದೂರಿದ್ದರು. ಜಾನುವಾರು ಮಾರಲಾಗದೆ ಪರದಾಡುತ್ತಿರುವ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ನಮ್ಮ ಬೆಳೆಯ ಬದಲು, ಸರ್ಕಾರ ಹಸುಕರುಗಳನ್ನು ಖರೀದಿಸಲಿ ಎಂದು ಆಗ್ರಹಿಸಿದ್ದರು.
(PIL in Karnataka High Court Against Anti Cow Slaughter Bill)
ಇದನ್ನೂ ಓದಿ: ನಾವು ಬೀಫ್ ರಪ್ತು ಮಾಡಿದರೆ ಲಾಭ ಆಗುತ್ತಲ್ವಾ: ಗೋಹತ್ಯೆ ಬಗ್ಗೆ ವಿಧಾನಸಭೆಯಲ್ಲಿ ರಮೇಶ್ ಕುಮಾರ್ ಮಾತು
ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾನೂನು ಜಾರಿ ಮಾಡುವಾಗ ಮಾರ್ಗಸೂಚಿ ಪಾಲನೆಯಲ್ಲಿ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ಖಡಕ್ ಸೂಚನೆ
Published On - 8:20 pm, Wed, 9 June 21